LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಗಣೇಶೋತ್ಸವವನ್ನು ಪರಿಸರ ಸ್ನೇಹಿಯಾಗಿ ಆಚರಿಸುವುದು  ಪ್ರತಿಯೊಬ್ಬರ ಜವಬ್ದಾರಿ : ಜಯಪ್ರಕಾಶ್ ಗುಪ್ತ 

ಬಳ್ಳಾರಿ. ಸೆ. 15:.ಭಕ್ತಿಯೊಂದಿಗೆ ಪ್ರಕೃತಿಯನ್ನು  ಎಲ್ಲರೂ ಗೌರವಿಸಬೇಕು. ಮಣ್ಣಿನ ಗಣೇಶ ಮೂರ್ತಿಗಳನ್ನು ಬಳಸುವ ಮೂಲಕ ಜಲಮೂಲಗಳನ್ನು ಸಂರಕ್ಷಿಸೋಣ ಹಾಗೂ ಪರಿಸರ ಮಾಲಿನ್ಯವನ್ನು ತಡೆಯೋಣ ಎಂದು ಶ್ರೀ ವಾಸವಿ ಎಜ್ಯುಕೇಶನ್ ಟ್ರಸ್ಟ್ ನ ಗೌರವಾನ್ವಿತ ಅಧ್ಯಕ್ಷರಾದ ಜಯಪ್ರಕಾಶ ಜೆ. ಗುಪ್ತರವರು ಕರೆ ನೀಡಿದರು .
ಅವರು ನಗರದ  ಶ್ರೀವಾಸವಿ ವಿದ್ಯಾಲಯದಲ್ಲಿ ನಡೆದ ಗಣೇಶ ಚತುರ್ಥಿಯ ಸಂಭ್ರಮದಲ್ಲಿ ಮುಖ್ಯ  ಅಥಿತಿಗಳಾಗಿ  ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ,
ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಮಹತ್ವ ಮತ್ತು ಮಣ್ಣಿನ ಗಣೇಶ ಮೂರ್ತಿಗಳನ್ನು ಬಳಸುವುದರಿಂದ ಜಲಮಾಲಿನ್ಯವನ್ನು ಕಡಿಮೆ ಮಾಡಬಹುದು ಹಾಗೂ ನಮ್ಮ ಪರಿಸರವನ್ನು ಸಂರಕ್ಷಿಸಬಹುದು. ಹಬ್ಬವನ್ನು ಸಂಭ್ರಮದಿಂದ ಆಚರಿಸುವುದರ ಜೊತೆಗೆ ಪ್ರಕೃತಿಯನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಎಂದರು. A
ವಿದ್ಯಾರ್ಥಿಗಳು ತಮ್ಮ ಕಲ್ಪನಾ ಶಕ್ತಿ ಹಾಗೂ ಕಲಾತ್ಮಕ ಪ್ರತಿಭೆಯಿಂದ ವಿವಿಧ ರೀತಿಯ ಆಕರ್ಷಕ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ನಿರ್ಮಿಸಿ ಪ್ರದರ್ಶಿಸಿದರು. ಈ ವಿನೂತನ ಪ್ರಯತ್ನವು ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಿತು. ಇದರ ಮೂಲಕ ಪ್ರಕೃತಿಯ ಸಂರಕ್ಷಣೆ, ನೀರಿನ ಮೂಲಗಳ ಕಾಳಜಿ ಹಾಗೂ ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಹಬ್ಬಗಳನ್ನು ಆಚರಿಸುವ ಮಹತ್ವವನ್ನು ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲಾಯಿತು.
ಶಿಕ್ಷಣ ಇಲಾಖೆ ಹಾಗೂ ಇಂದಿರಾ ನಗರ ಕ್ಲಸ್ಟರ್ ಮಟ್ಟದ ಕ್ರೀಡಾಕೂಟ 2026-27 ರಲ್ಲಿ ಬಾಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಅತಿಥಿಗಳು ಅಭಿನಂದಿಸಿ, ಪ್ರಮಾಣಪತ್ರ ಹಾಗೂ ಪದಕಗಳನ್ನು ನೀಡಿ ಗೌರವಿಸಲಾಯಿತು.
ಶ್ರೀ ವಾಸವಿ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ವಿಠ್ಠ ಕೃಷ್ಣಕುಮಾರ್, ಕಾರ್ಯದರ್ಶಿಗಳಾದ ಪಿ.ಎನ್. ಸುರೇಶ್  ಮುಖ್ಯೋಪಾಧ್ಯಾಯರಾದ ವಿರೇಶ್ ಯು., ಸಿಬ್ಬಂಧಿ ವರ್ಗ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 
8ನೇ ತರಗತಿ ವಿದ್ಯಾರ್ಥಿನಿಯರು ಪ್ರಾರ್ಥನಾ ಗೀತೆಯನ್ನು ಸಲ್ಲಿಸಿದರು. ಎ. ಸಿ. ಸಿಂಚನ  ಸ್ವಾಗತಿಸಿದರು, ಕಾರ್ತಿಕಾ ವಂದನಾರ್ಪಾಣೆಯನ್ನು ನೆರವೇರಿಸಿದರು ಮನಸ್ವಿನಿ ಕಾರ್ಯಕ್ರಮದ ನಿರೂಪಣೆಯನ್ನು ನಿರ್ವಹಿಸಿದರು. 
ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಸಾಮಾಜಿಕ ಜವಾಬ್ದಾರಿ ಹಾಗೂ ಪರಿಸರ ಸ್ನೇಹಿ ಹಬ್ಬಗಳ ಆಚರಣೆಯ ಕುರಿತು  ಜಾಗೃತಿ ಮೂಡಿಸುವ  ಸಾಂಸ್ಕೃತಿಕ ನೃತ್ಯಗಳನ್ನು ವಿದ್ಯಾರ್ಥಿಗಳು ಪ್ರಸ್ತುತಪಡಿಸಿದರು .

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪರಸ್ಪರ ಸಹಾಯ ಸಹಕಾರದಿಂದ ದೇವಸ್ಥಾನಗಳ ಅಭಿವೃದ್ಧಿ :ಬಾಬಾಸಾಹೇಬ ಪಾಟೀಲ ಶ್ರೀ ವೇಮನ್ ಕೋ-ಆಪ್. ಕ್ರೆಡಿಟ್ ಸೊಸಾಯಿಟಿಗೆ 3.06 ಕೋಟಿ ರೂ. ಲಾಭ : ಸಂತೋಷ ಸೋನವಾಲ್ಕರ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಮತ್ತು ಅಭಿಯಂತರರ ಪಾತ್ರ ಮಹತ್ವಪೂರ್ಣವಾದುದು :  ಡಾ.ಅಲ್ಲಮಪ್ರಭು ಮಹಾಸ್ವಾಮಿಗಳುಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳು ಕಾಲಮಿತಿಯೊಳಗೆ ಜನರಿಗೆ ತಲುಪಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ: ಶಿಕ್ಷಣ ಇಲಾಖೆಯಿಂದ ಅಭಿನಂದನಾ ಪತ್ರಅಭಿಯಂತರರು ಸಮಾಜದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿ : ಶಾಸಕರಾದ ವಿನಯ ಕುಲಕರ್ಣಿಪ್ರಜಾಪ್ರಭುತ್ವ ಉಳಿಸಲು ಯುವಜನತೆ ನಾಯಕತ್ವ ಗುಣ ಬೆಳೆಸಿಕೊಳ್ಳಿ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಕರೆ            ’ವಕ್ರತುಂಡ’ ಚಿತ್ರದ ಧಮಾಕಾ : ’ಜೈ ಗಣೇಶ’ ಟೈಟಲ್ ಟ್ರ್ಯಾಕ್ ಸಾಂಗ್ ಭರ್ಜರಿ ಸದ್ದು  ಮಹಿಳೆ ಕಾಣೆ: ಪತ್ತೆಗೆ ಮನವಿಕಲ್ಯಾಣ ಕರ್ನಾಟಕ ಉತ್ಸವ: ಬಳ್ಳಾರಿಯಲ್ಲಿ ಸಚಿವ ಟಿ. ರಘುಮೂರ್ತಿ ಅವರಿಂದ ಧ್ವಜಾರೋಹಣ