Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಲ್ಹಾದ ಪಾಂಡವರಿಗೆ “ಚರ್ಮಶ್ರೀ” ಪ್ರಶಸ್ತಿ

 

ಬೆಳಗಾವಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಾದರಕ್ಷೆ ಹಾಗೂ ಚರ್ಮ ಉದ್ಯೋಗವನ್ನು ಅಭಿವೃದ್ಧಿಪಡಿಸಲು ನವೀನ ತಂತ್ರಜ್ಞಾನ, ಉತ್ತಮ ವಿನ್ಯಾಸ ಹಾಗೂ ಸಮರ್ಪಕ ಮಾರುಕಟ್ಟೆ ವ್ಯವಸ್ಥೆ ಅತ್ಯಂತ ಅಗತ್ಯವಾಗಿದೆ ಎಂದು ಅಖಿಲ ಕರ್ನಾಟಕ ಚರ್ಮಕಾರ ಮಹಾಸಭಾ ಅಧ್ಯಕ್ಷ ಭೀಮರಾವ ಪವಾರ ಹೇಳಿದರು.

ನೆಹರುನಗರದಲ್ಲಿರುವ ಕನ್ನಡ ಭವನದಲ್ಲಿ ಪ್ರೋತ್ಸಾಹ ಫೌಂಡೇಶನ್ ವತಿಯಿಂದ ಆಯೋಜಿಸಲಾದ ಸಮಗಾರ ಹರಳಯ್ಯ (ಚರ್ಮಕಾರ) ಸಮಾಜದ ಸಮಾವೇಶದಲ್ಲಿ ಪವಾರ ಮೇಲಿನಂತೆ ಅಭಿಪ್ರಾಯ ಪಟ್ಟರು.

ಮುಂದೆ ಮಾತನಾಡುತ್ತ ಪವಾರ, ಸರಿಯಾದ ಯೋಜನೆ, ಪರಿಶ್ರಮ ಹಾಗೂ ನವೀನ ತಂತ್ರಜ್ಞಾನವನ್ನು ಅಳವಡಿಸಿಕೊಂಡರೆ ಚರ್ಮ ಉದ್ಯಮ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಅವಕಾಶಗಳನ್ನು ಸೃಷ್ಟಿಸಬಹುದು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಚರ್ಮೋದ್ಯಮ ಕ್ಷೇತ್ರದಲ್ಲಿ ನೀಡಿದ ಮಹತ್ವದ ಸೇವೆಯನ್ನು ಗುರುತಿಸಿ ಪ್ರಲ್ಹಾದ ಪಾಂಡವ ಅವರಿಗೆ “ಚರ್ಮಶ್ರೀ” ಪ್ರಶಸ್ತಿ ಪ್ರದಾನ ಮಾಡಲಾಯಿತು. ಜೊತೆಗೆ ಅವರ ಧರ್ಮಪತ್ನಿ ತುಳಸಾಬಾಯಿ ಪಾಂಡವ ಅವರನ್ನೂ ಗೌರವಿಸಲಾಯಿತು

ಕಾರ್ಯಕ್ರಮದಲ್ಲಿ ಬೆಳಗಾವಿಯ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಆರ್.ಬಿ. ಬಸರ್ಗಿ, ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ. ಅನ್ನಾಸಾಹೇಬ ಎಸ್. ರಾಯಮಾನೆ, ಮಾರಿಷಸ್ನ ಅನ್ನಾ ಮೆಡಿಕಲ್ ಕಾಲೇಜಿನ ನಿವೃತ್ತ ಡೀನ್ ಡಾ. ಮೋಹನ್ ಉಳ್ಳಿಕಾಶಿ, ಬೆಳಗಾವಿ ಪೊಲೀಸ್ ಉಪ ಆಯುಕ್ತ ಸದಾಶಿವ ಕಟ್ಟಿಮನಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಲೆದರ್ ಆರ್ಟಿಸನ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಅಧ್ಯಕ್ಷ ಸಂತೋಷ ಹೊಂಗಲ, ವಾಸುದೇವ ದೋಡಮನಿ, ಸಾಗರ ಕಿತ್ತೂರು, ಚಂದ್ರಕಾಂತ ಲೋಕರೆ, ಡಾ. ಶಿವಾನಂದ ದೊಡ್ಡಮನಿ, ಮಲ್ಲಿಕಾರ್ಜುನ ತಾಳಿಕೋಟಿ, ಶಂಕರ ಕಾಂಬಳೆ, ಶ್ರೀಮತಿ ರೂಪಾಲಿ ಸಂತೋಷಕುಮಾರ್ ಡಿ, ರವಿ ಹೊಂಗಲ, ಡಾ. ಚಂದ್ರಕಾಂತ ವಾಘಮಾರೆ, ಆನಂದ ಸೌದತ್ತಿ, ಹೀರಾಲಾಲ್ ಚವ್ಹಾಣ, ಸಂಜೀವ ಲೋಕಾಪುರ, ಜಿ.ಬಿ. ವಾಘಮಾರೆ, ಲತಾ ಮಾನೆ , ರೇಖಾ ದೊಡಮನಿ, ಸಂಗೀತಾ ಸಾಂಗಲಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಮಲ್ಲಿಕಾರ್ಜುನ ತಾಳಿಕೋಟಿ ನಿರೂಪಿಸಿದರು. ಸುರೇಶ್ ಸಾಂಗಲಿ ವಂದಿಸಿದರು
-೦-೦-೦-

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ