Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೈಟೆಕ್ ಸ್ಟೇಡಿಯಂ ನಿರ್ಮಾಣ: ಸ್ಥಳ ಪರಿಶೀಲಿಸಿದ ಚನ್ನರಾಜ ಹಟ್ಟಿಹೊಳಿ

ಬೆಳಗಾವಿ:  ಬೆಳಗುಂದಿ ಗ್ರಾಮದ ಹೊರ ವಲಯದಲ್ಲಿ ನಿರ್ಮಾಣಗೊಳ್ಳಲಿರುವ ಹೈಟೆಕ್ ಕ್ರೀಡಾಂಗಣದ (ಮಲ್ಟಿ ಸ್ಟೇಡಿಯಂ) ಸ್ಥಳವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶನಿವಾರ ಪರಿಶೀಲಿಸಿದರು.


ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸತತ ಪ್ರಯತ್ನದಿಂದಾಗಿ ಕ್ರೀಡಾ ಇಲಾಖೆಯ ವತಿಯಿಂದ ಬೆಳಗಾವಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿಯೇ ಮೊದಲ ಮಲ್ಟಿ ಸ್ಟೇಡಿಯಂ ನಿರ್ಮಾಣಗೊಳ್ಳಲಿದೆ.


ಈ ಸ್ಟೇಡಿಯಂ ನಲ್ಲಿ ಕ್ರಿಕೆಟ್, ಕುಸ್ತಿ, ಸ್ವಿಮಿಂಗ್ ಪೂಲ್, ಕಬಡ್ಡಿ, ವಾಲಿಬಾಲ್ ಮುಂತಾದ ಆಟಗಳಿಗೆ ವ್ಯವಸ್ಥೆ ಮಾಡಲಾಗುವುದು. ಸ್ಟೇಡಿಯಂ ನಲ್ಲಿ ಅತ್ಯಾಧುನಿಕ ದೀಪದ ಕಂಬಗಳ ಅಳವಡಿಕೆಯಾಗಲಿದ್ದು, ಹಗಲು -ರಾತ್ರಿ ಸ್ಟೇಡಿಯಂ ನ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಅತೀ ಶೀಘ್ರದಲ್ಲೇ ಈ ಸ್ಟೇಡಿಯಂ ನ ಸ್ಥಳವನ್ನು ಅಂತಿಮಗೊಳಿಸಿ, ಕಾಮಗಾರಿಗಳಿಗೆ ಚಾಲನೆ ನೀಡಲಿದ್ದೇವೆ ಎಂದು ಚನ್ನರಾಜ ಹಟ್ಟಿಹೊಳಿ ಈ ಸಂದರ್ಭದಲ್ಲಿ ತಿಳಿಸಿದರು.


ಈ ಸಮಯದಲ್ಲಿ ಕ್ರೀಡಾ ಇಲಾಖೆ ಉಪ ನಿರ್ದೇಶಕ ಬಿ.ಶ್ರೀನಿವಾಸ್, ಶಿವಾಜಿ ಬೋಕಡೆ, ಪ್ರಹ್ಲಾದ ಚಿರಮುರ್ಕರ್, ದಯಾನಂದ ಗಾವಡಾ, ರೆಹಮಾನ್ ತಹಶಿಲ್ದಾರ, ಮಹಾದೇವ್ ಪಾಟೀಲ, ಶ್ಯಾಮ್ ಗಾವಡಾ, ಅಜಿತ್ ನಾಯ್ಕ್, ಕೃಷ್ಣ ಗಾವಡಾ, ರವಿ ನಾಯ್ಕ್, ಮೆಹಬೂಬ್ ಮುಜಾವರ್,  ಆಪ್ತ ಸಹಾಯಕ ಸಾತೇರಿ ಕೊಕಿತಕರ್ ಮುಂತಾದವರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ