Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bijapur

ಸರ್ವಜ್ಞ ವಿದ್ಯಾಪೀಠದಲ್ಲಿ ಸಂಭ್ರಮದಿಂದ ಮಕ್ಕಳ ದಿನಾಚರಣೆ ಆಚರಣೆ


ತಾಳಿಕೋಟೆ, ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ತಾಳಿಕೋಟೆಯ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
      ಕಾರ್ಯಕ್ರಮದ ಅಂಗವಾಗಿ ಮಕ್ಕಳೊಂದಿಗೆ ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ಮಕ್ಕಳ ದಿನಾಚರಣೆಗೆ ವಿಶೇಷ ಮೆರುಗು ನೀಡಲಾಯಿತು. ಮಕ್ಕಳ ಮುಖದಲ್ಲಿ ಸಂತಸ ಮೂಡಿಸುವ ಉದ್ದೇಶದಿಂದ ಶಾಲೆಯಲ್ಲಿ ವಿವಿಧ ಮನರಂಜನಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
      ವಿದ್ಯಾರ್ಥಿಗಳು ವಿವಿಧ ಕಿರು ನಾಟಕಗಳು, ಹಾಸ್ಯ ಚಟಾಕಿಗಳು ಹಾಗೂ ಮನರಂಜನಾತ್ಮಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು. ಅಲ್ಲದೆ, ಮಕ್ಕಳಲ್ಲಿ ಕ್ರೀಡಾಸ್ಫೂರ್ತಿ, ಸ್ಪರ್ಧಾತ್ಮಕ ಮನೋಭಾವ ಹಾಗೂ ಪರಸ್ಪರ ಸಹಕಾರದ ಗುಣ ಬೆಳೆಸುವ ನಿಟ್ಟಿನಲ್ಲಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
      ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಸಿದ್ದನಗೌಡ ಬಿ. ಮಂಗಳೂರು, ಅವರು ಮಾತನಾಡಿ ಮಕ್ಕಳೇ ದೇಶದ ಭವಿಷ್ಯದ ಶಕ್ತಿಯಾಗಿದ್ದು, ಅವರಲ್ಲಿರುವ ಪ್ರತಿಭೆ, ಸೃಜನಶೀಲತೆ ಹಾಗೂ ಆತ್ಮವಿಶ್ವಾಸವನ್ನು ಗುರುತಿಸಿ ಪ್ರೋತ್ಸಾಹಿಸುವುದು ಇಂತಹ ಆಚರಣೆಗಳ ಮುಖ್ಯ ಉದ್ದೇಶವಾಗಿದೆ. ಶಾಲೆಯಲ್ಲಿನ ಇಂತಹ ಸಂಭ್ರಮದ ಕಾರ್ಯಕ್ರಮಗಳು ಮಕ್ಕಳ ಕಲಿಕೆಯ ಜೊತೆಗೆ ಅವರ ಸರ್ವತೋಮುಖ ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿಯಾಗುತ್ತವೆಂದರು.
       ಈ ಸಂದರ್ಭದಲ್ಲಿ ಮುಖ್ಯ ಗುರುಗಳಾದ ಸಂತೋಷ ಪವಾರ, ರಾಜು ಜವಳಗೇರಿ, ದೈಹಿಕ ಶಿಕ್ಷಕರಾದ ಬಸವರಾಜ ಚಳ್ಳಗಿ, ಶಾಂತಗೌಡ ಬಿರಾದಾರ, ವಿದ್ಯಾರ್ಥಿಗಳು ಹಾಗೂ ಶಾಲೆಯ ಸಮಸ್ತ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜನಪ್ರತಿನಿದಿನಗಳು ಇದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಅತ್ತನೂರುಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ; ಸುಗಮ ಸಂಚಾರಕ್ಕೆ ಮಹತ್ವ: ಲಕ್ಷ್ಮೀ ಹೆಬ್ಬಾಳಕರ್ರೈತರ ಆದಾಯ ಹೆಚ್ಚಳಕ್ಕೆ ವೈಜ್ಞಾನಿಕ ಸಂಶೋಧನೆ ಅಗತ್ಯ: ಕೃಷಿ ವಿಶ್ವವಿದ್ಯಾಲಯಗಳು ರೈತರ ಸಮಸ್ಯೆಗಳಿಗೆ ಪರಿಹಾರ ನೀಡುವ ಜ್ಞಾನ ಕೇಂದ್ರಗಳಾಗಬೇಕು:ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ನೂರು ವರ್ಷಗಳ ಜ್ಞಾನದ ಬೆಳಕು ಮುಂದಿನ ತಲೆಮಾರಿಗೂ ದಾರಿದೀಪವಾಗಲಿ: ಲಕ್ಷ್ಮೀ ಹೆಬ್ಬಾಳಕರ್ಶೈಕ್ಷಣಿಕ ಪ್ರಗತಿಯಿಂದ ಮಾತ್ರ ಪ್ರದೇಶದ ಸಮಗ್ರ ಅಭಿವೃದ್ಧಿ ಸಾಧ್ಯ: ಶಾಸಕ ಯಶವಂತರಾಯಗೌಡ ಪಾಟೀಲಸರ್ಕಾರ ಮಾಡದ ಕೆಲಸ ಸಹಕಾರ ಸಂಸ್ಥೆಗಳಿಂದ ಸಾಧ್ಯ: ಶಾಸಕ ಯಶವಂತರಾಯಗೌಡ ಪಾಟೀಲ ಸರ್ವಜ್ಞ ವಿದ್ಯಾಪೀಠದಲ್ಲಿ ಸಂಭ್ರಮದಿಂದ ಮಕ್ಕಳ ದಿನಾಚರಣೆ ಆಚರಣೆವಿಶ್ವಕರ್ಮ ಸಮಾಜದ ಹಿರಿಯರಾದ ರಾಮಕೃ ಪೋತದಾರ ನಿಧನಬಿಸಿ ಊಟದ ಯೋಜನೆ ಸಮರ್ಪಕ ನಿರ್ವಹಣೆಗೆ ಕ್ಯಾಶ್‌ಬುಕ್ ನಿರ್ವಹಣೆ ಅತ್ಯಗತ್ಯ: ತರಬೇತಿ ಕಾರ್ಯಾಗಾರದಲ್ಲಿ ಮಾಹಿತಿಸ್ವಚ್ಛತೆ, ಗುಣಮಟ್ಟದಲ್ಲಿ ನಿರ್ಲಕ್ಷ್ಯ ಸಲ್ಲದು; ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ: ಸದಾಶಿವ ಹಡಪದ