Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಕ್ತಿ, ಶ್ರದ್ಧೆ ಮತ್ತು ಸೇವೆಯ ಸಂದೇಶ ಸಾರಿದ ಚನ್ನರಾಜ ಹಟ್ಟಿಹೊಳಿ

ಬಸವನ ಕುಡಚಿಯ ಸಾಯಿ ಕಾಲೋನಿಯಲ್ಲಿ ಶ್ರೀ ಶಿರಡಿ ಸಾಯಿಬಾಬಾ ಮಂದಿರ ಲೋಕಾರ್ಪಣೆ



ಬೆಳಗಾವಿ,ಮೇ,೦೭ : ಬೆಳಗಾವಿಯ ಬಸವನ ಕುಡಚಿಯ ಸಾಯಿ ಕಾಲೋನಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಶಿರಡಿ ಸಾಯಿಬಾಬಾ ಮಂದಿರದ ಲೋಕಾರ್ಪಣೆ, ವಿಗ್ರಹ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಸಮಾರಂಭವು ಭಕ್ತಿ ಹಾಗೂ ಧಾರ್ಮಿಕ ಸಂಭ್ರಮದ ವಾತಾವರಣದಲ್ಲಿ ಅದ್ದೂರಿಯಾಗಿ ನೆರವೇರಿತು.
ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿ, ದೇವಸ್ಥಾನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.  ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಧಾರ್ಮಿಕ ಕೇಂದ್ರಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ಹೇಳಿದರು.
ಶಿರಡಿ ಸಾಯಿಬಾಬಾ ಅವರು ಮಾನವಕುಲಕ್ಕೆ ಅಮೂಲ್ಯ ಸಂದೇಶವನ್ನು ನೀಡಿದ್ದು, ಅವರ ಆದರ್ಶಗಳು ಇಂದಿನ ಸಮಾಜಕ್ಕೂ ದಾರಿದೀಪವಾಗಿವೆ. ಇಂತಹ ಮಂದಿರಗಳು ಕೇವಲ ಪೂಜಾ ಸ್ಥಳಗಳಾಗದೇ, ಸಮಾಜವನ್ನು ಒಗ್ಗೂಡಿಸುವ ಆಧ್ಯಾತ್ಮಿಕ ಕೇಂದ್ರಗಳಾಗಬೇಕು ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ದೇವಸ್ಥಾನದ ಸಂಸ್ಥಾಪಕರು ಹಾಗೂ ನವಜೀವನ್ ಫೌಂಡೇಷನ್‌ನ ಮುಖ್ಯಸ್ಥರಾದ ಡಾ. ಸತೀಶ್ ಆರ್. ಚೌಲಿಗೇರ್ ಅವರನ್ನು ಅಭಿನಂದಿಸಿದ ಚನ್ನರಾಜ ಹಟ್ಟಿಹೊಳಿ, ಸಮಾಜಮುಖಿ ಕಾರ್ಯಗಳೊಂದಿಗೆ ಧಾರ್ಮಿಕ ಸೇವೆಯನ್ನೂ ಕೈಗೊಂಡಿರುವುದು ಶ್ಲಾಘನೀಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಶೇಷ ಪೂಜೆ, ಹೋಮ-ಹವನ, ವಿಗ್ರಹ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ವಿಧಿವಿಧಾನಗಳು ಭಕ್ತಿಭಾವದಿಂದ ನೆರವೇರಿದವು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಾಯಿಬಾಬಾರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಗುರು-ಹಿರಿಯರು, ಸ್ಥಳೀಯ ನಿವಾಸಿಗಳು, ಮಾಜಿ ಸೈನಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ