Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಲ್ಲಿಯವರೆಗೆ ನೋಂದಣಿ ಮಾಡಿದ ಎಸ್ಎಆರ್ ರದ್ದುಪಡಿಸಿ :  ಮಾಜಿ ಸಚಿವ ಶ್ರೀರಾಮುಲು ಆಗ್ರಹ 

ಬಳ್ಳಾರಿ. ಜು. 08: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷದ ಅಣತಿಯಂತೆ  ನಡೆಯುತ್ತಿದೆ ಮನೆಮನೆಗೆ  ಭೇಟಿ ನೀಡಿ ವಿಷಯವನ್ನು ಸಂಗ್ರಹಿಸಿಕೊಳ್ಳಬೇಕಾದ ಬಿ ಎಲ್ ಓ ಗಳು ಮಸೀದಿ ದರ್ಗಾ ಮತ್ತು ಶಾದಿ ಮಾಲ್ ಗಳಲ್ಲಿ ಕುಳಿತು  ಸರ್ಕಾರದ ಆದೇಶಕ್ಕೆ ತಲೆಬಾಗಿ ಕುರಿಗಳಂತೆ ಕೆಲಸ ಮಾಡುತ್ತಿದ್ದಾರೆ ಕೆಲಸ ಮಾಡುತ್ತಿದ್ದಾರೆ ಇಷ್ಟು ದಿನ ನಡೆದ ಎಸ್ಐಆರ್ ಅನ್ನು ರದ್ದುಪಡಿಸಿ ಅಕ್ರಮ ಎಸಿಗಿರುವ  ಬಿ ಎಲ್ ಓ ಗಳನ್ನೂ ಬಂಧಿಸಬೇಕು ಎಂದು ಮಾಜಿ ಸಚಿವ ಬಿ ಶ್ರೀರಾಮುಲು ಆಗ್ರಹಿಸಿದರು.
 ಅವರು ಇಂದು ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿ, ಚುನಾವಣಾ ಆಯೋಗದ ಪ್ರಕಾರ ಅದರ ನಿಯಂಗಳ ಪ್ರಕಾರ  ನಡೆಯಬೇಕಾದ ಎಸ್ಐಆರ್ ನಿಯಮಗಳನ್ನು ಗಾಳಿಗೆ ತೂರಿ ಬಿ ಎಲ್ ಓ ಗಳು ಒಂದೇ ಕಡೆ ಕುಳಿತು ದನ ಕುರಿಗಳಂತೆ ಜನರನ್ನು ಸೇರಿಸಿ ತಮಗೆ ಬೇಕಾದ ರೀತಿಯಲ್ಲಿ ಮಾಹಿತಿಯನ್ನು ಸಂಗ್ರಹಿಸಿಕೊಳ್ಳುತ್ತಿದ್ದಾರೆ ರಾಜ್ಯದಲ್ಲಿ ಎಸ್ಐಆರ್ ನಡೆಯುತ್ತಿದೆಯೋ ಅದನ್ನು ನಡೆಸುತ್ತಿರುವುದು ಆಯೋಗವ ಅಥವಾ ರಾಜ್ಯ ಸರ್ಕಾರವ ಎಂಬುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ಇದು ಸಿಎಂ ಡಿಕೆ ಶಿವಕುಮಾರ್ ಅವರು ಮೂಗಿನ ನೇರಕ್ಕೆ ನಡೆಸಿ ಎಸ್ಐಆರ್ ಪ್ರಕ್ರಿಯೆಯನ್ನೇ ಕುಲಗೆಡಿಸಿದ್ದಾರೆ ಎಂದು ಆರೋಪಿಸಿದರು.
 ಎಸ್ಐಆರ್ ಪ್ರಕ್ರಿಯೆಯನ್ನು ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರ್ಕಾರ ವೋಟ್ ಬ್ಯಾಂಕ್ ರೀತಿಯಲ್ಲಿ ರಾಜಕೀಯ ಮಾಡುತ್ತಿದೆ ಪಶ್ಚಿಮ ಬಂಗಾಳ ಮತ್ತು ಬಿಹಾರದ ರೀತಿಯಲ್ಲಿ ಚುನಾವಣಾ ಆಯೋಗದ ನಿಗಾವಣೆಯಲ್ಲಿ ನಿವೃತ್ತ ಸುಪ್ರೀಂ ಕೋರ್ಟ್ ಅವರ ಮೇಲ್ವಿಚಾರಣೆಯಲ್ಲಿ ನಡೆಯಬೇಕು ಅದು ಬಿಟ್ಟು ವಿಳಾಸ, ಮನೆ. ಮತದಾರರ ಪಟ್ಟಿ, ಚುನಾವಣೆ ಗುರಿತಿನ ಚೀಟಿ ಇಲ್ಲದವರ ಹೆಸ್ರುಗಳನ್ನು  ಸೇರಿಸಲಾಗುತ್ತಿದೆ ಈ ಮೂಲಕ ಚುನಾವಣಾ ಅಕ್ರಮಗಳನ್ನು ನಡೆಸಿ  ವಾಮ ಮಾರ್ಗದಲ್ಲಿ ಅಧಿಕಾರ ಪಡೆಯಬೇಕೆಂದು ಹವಣಿಸುತ್ತಿದೆ ಇದು ಅತ್ಯಂತ ಖಂಡನೀಯ ವಿಷಯ  ಎಂದರು.
 ಈ ಪತ್ರಿಕಾಗೋಷ್ಠಿಯಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಮೋದ್ಕರ್ ಶ್ರೀನಿವಾಸ್ ಕೆ ಹನುಮಂತಪ್ಪ ಗುಡಿಗಂಟೆ ಹನುಮಂತಪ್ಪ ಅಶೋಕ್ ಬಿಜೆಪಿ ಮುಖಂಡರಾದ ಹೋಬಳೇಶ್ ಸಿದ್ದೇಶ್ ಪೆಟ್ರೋಲ್ ತಿಮ್ಮಪ್ಪ ಪಾಲಣ್ಣ ಸೇರಿದಂತೆ ಇತರರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ