Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಕರೆ

ಬಳ್ಳಾರಿ ಜೂ. 18: ವಿದ್ಯಾರ್ಥಿ ಜೀವನ ಬಂಗಾರದ ದಿನಗಳ ಜೀವನ, ನೀವು ನಿಮ್ಮ ಪದವಿ ಮುಗಿಸಿಕೊಂಡು ಇನ್ನೂ ಉನ್ನತ ವಿದ್ಯಾಭ್ಯಾಸ ಮಾಡಿ ಒಳ್ಳೆಯ ಉದ್ಯೋಗ ಪಡೆದು ನಿಮ್ಮ ತಾಯಿ ತಂದೆಗಳಿಗೆ, ವಿದ್ಯೆ ಕಲಿಸಿದ  ಸಂಸ್ಥೆಗೆ ಹೆಸರು ತರುವಂತಹ ಈ ದೇಶದ ಸತ್ಪ್ರಜೆಗಳಾಗಿ ಬಾಳಿರಿ ಎಂದು ಬಳ್ಳಾರಿ ಮಹಾನಗರ ಪಾಲಿಕೆಯ ಪೂಜ್ಯ ಮಹಾಪೌರರಾದ  ಪಿ ಗಾದೆಪ್ಪ ಅವರು ಅಭಿಪ್ರಾಯ ಪಟ್ಟರು. ಶನಿವಾರ ನಗರದ ಜೋಳದರಾಶಿ ದೊಡ್ಡನಗೌಡ ರಂಗ ಮಂದಿರದಲ್ಲಿ ಆಯೋಜಿಸಲಾಗಿದ್ದ ಲಾಡ್ರ್ಸ್ ವಿದ್ಯಾಸಂಸ್ಥೆಯ ಇಂಡೋ-ಅಮೆರಿಕನ್ ಪದವಿ ಕಾಲೇಜು ವಿದ್ಯಾರ್ಥಿಗಳ ಬಿಳ್ಕೋಡಿಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. 
ಆರಂಭದಲ್ಲಿ ಲಾಡ್ರ್ಸ್ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಪಿ ಎಚ್ ನಾಯ್ಡು ಅವರು ಪ್ರಾಸ್ತಾವಿಕ ನುಡಿಗಳನ್ನು ಆಡುತ್ತಾ ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಹಾಗೂ ತಂತ್ರಜ್ಞಾನದ ಯುಗದಲ್ಲಿ ಇಂದು AIಯ (ಕೃತಕ ಬುದ್ಧಿಮತ್ತೆ) ಅವಶ್ಯಕತೆ ತುಂಬಾ ಇದ್ದು ಇದರ ಜ್ಞಾನವನ್ನು ವಿದ್ಯಾರ್ಥಿಗಳು ತಿಳಿದುಕೊಂಡು ಇಂದಿನ AI ತಂತ್ರಜ್ಞಾನಕ್ಕೆ  ಹೊಂದಿಕೊಳ್ಳಬೇಕು ಎಂದು ಕರೆಕೊಟ್ಟು ಮುಂದಿನ ದಿನಗಳಲ್ಲಿ ನಿಮ್ಮ ಭವಿಷ್ಯ ಸುಖಮಯವಾಗಿರಲಿ ಎಂದು ಆಶಿಸಿದರು. 
ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಬಳ್ಳಾರಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಎನ್ ನವೀನ ಕುಮಾರ ಅವರು ಮಾತನಾಡುತ್ತಾ ವಿದ್ಯಾರ್ಥಿಗಳು ಕೇವಲ ಪದವಿಗಳನ್ನು ಪಡೆದು ಸಾಮಾನ್ಯ ಉದ್ಯೋಗಗಳನ್ನು ಮಾಡುವುದರ ಬದಲು I A S , I P S , I F S  ಮುಂತಾದ ಸ್ಪರ್ಧಾತ್ಮಕ ಜಗತ್ತಿನ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕೆಂದು ಕಿವಿ ಮಾತು ಹೇಳಿದರು.
ಸದರಿ ಪದವಿ ಕಾಲೇಜಿನ ಪ್ರಾಚಾರ್ಯರಾದ ಶ್ರೀ ಶೇಕ್ ಸಲೀಮ್  ಬಾಷಾ ಅವರು ಮಾತನಾಡುತ್ತಾ ವಿದ್ಯಾರ್ಥಿಗಳ ಜೊತೆಗಿನ ಸವಿನೆನಪುಗಳನ್ನು ಮೆಲಕು ಹಾಕಿದರು ಮತ್ತು ಶುಭವನ್ನು ಕೋರಿದರು.
ವೇದಿಕೆಯಲ್ಲಿ ಕಾಲೇಜಿನ ಉಪ-ಪ್ರಾಚಾರ್ಯರಾದ ಸುಧೀರ ಕುಮಾರ ಕೆ ಪಿ ಹಾಗೂ ಇಂಡೋ-ಅಮೆರಿಕನ್ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ರಾಜೇಶ ಬಿ.ವಿ ಆಡಳಿತಾಧಿಕಾರಿ ಪಿ ಉದಯ ಭಾಸ್ಕರ ಮತ್ತು  ಪಿ ಆರ್ ಓ ರಾಜ ವಿ ಅವರು ಉಪಸ್ಥಿತರಿದ್ದರು. 
ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಕಾರ್ಯಕ್ರಮದ ನಿರೂಪಣೆ ಹಾಗೂ ವಂದನಾರ್ಪಣೆಯನ್ನು ಬಸವರಾಜ ಅಮಾತಿ ಕನ್ನಡ ಉಪನ್ಯಾಸಕರು ನೆರವೇರಿಸಿದರು, ಪದವಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂಧಿ ಉಪಸ್ಥಿತರಿದ್ದರು. ನಂತರ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ಧೂರಿಯಾಗಿ ಜರುಗಿದವು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ