Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಹಕಾರಿ ತತ್ವ, ಆದರ್ಶದಡಿ ಕೆಲಸ : ವಿಧಾನ ಪರಿಷತ್‌ ಸದಸ್ಯ ಚನ್ನರಾಜ್‌ ಹಟ್ಟಿಹೊಳಿ







 *ಬೆಳಗಾವಿ:* ಚುನಾವಣೆ ವೇಳೆ ಬರುವ ಮನಸ್ತಾಪ, ವೈಯಕ್ತಿಕ ದ್ವೇಷಗಳನ್ನು ಬದಿಗಿಟ್ಟು, ಜನ ಸಾಮಾನ್ಯರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಸಹಕಾರಿ ತತ್ವ, ಆದರ್ಶದಡಿ ಕೆಲಸ ಮಾಡಬೇಕು ಎಂದು ವಿಧಾನ ಪರಿಷತ್‌ ಸದಸ್ಯರಾದ ಚನ್ನರಾಜ್‌ ಹಟ್ಟಿಹೊಳಿ ಹೇಳಿದ್ದಾರೆ.


ಹಿರೇಬಾಗೇವಾಡಿಯ ಶ್ರೀ  ಜಾಲಿಕರೆಮ್ಮ ದೇವಿ ಮಂಗಲ ಕಾರ್ಯಾಲಯದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿಯಮಿತ ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ ಭಾನುವಾರ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ-2025 ರ ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.


ಸಹಕಾರಿ ರಂಗದಲ್ಲಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು. ಈ ವೇಳೆ ವೈಯಕ್ತಿಕ ಮನಸ್ತಾಪಗಳನ್ನು ಬದಿಗಿಟ್ಟು ಕೆಲಸ ಮಾಡಬೇಕಿದೆ. ಆಗಷ್ಟೇ ನಾವು ಜನ ಸಾಮಾನ್ಯರಿಗೆ ಅನುಕೂಲ ಮಾಡಿಕೊಡಲು ಸಾಧ್ಯ ಎಂದು ಹೇಳಿದರು.


ಬೆಳಗಾವಿ ತಾಲೂಕಿನಿಂದ ರಾಹುಲ್‌ ಜಾರಕಿಹೊಳಿ ಅವರನ್ನು ಜಿಲ್ಲಾ ಸಹಕಾರಿ ಬ್ಯಾಂಕ್‌ಗೆ ನಿರ್ದೇಶಕರನ್ನಾಗಿ ಮಾಡಲಾಗಿದೆ. ಅವರೊಂದಿಗೆ ಕೈಜೋಡಿಸಿ ರೈತರ ಪರ ಕೆಲಸ ಮಾಡಲಾಗುವುದು. ಸರ್ಕಾರ ಹಾಗೂ ಸಹಕಾರ ಮಟ್ಟದಲ್ಲೂ ಕೆಲಸ ಮಾಡಿಕೊಡುವೆ. ಇಂಥಹ ಸಪ್ತಾಹ ಎಲ್ಲರಿಗೂ ಒಳ್ಳೆಯದಾಗಬೇಕು ಎಂದು  ಚನ್ನರಾಜ್‌ ಹಟ್ಟಿಹೊಳಿ ತಿಳಿಸಿದರು.


ದೇವರ ಆಶೀರ್ವಾದ ಹಾಗೂ ಎಲ್ಲರ ಸಹಕಾರದಿಂದ ಸಹಕಾರ ಕ್ಷೇತ್ರಕ್ಕೆ ಪ್ರವೇಶಿಸಿರುವೆ. ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕನಾಗಿದ್ದು, ಮಲಪ್ರಭ ಸಕ್ಕರೆ ಕಾರ್ಖಾನೆಗೆ ಅಧ್ಯಕ್ಷನಾಗಿರುವೆ. ಒಳ್ಳೆಯ ಕೆಲಸ ಕಾರ್ಯಗಳು ಸಹಕಾರಿ ರಂಗದಲ್ಲಿ ಆಗುತ್ತಿವೆ. ರೈತರ ಪಾಲಿಗೆ ಸಹಕಾರ ಬ್ಯಾಂಕ್‌ಗಳು ಆರ್ಥಿಕ ಶಕ್ತಿಯಾಗಿವೆ ಎಂದು ಹೇಳಿದರು.


ರಾಷ್ಟ್ರೀಯ ಬ್ಯಾಂಕ್‌ಗಳಲ್ಲಿ ರೈತರು ಸಾಲ ಪಡೆಯಲು ನೂರೊಂದು ನಿಯಮಗಳನ್ನು ಎದುರಿಸಬೇಕು, ಆದರೆ, ಸಹಕಾರಿ ಬ್ಯಾಂಕ್‌ಗಳಲ್ಲಿ ನಿಯಮಗಳನ್ನು ಸಡಿಲಿಸಿ ಸಾಲ ನೀಡಲಾಗುತ್ತಿದೆ. ನರ್ಸರಿ ಮಾಡಲು, ಹೈನುಗಾರಿಕೆ ಸೇರಿದಂತೆ ಹಲವು ಸ್ವಯಂ ಉದ್ಯೋಗದಲ್ಲಿ ತೊಡಗಿಸಲು ಸಹಕಾರಿ ಬ್ಯಾಂಕ್‌ಗಳಲ್ಲಿ ನೆರವು ನೀಡಲಾಗುತ್ತಿದೆ. ರೈತರಿಗೆ ಶೂನ್ಯಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ ಎಂದರು.


ಸಹಕಾರಿ ರಂಗ ತನ್ನದೇ ಆದ ನಿಟ್ಟಿನಲ್ಲಿ ಮುಂದುವರಿತಾ ಇದೆ. ಹಳ್ಳಿಯಿಂದ ದೆಹಲಿವರೆಗೂ ಸಹಕಾರಿ ರಂಗ ವಿಸ್ತಾರಗೊಂಡಿದ್ದು, ಸಹಕಾರಿ ರಂಗದಲ್ಲಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಿದರೆ ಮಾತ್ರ ಯಶಸ್ಸು ಸಿಗುತ್ತದೆ ಎಂದು  ಚನ್ನರಾಜ್‌ ಹಟ್ಟಿಹೊಳಿ ತಿಳಿಸಿದರು.


ಈ ವೇಳೆ ಸಂತೋಷ ಅಂಗಡಿ, ಬಸಗೌಡ ಪಾಟೀಲ, ಶಂಕರಗೌಡ ಪಾಟೀಲ, ಶಿವನಗೌಡ ಪಾಟೀಲ, ಹಾಲಪ್ಪ ಜಗ್ಗಿನವರ, ರವೀಂದ್ರ ಮೇಳೆದ್, ರಘು ಪಾಟೀಲ, ಭರಮಪ್ಪ ಶೀಗಿಹಳ್ಳಿ, ರಾಮಣ್ಣ ಗುಳ್ಳಿ, ಮುಶೆಪ್ಪ ಹಟ್ಟಿ, ಮಹಾಂತೇಶ ಅಲಾಬಾದಿ, ಸುರೇಶ ಇಟಗಿ, ಬಸನಗೌಡ ಪಾಟೀಲ, ಚಂದ್ರಪ್ಪ ಶಿಂತ್ರಿ, ಗ್ರಾಮದ ಅನೇಕ ಮುಖಂಡರು, ಹಿರಿಯರು ಉಪಸ್ಥಿತರಿದ್ದರು.







Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ