Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನಗಣತಿ ಅಭಿಯಾನ: ಜಿಲ್ಲಾ ನ್ಯಾಯಾಧೀಶೆ ಕೆ.ಜಿ. ಶಾಂತಿ ಅವರಿಂದ ಸ್ವಯಂ ಗಣತಿ





ಬಳ್ಳಾರಿ,ಏ.10 ಭಾರತ ಸರ್ಕಾರದ ಮಹತ್ವದ ಯೋಜನೆಯಾದ ‘ಜನಗಣತಿ' ಪ್ರಕ್ರಿಯೆಯು ಅತ್ಯಂತ ಯಶಸ್ವಿಯಾಗಿ ಆರಂಭಗೊAಡಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ.ಜಿ.ಶಾಂತಿ ಅವರು, ಬುಧವಾರ ಜಿಲ್ಲಾ ನ್ಯಾಯಾಲಯದ ತಮ್ಮ ಕಚೇರಿಯಲ್ಲಿ ‘ಸ್ವಯಂ ಗಣತಿ' ಮಾಡುವ ಮೂಲಕ ಸಾರ್ವಜನಿಕರಿಗೆ ಮಾದರಿಯಾದರು.
ಈ ಬಾರಿಯ ಜನಗಣತಿಯಲ್ಲಿ ಡಿಜಿಟಲ್ ಪದ್ಧತಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ನ್ಯಾಯಾಧೀಶರು ಜನಗಣತಿ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ತಮ್ಮ ವಿವರಗಳನ್ನು ತಾವೇ ಆನ್‌ಲೈನ್‌ನಲ್ಲಿ ದಾಖಲಿಸಿದರು.
ದೇಶದ ಅಭಿವೃದ್ಧಿ ಮತ್ತು ಭವಿಷ್ಯದ ಯೋಜನೆಗಳ ರೂಪಿಸುವಲ್ಲಿ ಜನಗಣತಿಯು ಬಹಳ ಮುಖ್ಯವಾದ ಪಾತ್ರ ವಹಿಸುತ್ತದೆ. ಪ್ರತಿಯೊಬ್ಬ ನಾಗರಿಕರು ಯಾವುದೇ ತಪ್ಪು ಮಾಹಿತಿಯನ್ನು ನೀಡದೆ, ನಿಖರವಾದ ವಿವರಗಳನ್ನು ಒದಗಿಸುವುದು ಕರ್ತವ್ಯವಾಗಿದೆ ಎಂದು ಹೇಳಿದರು.
ಡಿಜಿಟಲ್ ಗಣತಿಯಿಂದ ಸಮಯ ಉಳಿತಾಯವಾಗುವುದಲ್ಲದೆ, ದತ್ತಾಂಶದ ನಿಖರತೆ ಹೆಚ್ಚುತ್ತದೆ. ಸಾರ್ವಜನಿಕರು ಆನ್‌ಲೈನ್ ಮೂಲಕ ‘ಸ್ವಯಂ ಗಣತಿ' ಮಾಡಿಕೊಳ್ಳಲು ಮುಕ್ತ ಅವಕಾಶವಿದೆ. ಗಣತಿ ಕಾರ್ಯಕ್ಕೆ ಸಾರ್ವಜನಿಕರು ಪೂರ್ಣ ಸಹಕಾರ ನೀಡಬೇಕು ಎಂದು ಅವರು ತಿಳಿಸಿದರು.
ಇದೇ ವೇಳೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಸಹ ಸ್ವಯಂ ಗಣತಿ' ಪ್ರಕ್ರಿಯೆಯಲ್ಲಿ ಭಾಗವಹಿಸಿ ಮಾಹಿತಿ ನೋಂದಾಯಿಸಿದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ