Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದುರ್ಬಲ ವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಪೊಲೀಸರು ತಡೆಗಟ್ಟಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಪೊಲೀಸರ ಸಾಮಾಜಿಕ ಬದ್ದತೆಯಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ

ಡಿಸಿಆರ್ ಇ ಪೊಲೀಸ್ ಠಾಣೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿ-ಸಿಎಂ ಸೂಚನೆ

ಬೆಂಗಳೂರು, ಆಗಸ್ಟ್ 30: ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ರಾಜಭವನದ್ಲಿ ನಡೆದ , ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಸರ್ಕಾರವು ಪ್ರತಿ ಜಿಲ್ಲೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ನಾನು ಇತ್ತೀಚೆಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳ ಕಾರ್ಯ ಮತ್ತು ಪ್ರಗತಿ ತೃಪ್ತಿದಾಯಕವಿಲ್ಲ ಎಂಬುದನ್ನು ಗಮನಿಸಿದ್ದೇನೆ. ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ದುರ್ಬಲವರ್ಗದವರಿಗೆ ಸುರಕ್ಷತೆ ಒದಗಿಸುವ ಸರ್ಕಾರದ ಉದ್ದೇಶ ಸಫಲವಾಗಬೇಕು. ಇತರೆ ರಾಜ್ಯಗಳಿಗೆ ಹೋಲಿಸಿದರೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿರುದ್ಧ ಶಿಕ್ಷೆಯ ಪ್ರಮಾಣ ಬಹಳ ಕಡಿಮೆಯಿದೆ. ಈ ಬಗ್ಗೆ ಪೊಲೀಸರು ಗಮನಹರಿಸಬೇಕು ಎಂದರು.

ಮುಂಜಾಗ್ರತಾ ಕ್ರಮಗಳಿಂದ ಅಪರಾಧ ತಡೆಗಟ್ಟಬಹುದು

ಇಂದು ವಿಶಿಷ್ಠ ಸೇವೆ ಸಲ್ಲಿಸಿರುವ ಪೊಲೀಸರಿಗೆ ಕೊಡಮಾಡಲಾದ ಸೇವಾಪದಕದ ಹಿಂದೆ ಅವರ ಸೇವಾ ಮನೋಭಾವ, ಪ್ರಮಾಣಿಕತೆ ಹಾಗೂ ಪರಿಶ್ರಮವಿರುತ್ತದೆ. ಸಾಮಾಜಿಕ ಕಳಕಳಿಯೊಂದಿಗೆ ಸೇವೆ ಸಲ್ಲಿಸಿದಾಗ ಮಾತ್ರ ಇಂತಹ ಸಾಧನೆ ಸಾಧ್ಯವಾಗುತ್ತದೆ. ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಜನರ ಆಸ್ತಿಪಾಸ್ತಿ ಸಂರಕ್ಷಿಸುವುದು ಪೊಲೀಸರ ಜವಾಬ್ದಾರಿ. ದೇಶದಲ್ಲಿ ಶಾಂತಿ ನೆಮ್ಮದಿ ನೆಲೆಸುವಲ್ಲಿ ಪೊಲೀಸರ ಪಾತ್ರ ಅತ್ಯಂತ ಮಹತ್ವವಾದುದು. ಸಮಾಜದಲ್ಲಿ ನಡೆಯುವ ಅಪರಾಧಗಳನ್ನು ತಡೆಗಟ್ಟುವ ಜವಾಬ್ದಾರಿ ಸರ್ಕಾರ ಹಾಗೂ ಪೊಲೀಸಿನವರದ್ದಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಬಹಳಷ್ಟು ಅಪರಾಧಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.

ಸಾಮಾನ್ಯ ಜನರಿಗೆ ನ್ಯಾಯ ಸಿಗುವಂತಾಗಬೇಕು

ಪೊಲೀಸರಿಗೆ ಸಾಮಾಜಿಕ ಬದ್ದತೆಯಿದ್ದರೆ, ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ. ಸಮಾಜದಲ್ಲಿನ ಅಸಮಾನತೆಗಳನ್ನು ತೊಡೆದು ಸಂವಿಧಾನ ನೀಡುವ ರಕ್ಷಣೆಯನ್ನು ಜಾರಿಗೊಳಿಸುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ. ಬಲಾಢ್ಯರ ಕೈಯ್ಯಲ್ಲಿ ಅಧಿಕಾರವಿದ್ದರೆ, ದುರ್ಬಲ ವರ್ಗದವರ ಜೀವನ ದುಸ್ತರವಾಗುತ್ತದೆ ಎಂದು ಡಾ.ಬಿ.ಆರ್. ಅಂಬೇಡ್ಕರ್ ಅವರು ತಿಳಿಸಿದ್ದರು. ದುರ್ಬಲವರ್ಗಗಳ ಮೇಲಾಗುವ ದೌಜರ್ನ್ಯಗಳನ್ನು ಪೊಲೀಸರು ತಡೆಗಟ್ಟಬೇಕಿದೆ. ಸಾಮಾನ್ಯ ಜನರಿಗೆ ನ್ಯಾಯ ದೊರಕಿಸಿಕೊಡಬೇಕು. ಪೊಲೀಸರ ಸಂಖ್ಯೆಯ ಬಗ್ಗೆ ಗಮನಹರಿಸದೇ, ಅವರು ತಡೆಗಟ್ಟಿರುವ ಅಪರಾಧಗಳೆಷ್ಟು ಎಂದು ಪರಿಗಣಿಸಬೇಕಾಗಿದೆ ಎಂದರು.

ಇಂದಿನ ಪ್ರಶಸ್ತಿ ವಿಜೇತರ ಸಾಧನೆ ಶ್ಲಾಘನೀಯವಾಗಿದ್ದು, ಇತರರಿಗೆ ಮಾದರಿಯಾಗಬೇಕು. ಸಮಾಜದಲ್ಲಿನ ನ್ಯೂನ್ಯತೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿದೆ. ಪೊಲೀಸ್ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಆತ್ಮವಿಮರ್ಶೆ ಮಾಡಿಕೊಂಡು ಉತ್ತಮ ಸೇವೆ ಸಲ್ಲಿಸಬೇಕು ಎಂದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ