Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿನಯ ಕುಲಕರ್ಣಿ ಶಾಸಕ ಸ್ಥಾನ ರದ್ದುಗೊಳಿಸಿ: ವಿಧಾನ ಸಭಾಧ್ಯಕ್ಷರಿಗೆ ಕೊರವರ ಪತ್ರ

ಧಾರವಾಡ: ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶಾಸಕ ವಿನಯ ಕುಲಕರ್ಣಿ ಅವರನ್ನು ತಕ್ಷಣವೇ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ಅವರು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪಿನ ಆದೇಶ ಪ್ರತಿ, ಸುಪ್ರೀಂ ಕೋರ್ಟ್ ನಲ್ಲಿ ಥಾಮಸ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪಿನ ಪ್ರತಿಗಳನ್ನು ಪತ್ರದೊಂದಿಗೆ ಲಗತ್ತಿಸಿರುವ ಅವರು, ಕೂಡಲೇ ಶಾಸಕ ವಿನಯ ಕುಲಕರ್ಣಿ ಅವರ ಶಾಸಕ ಸ್ಥಾನ ರದ್ದುಗೊಳಿಸಿ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಗಂಗಾವತಿ ಶಾಸಕ ಜಿ. ಜನಾರ್ದನ ರೆಡ್ಡಿ ಅವರಿಗೆ ಅನ್ವಯವಾದ ನಿಯಮ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರಿಗೂ ಅನ್ವಯಿಸಲಿದೆ ಎಂದು ಜನ ಜಾಗೃತಿ ಸಂಘದ ಅಧ್ಯಕ್ಷ ಕೊರವರ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯವು ಶಾಸಕ ವಿನಯ ಕುಲಕರ್ಣಿ ಅವರಿಗೆ ಶಿಕ್ಷೆ ಪ್ರಕಟಿಸುತ್ತಿದ್ದಂತೆಯೇ ಅವರ ಅನರ್ಹತೆ ಜಾರಿಗೆ ಬರಲಿದೆ. ಆದರೆ, ನ್ಯಾಯಾಲಯದ ತೀರ್ಪಿನ ವಿರುದ್ಧ ಎಂಬಂತೆ ಅವರ ಅಭಿಮಾನಿಗಳು ಧಾರವಾಡದಲ್ಲಿ ಶನಿವಾರ ಶಾಸಕ ವಿನಯ ಕುಲಕರ್ಣಿ ಜನಪ್ರಿಯ ಶಾಸಕರು ಎಂದು ನಮೂದಿಸಿ ನ್ಯಾಯಾಂಗದ ಘನತೆಗೆ ಧಕ್ಕೆ ತಂದಿದ್ದಾರೆ. ಹೀಗಾಗಿ ಸಭಾಧ್ಯಕ್ಷರು ಶಾಸಕ ವಿನಯ ಕುಲಕರ್ಣಿ ಶಾಸಕ ಸ್ಥಾನ ರದ್ದುಗೊಳಿಸಿ ಕ್ಷೇತ್ರವನ್ನು ತೆರವುಗೊಳಿಸಲಾಗಿದೆ ಎಂದು ಜನ ಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ವಿನಂತಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪರಿಸರದ ಸರಪಳಿ ಕೊಂಡಿ ಕಳಚಿದರೆ, ಮನುಷ್ಯರಿಗೆ ಉಳಿಗಾಲವಿಲ್ಲವಚನಗಳಲ್ಲಿನ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಸುಂದರ ಸಮಾಜ ನಿರ್ಮಿಸಬೇಕಿದೆ; ಪ್ರೊ. ಎಫ್.ಡಿ. ಗಡ್ಡಿಗೌಡರಬೆಂಗಳೂರಿನ ಶ್ವಾಸತಾಣಗಳ ಸಂರಕ್ಷಣೆ, ಸಂವರ್ಧನೆಗೆ ಕ್ರಮ: ಈಶ್ವರ ಖಂಡ್ರೆ ಭೂಮಿಯನ್ನು ಎನ್.ಎ. ಆಗಿ ಪರಿವರ್ತಿಸಿ ಮಾರಾಟ ಮಾಡುವ ಹುನ್ನಾರ; ಶ್ರೀ ಕಾಶೀ ಜಗದ್ಗುರುಗಳು ಕಾಯಕಶೀಲ ಪ್ರಶಸ್ತಿಗೆ ಆಯ್ಕೆಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು; ಲಕ್ಷ್ಮೀ ಹೆಬ್ಬಾಳಕರ್2027ರ ವೇಳೆಗೆ ಬಳ್ಳಾರಿ ಜಿಲ್ಲೆಯನ್ನು ಮಲೇರಿಯಾ ಮುಕ್ತವಾಗಿಸಲು ಸಂಕಲ್ಪ ಮಾಡೋಣ: ಡಾ.ಮರಿಯಂಬಿ ವಿ.ಕೆಸರ್ಕಾರ ತಕ್ಷಣವೇ ರೈತರಿಗಾದ ಅನ್ಯಾಯವನ್ನು ಸರಿಪಡಿಸಬೇಕು ; ಪ್ರಜಾ ಪರಿವರ್ತನಾ ವೇದಿಕೆಯ ಸಿ ಆನಂದ್ ಕುಮಾರ್ ಆಗ್ರಹ ಗೋವುಗಳನ್ನು ರಾಷ್ಟ್ರಮಾತಾ ಎಂದು ಘೋಷಿಸಲು  ಮನವಿಗೋವುಗಳನ್ನು ರಾಷ್ಟ್ರಮಾತಾ ಎಂದು ಘೋಷಿಸಲು  ಮನವಿ