Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿರಿಧಾನ್ಯ ನಡಿಗೆ ಆರೋಗ್ಯದ ಕಡೆಗೆ: ಸರಿಧಾನ್ಯ ಜಾಗೃತಿ ಜಾಥಾ


ಧಾರವಾಡ: ಧಾರವಾಡ ಜಿಲ್ಲೆಯಲ್ಲಿ 2023-24 ನೇ ಸಾಲಿನಲ್ಲಿ 2,200 ಜನ ರೈತರು ಸಿರಿಧಾನ್ಯವನ್ನು ಬೆಳೆದು 2 ಕೋಟಿಗೂ ಹೆಚ್ಚು ಪೆÇ್ರೀತ್ಸಾಹಧನವನ್ನು ಪಡೆದಿದ್ದಾರೆ. ಇದರಲ್ಲಿ 180 ರಷ್ಟು ರೈತರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದಾರೆ. ಸಿರಿಧಾನ್ಯ ಬೆಳೆಯುವುದರಲ್ಲಿ ಕಲಘಟಗಿ ತಾಲೂಕು ಮುಂಚೂಣಿಯಲ್ಲಿದ್ದು 1500 ಕ್ಕೂ ಹೆಚ್ಚು ಜನರು ಈ ಬೆಳೆಗಳನ್ನು ಬೆಳೆದಿದ್ದಾರೆ. ಉಳಿದ ತಾಲೂಕಿನ ರೈತರು ಕೂಡ ಸಿರಿಧಾನ್ಯ ಕೃಷಿಯ ಕಡೆಗೆ ಲಕ್ಷ್ಯ ವಹಿಸಬೇಕಾಗಿದೆ. ಅದರ ಹಿಂದಿನ ಸಾಲಿಗೆ ಹೋಲಿಸಿದರೆ ಪ್ರಸ್ತುತ ವರ್ಷದಲ್ಲಿ ಸಿರಿಧಾನ್ಯ ಬೆಳೆಗಳ ವ್ಯಾಪ್ತಿ ಹೆಚ್ಚಾಗಿದ್ದು, ಇನ್ನೂ ಹೆಚ್ಚಿನ ಪ್ರಗತಿ ಸಾಧಿಸಲು ಇಲಾಖೆಯಿಂದ ಅಗತ್ಯ ಕ್ರಿಯಾಯೋಜನೆ ರೂಪಿಸಲಾಗುತ್ತಿದೆ  ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಅವರು ತಿಳಿಸಿದರು.


ಅವರು ಇಂದು ಬೆಳಿಗ್ಗೆ ಕೃಷಿ ಇಲಾಖೆಯಿಂದ ನಗರದ ಕಡಪಾ ಮೈದಾನದಿಂದ ಕರ್ನಾಟಕ ಕಾಲೇಜು ವೃತ್ತದವರೆಗೆ ಆಯೋಜಿಸಿದ್ದ ಸಿರಿಧಾನ್ಯ ನಡಿಗೆ ಆರೋಗ್ಯದ ಕಡೆಗೆ ಜಾಥಾಗೆ ಚಾಲನೆ ನೀಡಿ, ಮಾತನಾಡಿದರು.


ಸಿರಿಧಾನ್ಯಗಳು ಭಾರತೀಯ ಜೀವನ ಪದ್ದತಿಯ ಪವಾಡ ಧಾನ್ಯಗಳು ಎಂದು ಹೇಳಬಹುದಾಗಿದೆ.  ಜೋಳ, ರಾಗಿ, ಸಜ್ಜೆ, ನವಣೆ, ಸಾವಿ, ಬರಗು, ಊದಲು, ಕೊರಲೆ, ಹಾರಕ ಇವು ನಮ್ಮ ಸಂಪ್ರದಾಯಿಕ ಬೆಳೆಗಳಾಗಿದ್ದು, ನಮ್ಮ ಆಹಾರ ಸಂಸ್ಕøತಿಯ ಅವಿಭಾಜ್ಯ ಅಂಗಗಳಾಗಿವೆ. ಕಾಲಕ್ರಮೇಣ ಆಧುನಿಕ ಮತ್ತು ಆಮದು ಕೃಷಿಯ ಪ್ರಭಾವದಿಂದ ಅವುಗಳ ಸಾಗುವಳಿಯಲ್ಲಿ ಹಿನ್ನಡೆಯಾಗಿತ್ತು. ಆದರೆ ಇತ್ತೀಚಿನ ಕೆಲವು ದಶಕಗಳಿಂದ ಜನಸಾಮಾನ್ಯರಲ್ಲಿ ಸಿರಿಧಾನ್ಯಗಳ ಮಹತ್ವ ಕುರಿತು ಸಾಕಷ್ಟು ಅರಿವು ಮೂಡಿದೆ. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಿರಿಧಾನ್ಯಗಳ ಬಳಕೆ ಹೆಚ್ಚಾಗುತ್ತಿದ್ದು, ಗ್ರಾಹಕರು ಅವುಗಳನ್ನು ಕೊಳ್ಳಲು ಮುಂದೆ ಬರುತ್ತಿದ್ದಾರೆ. ಆದ್ದರಿಂದ ಈ ಬೆಳೆಗಳನ್ನು ಹೆಚ್ಚು ಹೆಚ್ಚು ಬೆಳೆಯುವುದರೊಂದಿಗೆ ಅವುಗಳ ಸಂಸ್ಕರಣೆ ಮಾರುಕಟ್ಟೆ ವಿಷಯಗಳಲ್ಲೂ ರೈತರನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದು ಅವರು ತಿಳಿಸಿದರು.


ಕರ್ನಾಟಕ ರಾಜ್ಯ ಸರಕಾರವು ಕೃಷಿ ಇಲಾಖೆಯ ಮುಖಾಂತರ ಸಿರಿಧಾನ್ಯ ಬೆಳೆಗಾರರಿಗೆ ಪೆÇ್ರೀತ್ಸಾಹ ನೀಡುವ ದೃಷ್ಟಿಯಿಂದ ರೈತಸಿರಿ ಯೋಜನೆಯನ್ನು ಜಾರಿಗೊಳಿಸಿದೆ. ಇದರಡಿಯಲ್ಲಿ ಸಿರಿಧಾನ್ಯ ಬೆಳೆಯುವ ರೈತರಿಗೆ, ಇಲಾಖಾ ಮಾರ್ಗಸೂಚಿ ಪ್ರಕಾರ ಹೆಕ್ಟೇರಿಗೆ 10,000 ರೂಪಾಯಿ ಪೆÇ್ರೀತ್ಸಾಹಧನ ನೀಡಲಾಗುತ್ತಿದೆ. ಸಿರಿಧಾನ್ಯವನ್ನು ವರ್ಷ ಪೂರ್ತಿ ಬೆಳೆಯಬಹುದಾಗಿದ್ದು, ಕಡಿಮೆ ಫಲವತ್ತಾದ ಜಮೀನಿಗೂ ಸೂಕ್ತವಾಗಿದೆ. ಒಣಬೇಸಾಯದಲ್ಲಿ ಹೆಚ್ಚು ವೆಚ್ಚವಿಲ್ಲದೇ ಇವುಗಳನ್ನು ಬೆಳೆಯ ಬಹುದಾಗಿದೆ ಎಂದು ಅವರು ಹೇಳಿದರು.


ರೈತರು ಬೆಳೆಯುವ ಸಿರಿಧಾನ್ಯಗಳ ಸಂಸ್ಕರಣೆಗೂ ಸರಕಾರವು ಪೆÇ್ರೀತ್ಸಾಹ ನೀಡುತ್ತದೆ. ರೈತ ಉತ್ಪಾದಕ ಗುಂಪುಗಳ ಮೂಲಕ ರೈತರ ಸಿರಿಧಾನ್ಯ ಉತ್ಪನ್ನಗಳನ್ನು ಖರೀದಿಸುತ್ತಿದೆ. ರೈತರು ಸಿರಿಧಾನ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆದು ತಾವು ಬಳಸಿ, ಗ್ರಾಹಕರಿಗೂ ಒದಗಿಸಿ ಸಮಾಜದ ಆರೋಗ್ಯ ಸ್ವಾಸ್ಥವನ್ನು ಸುಧಾರಿಸುವಲ್ಲಿ ನೆರವಾಗಬೇಕೆಂದು ತಿಳಿಸಿದರು.


ಜಾಥಾದಲ್ಲಿ ಕೃಷಿ ಇಲಾಖೆಯ ಉಪನಿರ್ದೇಶಕರಾದ ಜಯಶ್ರೀ ಹಿರೇಮಠ, ಸಂದೀಪ ಆರ್.ಜಿ., ಸಹಾಯಕ ಕೃಷಿ ನಿರ್ದೇಶಕರಾದ ರಾಜಶೇಖರ ಆನಗೌಡರ, ಚನ್ನಪ್ಪ ಅಂಗಡಿ, ವಿಠ್ಠಲರಾವ್, ಸುಷ್ಮಾ ಮಳಿಮಠ, ಗೀತಾ ಕಡಪಟ್ಟಿ ಸೇರಿದಂತೆ ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ತಾಲೂಕ ಕೃಷಿ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು. ಆತ್ಮ ಯೋಜನೆಯ ಸಿಬ್ಬಂದಿ, ಕೃಷಿ ಸಂಜೀವಿನಿ ಯೋಜನೆಯ ಸಿಬ್ಬಂದಿ, ಧರ್ಮಸ್ಥಳ ಸಿರಿ ಸಂಸ್ಥೆಯ ಸಿಬ್ಬಂದಿ ಮತ್ತು ಜಿಲ್ಲೆಯ ಸಿರಿಧಾನ್ಯ ಬೆಳೆಗಾರರು ಹಾಗೂ ಪ್ರಗತಿ ಪರ ರೈತರು ಜಾಥಾದಲ್ಲಿ ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ