LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಗಾಂಧೀ ಜಯಂತಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ಬಳ್ಳಾರಿ, ಅ.03;ನಗರದ ಶ್ರೀ ವಾಸವಿ ವಿದ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಗಾಂಧೀಜಿ ಹಾಗೂ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಲಾಯಿತು. ಗಾಂಧೀಜಿಯವರ ಸತ್ಯ, ಅಹಿಂಸೆ, ಸರಳತೆ ಮತ್ತು ಸ್ವಚ್ಛತೆಯ ಸಂದೇಶಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ ಎಂದು ವಿದ್ಯಾರ್ಥಿನಿ ಬಿಲ್ವಶ್ರೀ ಹೇಳಿದರು.
ಲಾಲ್ ಬಹದ್ದೂರ್ ಶಾಸ್ತ್ರಿಯವರ ಸರಳ ಜೀವನ, ಪ್ರಾಮಾಣಿಕತೆ, ಶಿಸ್ತು ಹಾಗೂ ದೇಶಭಕ್ತಿ ಪ್ರತಿಯೊಬ್ಬರಿಗೂ ಮಾದರಿಯಾಗಿದೆ ಎಂದು ವಿದ್ಯಾರ್ಥಿನಿ ಹರಿಣಿ ತಿಳಿಸಿದರು.
ವಿದ್ಯಾರ್ಥಿಗಳು ‘ರಘುಪತಿ ರಾಘವ ರಾಜಾರಾಮ್’ ಭಜನೆ ಹಾಡಿ ಗಾಂಧೀಜಿಯವರ ಸತ್ಯ ಮತ್ತು ಅಹಿಂಸೆಯ ಸಂದೇಶವನ್ನು ಸ್ಮರಿಸಿದರು. ಅಲ್ಲದೆ, ಗಾಂಧೀಜಿಯವರ ‘ಸತ್ಯ ಮತ್ತು ಅಹಿಂಸೆಯ ಮಾರ್ಗ’ ಹಾಗೂ ಶಾಸ್ತ್ರಿಯವರ ‘ಜೈ ಜವಾನ್, ಜೈ ಕಿಸಾನ್’ ಆದರ್ಶಗಳ ಮಹತ್ವವನ್ನು ತಿಳಿಸಲಾಯಿತು.
ಸ್ವಚ್ಛತೆಯ ಮಹತ್ವ ಸಾರಿದ ವಿದ್ಯಾರ್ಥಿಗಳು ಸ್ವಚ್ಛತೆಯ ಪ್ರತಿಜ್ಞೆ ಸ್ವೀಕರಿಸಿ, ಮನೆ, ಶಾಲೆ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ಸ್ವಚ್ಛ ಹಾಗೂ ಆರೋಗ್ಯಕರ ಭಾರತ ನಿರ್ಮಾಣಕ್ಕೆ ಕೈಜೋಡಿಸುವ ಸಂಕಲ್ಪ ಮಾಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ವೀರೇಶ್ ಯು., ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವನ್ಯಜೀವಿಗಳಿಗೂ ಮಾನವರಂತೆ ಮನಸ್ಸಿದೆ, ಅವುಗಳನ್ನು ಪ್ರೀತಿಸೋಣ: ಡಿಎಫ್‌ಒ ಮಲ್ಲಿನಾಥ ಕುಸನಾಳದೈನಂದಿನ ಜೀವನದಲ್ಲಿ ಪ್ರಾಣಾಯಾಮದಿಂದ ಆರೋಗ್ಯ ಮತ್ತು ಮನಃಶಾಂತಿ: ಅಮೃತಾಂನಂದ ಮಹಾಸ್ವಾಮಿಗಳ ಬೋಧನೆಇಂಡಿ: ಶಾಸಕ ಯಶವಂತರಾಯಗೌಡ ಪಾಟೀಲ ಅವರ 59ನೇ ಜನ್ಮದಿನದ ನಿಮಿತ್ತ ಉಚಿತ ಆರೋಗ್ಯ ತಪಾಸಣಾ ಶಿಬಿರಕೊಪ್ಪಳದಲ್ಲಿ ಶ್ರದ್ಧಾ-ಭಕ್ತಿಯಿಂದ ನಡೆದ ಸಾಮೂಹಿಕ ಪಿಂಡ ಪ್ರದಾನ ಹಾಗೂ ಪಿತೃ ತರ್ಪಣಬಳ್ಳಾರಿಯ ಶ್ರೀ ಸಣ್ಣದುರ್ಗಮ್ಮ ದೇವಸ್ಥಾನದಲ್ಲಿ  11ನೇ ವರ್ಷದ ಶರನ್ನವರಾತ್ರಿ ಉತ್ಸವ ಇಂದು ಹನುಮಾನ್ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮಮೂಳೆಯ ಗುಣಮಟ್ಟ ಕಡಿಮೆ ಇರುವ ರೋಗಿಗಳಲ್ಲಿ ಆಂಕರ್‌ರಹಿತ ರಿಪೇರ್‌ಗೆ ನೆರವಾಗುವ ಸಾಧನ ಅಭಿವೃದ್ಧಿಹೊಸಪೇಟೆಯಲ್ಲಿ ಪಂಡಿತ್ ಪುಟ್ಟರಾಜ ಗವಾಯಿಗಳ ಪುಣ್ಯಸ್ಮರಣೆಗ್ರಾಮೀಣ ಕ್ರೀಡೆಗಳು ನಮ್ಮ ನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಸಂಕೇತ: ಶಾಸಕ ವಿಶ್ವಾಸ ವೈದ್ಯಸಮಾಜದ ಓರೆಕೋರೆಗಳನ್ನು ತಿದ್ದುವ ವರದಿಗಾರರು ಶ್ರೇ?ರು: ಧರೆಪ್ಪ ಸಾಂಗ್ಲೀಕರ