ಗದಗ, ಎಪ್ರಿಲ್ 30: (POSH) act ಉದ್ದೇಶ ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಾಗುವ ದೌರ್ಜನ್ಯ ತಡೆ ಹಾಗೂ ವರದಕ್ಷಿಣೆ ಪದ್ಧತಿಯ ನಿರ್ಮೂಲನೆಯ ಕುರಿತು ಜಾಗೃತಿ ಮೂಡಿಸುವ ವಿಶೇಷ ಕಾರ್ಯಕ್ರಮದಲ್ಲಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ನಡುವೆ ಸೌಹಾರ್ದಯುತ ವಾತಾವರಣ ಇರಬೇಕು, ಲಿಂಗ ತಾರತಮ್ಯ ಹಾಗೂ ವರದಕ್ಷಿಣೆ ಮುಕ್ತ ಸಮಾಜ ನಿರ್ಮಾಣಆಗಲಿಕೆ ನಾವೆಲ್ಲರೂ ಕೈ ಜೋಡಿಸಬೇಕೆಂದು ಅಂದಾಗ ಮಾತ್ರ ವರದಕ್ಷಿಣೆ ಮುಕ್ತ ಸಮಾಜ ಆಗಲಿಕೆ ಸಾಧ್ಯ ಎಂದು ಗೌರವಾನ್ವಿತ ದಿವಾನಿ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ಸಿ ಎಸ್. ಶಿವನಗೌಡರ ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಜಿಲ್ಲಾ ಕಾನೂನು ಸೇವೆಗಳ ಪ್ರಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರುಗಳ ಸಹಯೋಗದಲ್ಲಿ ಜರುಗಿದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ(ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ)ಅಧಿನಿಯಮ 2013ರ ಕಾಯ್ದೆ" ಅನುಷ್ಠಾನಕ್ಕೆ ಸಂಬಂಧಿಸಿದಂತೆ ಹಾಗೂ ವರದಕ್ಷಿಣೆ ನಿಷೇಧ ಕಾಯ್ದೆ 1961, ಹಾಗೂ ವಧು-ವರದಕ್ಷಿಣೆ ನಿಷೇಧ ತಡೆಗಟ್ಟುವ ಕರ್ನಾಟಕ ನಿಯಮಗಳು 2004ರ ಹಿನ್ನೆಲೆಯಲ್ಲಿ ವರದಕ್ಷಿಣೆ ಪದ್ಧತಿಯನ್ನು ತಡೆಗಟ್ಟುವ ಕುರಿತು ಒಂದು ದಿನದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.
ಕೆಲಸದ ಸ್ಥಳದಲ್ಲಿ ಮಹಿಳೆಯರು ಜಾಗೃತರಾಗಿರಬೇಕು ಕಚೇರಿಯ ಸಿಬ್ಬಂದಿಗಳು ಮಹಿಳೆಯರ ಜೊತೆ ಮನೋಭಾವನೆಯಿಂದ ಇರಬೇಕು ಕೆಲಸ ಮಾಡುವ ಸ್ಥಳಗಳಲ್ಲಿ ಮಹಿಳೆಯರಿಗೆ ಬಡ್ತಿ ಅಥವಾ ಇತರ ಆಮಿಷಗಳನ್ನು ಒಡ್ಡಿ ಅವರನ್ನು ದುರುಪಯೋಗಪಡಿಸಿಕೊಳ್ಳುವುದು ಕಾನೂನಿನ ಅಡಿಯಲ್ಲಿ ಗಂಭೀರ ಅಪರಾಧ ಎಂದು ಎಚ್ಚರಿಸಿದರು ಯಾವುದೇ ತಪ್ಪು ಮಾಡದಿದ್ದಲ್ಲಿ ಮಹಿಳೆಯರು ಭಯಪಡುವ ಅಗತ್ಯವಿಲ್ಲ ಎಂದು ಅವರು ಧೈರ್ಯ ತುಂಬಿದರು.
ತಾಲೂಕು ಮಟ್ಟ ಮತ್ತು ಗ್ರಾಮ ಮಟ್ಟದ ಕಚೇರಿಗಳಲ್ಲಿ ಒಬ್ಬ ನೂಡಲ್ ಅಧಿಕಾರಿಯನ್ನು ನೇಮಿಸಬೇಕು, ಕೇವಲ ದ್ವೇಷ ಅಥವಾ ವೈಯಕ್ತಿಕ ಕಾರಣಗಳಿಗಾಗಿ ಅಧಿಕಾರಿಗಳ ಮೇಲೆ ಸುಳ್ಳು ದೂರು ನೀಡುವುದು ಸರಿಯಲ್ಲ ಸುಳ್ಳು ದೂರು ನೀಡುವುದು ಸಾಬೀತಾದಲ್ಲಿ ದೂರುದಾರರ ಮೇಲೆಯೂ ಕಾನೂನು ಕ್ರಮ ಕೈಗೊಳ್ಳಲು ಅವಕಾಶವಿದೆ ಎಂದು ಸ್ಪಷ್ಟಪಡಿಸಿದರು.
ಕಚೇರಿಯಲ್ಲಿ ಮಹಿಳೆಯರ ಮೇಲೆ ಅಧಿಕಾರಿಗಳು ಕೆಲಸ ಕೊಡಿಸುವ ನಿಟ್ಟಿನಲ್ಲಿ ಅಸಭ್ಯ ವರ್ತನೆಯಿಂದ ನಡೆದುಕೊಳ್ಳಬಾರದು ಕಚೇರಿಯ ಕೆಲಸಗಳು ಶಿಸ್ತಿನಿಂದ ನಡೆಯಲು ಹಿರಿಯ ಅಧಿಕಾರಿಗಳು ನೀಡುವ ಸೂಚನೆಗಳನ್ನು ದೌರ್ಜನ್ಯ ಎಂದು ತಪ್ಪಾಗಿ ಅರ್ಥೈಸಬಾರದು ಎಂದು ಅವರು ಕಿವಿಮಾತು ಹೇಳಿದರು.
ವರದಕ್ಷಿಣೆ ಎಂಬ ಸಾಮಾಜಿಕ ಪಿಡುಗನ್ನು ಹೋಗಲಾಡಿಸುವುದು ನಮ್ಮ ಕರ್ತವ್ಯವಾಗಿದೆ ವರದಕ್ಷಿಣೆ ನೀಡುವುದು ಮತ್ತು ಪಡೆಯುವುದು ಎರಡೂ ಅಪರಾಧ ಸಮಾಜದ ವಿವಿಧ ಹಂತಗಳಲ್ಲಿ ಇಂದಿಗೂ ಈ ಪದ್ಧತಿ ಜೀವಂತವಾಗಿದ್ದು, ಇದನ್ನು ಬೇರುಸಹಿತ ಕಿತ್ತೆಸೆಯಲು ಪ್ರತಿಯೊಬ್ಬರೂ ಕೈಜೋಡಿಸಬೇಕು, ಸಾರ್ವಜನಿಕ ಸಂಪರ್ಕದಲ್ಲಿರುವ ಇಲಾಖೆಯ ಸಿಬ್ಬಂದಿಗಳು ಜನಸಾಮಾನ್ಯರಲ್ಲಿ ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಕರೆ ನೀಡಿದರು.
ಕಚೇರಿಗಳಲ್ಲಿ ಮಹಿಳೆಯರ ಗೌರವ ರಕ್ಷಣೆಗೆ ಮೊದಲ ಆದ್ಯತೆ ಅಧಿಕಾರಿಗಳು ಮತ್ತು ಸಿಬ್ಬಂದಿ ನಡುವೆ ಸಾಮರಸ್ಯದ ಅಗತ್ಯ ಸುಳ್ಳು ದೂರು ನೀಡುವವರ ವಿರುದ್ಧವೂ ಕಠಿಣ ಕ್ರಮದ ಎಚ್ಚರಿಕೆ ವರದಕ್ಷಿಣೆ ಮುಕ್ತ ಸಮಾಜ ನಿರ್ಮಾಣ ಆಗಲಿಕ್ಕೆ ಜಾಗೃತಿಯೇ ಮದ್ದು ಎಂದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ. ಆರ್. ಮುಂಡರಗಿ ಮಾತನಾಡಿ ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲಾಗುತ್ತಿರುವ ಶೋಷಣೆ ಮತ್ತು ಲಿಂಗ ತಾರತಮ್ಯವನ್ನು ತಡೆಗಟ್ಟಲು ಜಿಲ್ಲಾ ಹಾಗೂ ಸ್ಥಳೀಯ ಮಟ್ಟದ ಸಮಿತಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಹೇಳಿದರು.
ಹದಿಹರೆಯದವರ ರಕ್ಷಣೆ ನಮ್ಮ ಮೊದಲ ಆದ್ಯತೆ
ಇಂದಿನ ದಿನಗಳಲ್ಲಿ ಹದಿಹರೆಯದ ಹೆಣ್ಣು ಮತ್ತು ಗಂಡು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, "ಹದಿಹರೆಯದ ವಯಸ್ಸು ಬಹಳ ಸೂಕ್ಷ್ಮವಾದುದು. ಈ ಹಂತದಲ್ಲಿ ಮಕ್ಕಳು ದಾರಿ ತಪ್ಪದಂತೆ ಮತ್ತು ಶೋಷಣೆಗೆ ಒಳಗಾಗದಂತೆ ನೋಡಿಕೊಳ್ಳುವುದು ಪೋಷಕರು ಹಾಗೂ ಸಮಾಜದ ಜವಾಬ್ದಾರಿ" ಎಂದರು.
ಕಾನೂನುಗಳ ಬಗ್ಗೆ ಸಮಗ್ರ ಅರಿವು ಮೂಡಿಸುವ ಮೂಲಕ ಇಂತಹ ಘಟನೆಗಳನ್ನು ತಡೆಯಲು ಸಾಧ್ಯವಿದೆ ಎಂದು ಅವರು ಪ್ರತಿಪಾದಿಸಿದರು.
ಗ್ರಾಮೀಣ ಭಾಗದಲ್ಲಿ ವರದಕ್ಷಿಣೆ ಪಿಡುಗು ಮತ್ತು ವರದಕ್ಷಿಣೆ ಪದ್ಧತಿಯು ಇಂದಿಗೂ ಸಮಾಜಕ್ಕೆ ದೊಡ್ಡ ಪಿಡುಗಾಗಿ ಉಳಿದಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಇದರ ಪ್ರಭಾವ ಹೆಚ್ಚಿದೆ, ಈ ಪಿಡುಗನ್ನು ಹೋಗಲಾಡಿಸಲು ಕೇವಲ ಕಾನೂನು ಸಾಲದು, ಬದಲಾಗಿ ಜನರ ಆಲೋಚನಾ ಶೈಲಿಯಲ್ಲಿ ಬದಲಾವಣೆ ಬರಬೇಕು ಹಾಗೂ ಅಧಿಕಾರಿಗಳು ಈ ಬಗ್ಗೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ಸೂಚಿಸಿದರು.
ಜಿಲ್ಲೆಯಲ್ಲಿ ಲಿಂಗ ತಾರತಮ್ಯ ಮತ್ತು ದೌರ್ಜನ್ಯ ತಡೆಗೆ ಆಂತರಿಕ ಸಮಿತಿ (Internal Committee) ಹಾಗೂ ಸ್ಥಳೀಯ ಸಮಿತಿಗಳ (Local Committee) ಪಾತ್ರ ಬಹಳ ದೊಡ್ಡದಿದೆ ಜಿಲ್ಲೆಯಲ್ಲಿ ಒಟ್ಟು 839 ಸಮಿತಿಗಳನ್ನು ರಚಿಸುವ ಗುರಿ ಹೊಂದಲಾಗಿದೆ ಪ್ರಸ್ತುತ 731 ಸಮಿತಿಗಳು ಈಗಾಗಲೇ ಅಸ್ತಿತ್ವಕ್ಕೆ ಬಂದಿವೆ ಬಾಕಿ ಉಳಿದಿರುವ ಸಮಿತಿಗಳನ್ನು ಶೀಘ್ರದಲ್ಲೇ ರಚಿಸಿ, ಎಲ್ಲ ಸಮಿತಿಗಳು ಅತ್ಯಂತ ಸಕ್ರಿಯವಾಗಿ (Active) ಕೆಲಸ ಮಾಡುವಂತೆ ನೋಡಿಕೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಪ್ರಾರ್ಥನಾ ಗೀತೆಯನ್ನು ಸುವರ್ಣ ಪತ್ತಾರ ಪ್ರಸ್ತುತ ಪಡಿಸಿದರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿಗಳು ಶ್ರೀಮತಿ ರಾಧಾ.ಜಿ. ಮಣ್ಣೂರು, ಪ್ರಾಸ್ತವಿಕವಾಗಿ ಮಾತನಾಡಿದರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಶ್ರೀಮತಿ ಜಯಶ್ರೀ.ಆರ್. ಸರ್ವರನ್ನು ಸ್ವಾಗತಿಸಿದರು, ವಿಜಯಲಕ್ಷ್ಮಿ ಗುರುಬಸವನಗೌಡರ ಕಾರ್ಯಕ್ರಮವನ್ನು ನಿರೂಪಿಸಿ ಪ್ರಸ್ತಾವನೆ ಭೋದಿಸಿ ವಂದಿಸಿದರು.
ಈ ಕಾರ್ಯಕ್ರಮದಲ್ಲಿ ಡಿ.ವೈ.ಎಸ್.ಪಿ ಮಹಾಂತೇಶ ಸಜ್ಜನ, ಯುನಿಸೆಫ್ (UNICEF) ಮಕ್ಕಳ ಸಂರಕ್ಷಣಾ ಘಟಕದ ಪ್ರಾದೇಶಿಕ ಸಂಯೋಜಕರಾದ ಹರೀಶ್ ಜೋಗಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಾಯಕ ಕಾನೂನು ನೆರವು ಅಭಿಕ್ಷಕರಾದ ಶ್ರೀಮತಿ ಮಂಜುಳಾ ಸ್ವಾಮಿ, ಜಿಲ್ಲಾ ಮತ್ತು ತಾಲೂಕು ಮಟ್ಟದ ಪೊಲೀಸ್ ಇಲಾಖೆಯ ಸಿಬ್ಬಂದಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.