Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಚ್ಚತೆಯೊಂದಿಗೆ ದೀಪಾವಳಿ ಹಬ್ಬ ಆಚರಿಸಿ: ಮೊಂಟು ಪಾತರ್

ಬಳ್ಳಾರಿ,ಅ.29 ಈ ಬಾರಿಯ ದೀಪಾವಳಿ ಹಬ್ಬವನ್ನು ಪ್ರತಿಯೊಬ್ಬರೂ ಸ್ವಚ್ಛತೆಯೊಂದಿಗೆ ಆಚರಿಸಬೇಕು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಮೊಂಟು ಪಾತರ್ ಅವರು ಹೇಳಿದರು.

ಕೇಂದ್ರ ಸರ್ಕಾರದ ಸ್ಥಾಯಿ ಸಂಸ್ಥೆಯಾದ ನೆಹರು ಯುವ ಕೇಂದ್ರ, ರಾಷ್ಟಿçÃಯ ಅಂಕಿ ಸಂಖ್ಯೆಗಳ ಇಲಾಖೆ  ಇವರ ಸಹಯೋಗದಲ್ಲಿ ‘ನನ್ನ ಭಾರತದೊಂದಿಗೆ ದೀಪಾವಳಿ ಕಾರ್ಯಕ್ರಮ’ ಅಂಗವಾಗಿ ರಾಷ್ಟಿçÃಯ ಅಂಕಿ ಸಂಖ್ಯೆಗಳ ಇಲಾಖೆಯ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸ್ವಚ್ಛತಾ ಸೇವೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸ್ವಸ್ಥ ಹಾಗೂ ಸುಂದರ ಸಮಾಜ ನಿರ್ಮಾಣದಲ್ಲಿ ಸ್ವಚ್ಛತೆಯ ಪಾತ್ರ ಬಹಳ ಮುಖ್ಯವಾಗಿದೆ. ಹಾಗಾಗಿ ವ್ಯಾಪಾರಸ್ಥರು ಅಂಗಡಿ ಹಾಗೂ ಮಾರುಕಟ್ಟೆಯಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಬೇಕು ಎಂದು ಹೇಳಿದರು.

ನೆಹರೂ ಯುವ ಕೇಂದ್ರದಿAದ ಅಕ್ಟೋಬರ್ 30 ರ ವರೆಗೆ ನನ್ನ ಭಾರತದೊಂದಿಗೆ ದೀಪಾವಳಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಮಾರುಕಟ್ಟೆ, ಆಸ್ಪತ್ರೆ, ಸಾರ್ವಜನಿಕ ಸ್ಥಳಗಳ ಸ್ವಚ್ಛತೆ, ಸಂಚಾರ ಜಾಗೃತಿ ಮೊದಲಾದವು ಅಭಿಯಾನದ ಭಾಗವಾಗಿವೆ. ಪ್ರತಿಯೊಬ್ಬರೂ ಮನೆ, ಸುತ್ತಮುತ್ತಲಿನ ಆವರಣ ಶುಚಿಯಾಗಿ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಸೇವೆಯ ಜಾಗೃತಿ ಜಾಥಾ ನಡೆಸಲಾಯಿತು ಜಾಥಾವು ನಗರದ ರಾಘವೇಂದ್ರ ಟಾಕೀಸ್, ವಡ್ಡರಬಂಡಿ, ಪ್ರಭಾತ್ ಟಾಕೀಸ್ ವ್ಯಾಪ್ತಿಯಲ್ಲಿ ಸಂಚರಿಸಿ ದಿನನಿತ್ಯದ ಕಸ ವಿಲೇವಾರಿ ಕುರಿತು ಅಂಗಡಿಯವರಿಗೆ ಅರಿವು ಮೂಡಿಸಲಾಯಿತು.

ಈ ವೇಳೆ ಅಂಕಿ ಸಂಖ್ಯೆಗಳ ಇಲಾಖೆಯ ಅಧಿಕಾರಿಗಳಾದ ಮನಿಶ್ ಕುಮಾರ, ಮಿತೇಶ  ವಿಶ್ವಕರ್ಮ  ಸೇರಿದಂತೆ ಸ್ವಯಂ ಸೇವಕರು ಹಾಗೂ ಇತರರು ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ