ಬಳ್ಳಾರಿ,ಮೇ.೧5: ನೀಟ್ –ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದ್ದು, ಈ ಕೂಡಲೇ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದವರಿಗೆ ನಿದರ್ಶನೀಯ ಶಿಕ್ಷೆ ವಿಧಿಸಬೇಕು ಹಾಗೂ ಎನ್‌ಟಿಎ (ರಾಷ್ಟಿçÃಯ ಪರೀಕ್ಷಾ ಸಂಸ್ಥೆ) ಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಬಳ್ಳಾರಿಯ ಸಂಗಮ್ ಸರ್ಕಲ್ ಹತ್ತಿರ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್‌ಓ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದ ಕೊಪ್ಪ ಮಾತನಾಡಿ, “ಪದೇ ಪದೇ ಮರುಕಳಿಸುತ್ತಿರುವ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕೇವಲ ಒಂದು ಪರೀಕ್ಷಾ ಸಂಸ್ಥೆಯ ವೈಫಲ್ಯವಲ್ಲ; ಇದು ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳ ಬೆವರು ಮತ್ತು ಕನಸುಗಳ ಮೇಲೆ ಎಸಗುತ್ತಿರುವ ಘೋರ ದೌರ್ಜನ್ಯವಾಗಿದೆ. ಕೇವಲ ಮೂರು ವರ್ಷಗಳಲ್ಲಿ ಎರಡನೇ ಬಾರಿಗೆ ವೈದ್ಯಕೀಯ ಶಿಕ್ಷಣದ ಕನಸು ಹೊತ್ತವರ ಆಶೋತ್ತರಗಳನ್ನು ಅತಿ ಹೆಚ್ಚು ಹಣ ನೀಡುವವರಿಗೆ ಹರಾಜು ಹಾಕಲಾಗಿದೆ. ರಾಷ್ಟಿçÃಯ ಪರೀಕ್ಷಾ ಸಂಸ್ಥೆಯು (ಎನ್‌ಟಿಎ) ‘ಕೋಚಿಂಗ್ ಮಾಫಿಯಾ'ದ ಕೈಗೊಂಬೆಯAತೆ ವರ್ತಿಸುತ್ತಿರುವುದು ಇಡೀ ವ್ಯವಸ್ಥೆಯ ಹದಗೆಟ್ಟ ಸ್ಥಿತಿಯನ್ನು ತೋರಿಸುತ್ತಿದೆ. ಈ ವ್ಯವಸ್ಥೆಯು ವಿದ್ಯಾರ್ಥಿಗಳಲ್ಲಿ ಫ್ಫತೀವ್ರ ಆತಂಕ ಮತ್ತು ಹತಾಶೆಯನ್ನು ಮೂಡಿಸಿದೆ. ಕೇವಲ ಕೆಲವರ ಲಾಭಕ್ಕಾಗಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ನಾಶಪಡಿಸುತ್ತಿರುವುದು ಖಂಡನೀಯ” ಎಂದರು.
“ನಮ್ಮ ವಿದ್ಯಾರ್ಥಿಗಳ ಭವಿಷ್ಯದ ಅಡಿಪಾಯವನ್ನೇ ಭ್ರಷ್ಟಾಚಾರ ಮತ್ತು ಆಡಳಿತಾತ್ಮಕ ನಿರ್ಲಕ್ಷö್ಯಕ್ಕೆ ಬಲಿ ನೀಡಲಾಗುತ್ತಿದೆ. ಶಿಕ್ಷಣ ವ್ಯವಸ್ಥೆಯನ್ನು ಮಾರುಕಟ್ಟೆಯನ್ನಾಗಿ ಮಾಡಿಕೊಂಡಿರುವವರಿAದ ಇಂತಹ ಸಮಸ್ಯೆಗಳು ಪದೇ ಪದೇ ಹಲವು ಕೇಂದ್ರೀಕೃತ ಪರೀಕ್ಷೆಗಳಲ್ಲಿ ಮರುಕಳಿಸುತ್ತಿವೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಈಗಾಗಲೇ ನೀಟ್ ಪರೀಕ್ಷೆ ರದ್ದುಗೊಂಡಿರುವುದರಿAದ ಗೋವಾದಲ್ಲಿ ಒಬ್ಬ ನೀಟ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ, ಹಲವಾರು ವಿದ್ಯಾರ್ಥಿಗಳು ಡಾಕ್ಟರ್ ಬಳಿ ಹೋಗಿ ಕೌನ್ಸಿಲಿಂಗ್ ಪಡೆದುಕೊಳ್ಳುತ್ತಿದ್ದಾರೆ. ನಮ್ಮ ವಿದ್ಯಾರ್ಥಿಗಳನ್ನು ಇಂತಹ ಸ್ಥಿತಿಗೆ ಕೇಂದ್ರ ಸರ್ಕಾರ & ಹಾಗೂ ಎನ್‌ಟಿಎ ಎತಳ್ಳಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಕೂಡಲೇ ಎನ್‌ಟಿಎ ಯನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿದರು.
• ಎನ್‌ಟಿಎ ಸಂಸ್ಥೆಯನ್ನು ತಕ್ಷಣವೇ ವಜಾಗೊಳಿಸಿ: ಪಾರದರ್ಶಕವಾಗಿ ಮತ್ತು ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ ವಿಫಲವಾಗಿ ದೇಶದ ನಂಬಿಕೆಯನ್ನು ಕಳೆದುಕೊಂಡಿರುವ ರಾಷ್ಟಿçÃಯ ಪರೀಕ್ಷಾ ಸಂಸ್ಥೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು.
• ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ: ಪ್ರಶ್ನೆ ಪತ್ರಿಕೆ ಸೋರಿಕೆಯ ಹಿಂದೆ ಇರುವ ವ್ಯಕ್ತಿಗಳು ಮತ್ತು ‘ಕೋಚಿಂಗ್ ಮಾಫಿಯಾ'ವನ್ನು ಪತ್ತೆಹಚ್ಚಲು ಉನ್ನತ ಮಟ್ಟದ ಸ್ವತಂತ್ರ ನ್ಯಾಯಾಂಗ ತನಿಖೆಯಾಗಬೇಕು ಹಾಗೂ ತಪ್ಪಿತಸ್ಥರಿಗೆ ನಿದರ್ಶನೀಯ ಶಿಕ್ಷೆಯಾಗಬೇಕು.
• ಸಾರ್ವಜನಿಕ ಶಿಕ್ಷಣದ ರಕ್ಷಣೆ: ಪ್ರವೇಶ ಪರೀಕ್ಷಾ ಪದ್ಧತಿಯನ್ನು ಸಮೂಲಾಗ್ರವಾಗಿ ಬದಲಿಸಿ, ಅದು ಸಾಮಾನ್ಯರಿಗೂ ಲಭ್ಯವಿರುವಂತೆ, ಪಾರದರ್ಶಕವಾಗಿ ಮತ್ತು ಖಾಸಗಿ ವಾಣಿಜ್ಯ ಹಿತಾಸಕ್ತಿಗಳಿಂದ ಮುಕ್ತವಾಗಿರುವಂತೆ ನೋಡಿಕೊಳ್ಳಬೇಕು.
“ಈ ಅನ್ಯಾಯದ ವಿರುದ್ಧ ಹೋರಾಡಲು ಪ್ರತಿಯೊಬ್ಬ ವಿದ್ಯಾರ್ಥಿ ಮತ್ತು ಶಿಕ್ಷಣ ಪ್ರೇಮಿ ಸಮುದಾಯ ಮುಂದೆ ಬರಬೇಕು” ಎಂದು ಅವರು ಇದೇ ಸಂದರ್ಭದಲ್ಲಿ ಕರೆ ನೀಡಿದರು.
ಪ್ರತಿಭಟನೆಯಲ್ಲಿ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಅವರು ಜಿಲ್ಲಾ ಅಧ್ಯಕ್ಷರಾದ ಈರಣ್ಣ, ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ, ಜಿಲ್ಲಾ ಉಪಾಧ್ಯಕ್ಷರು ಎಂ ಶಾಂತಿ, ಜಿಲ್ಲಾ ಖಜಾಂಚಿ ಅನುಪಮ, ರಾಜ್ಯ ಸಮಿತಿ ಸದಸ್ಯರಾದ ಉಮಾ, ಸಮೀರ್ ಹಾಗೂ ಕಾಲೇಜು ವಿದ್ಯಾರ್ಥಿಗಳಾದ ಸುಲೋಚನಾ, ಮಂದಾರ, ಸೌಮ್ಯ, ಹಿಂದು ಭಾಯಿ, ವೈಷ್ಣವಿ, ಸೋಮಶೇಖರ್ ಇನ್ನಿತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.
