ಅಹ್ಮದ್ನಗರ: ಮುಸ್ಲಿಮರನ್ನು ಹುಡುಕಿ ಕೊಲ್ಲುತ್ತೇವೆ ಎಂದು ಹೇಳಿಕೆ ನೀಡಿರುವ ಬಿಜೆಪಿ ಶಾಸಕ ನಿತೀಶ್ ರಾಣೆ ವಿರುದ್ಧ ಪ್ರಕರಣ ದಾಖಲಾಗಿದೆ. ರಾಣೆ ಅವರು ಉದ್ರೇಕಕಾರಿ ಭಾಷಣಗಳನ್ನು ನೀಡಿದ್ದಾರೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಲಾಗಿದೆ.
ಮಹಾರಾಷ್ಟ್ರದ ಅಹ್ಮದ್ನಗರದಲ್ಲಿ ಈ ಘಟನೆ ನಡೆದಿದೆ. ಬಿಜೆಪಿ ಶಾಸಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 302, 153 ಮತ್ತು ಇತರ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಿತೀಶ್ ರಾಣೆ ಅವರು ಕಾರ್ಯಕ್ರಮವೊಂದರಲ್ಲಿ ಮುಸ್ಲಿಮರಿಗೆ ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ ಎಂದು ಟಿವಿ9 ಭಾರತ್ವರ್ಷ್ ವರದಿ ಮಾಡಿದೆ.
ಅವರ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಒಂದು ಪ್ರಕರಣ ಶ್ರೀರಾಮಪುರದಲ್ಲಿ ಮತ್ತು ಇನ್ನೊಂದು ತೋಪಖಾನಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.