Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಕ್ಕೂರು ಏರೋಡ್ರೋಂ ವಿಸ್ತರಣೆ ಹಾಗೂ ಸ್ಥಳ ಬಳಕೆಗೆ ಚಿಂತನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್ 03: ಜಕ್ಕೂರು ಎರೋಡ್ರೋಂ ರನ್ ವೇ ವಿಸ್ತರಣೆ ಮಾಡುವುದು ಹಾಗೂ ಈ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಲು ಸರ್ಕಾರದಿಂದ ಏನು ಮಾಡಬಹುದು ಎನ್ನುವ ಬಗ್ಗೆ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಹಾಗೂ ಏರೋಡ್ರೋಂ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಈ ಬಗ್ಗೆ ಸರ್ಕಾರದ ಮುಂದೆ ಎರಡು ಯೋಜನೆಗಳಿವೆ. ಇಲ್ಲಿ ಮೇಲ್ಸೇತುವೆ ಬಂದಿರುವುದರಿಂದ ಸ್ವಲ್ಪ ಅಡಚಣೆಯಾಗುತ್ತಿದೆ. ಮೇಲ್ಸೇತುವೆ ಬರುವ ಬಗ್ಗೆ ಮೊದಲೇ ತಿಳಿದಿರಲಿಲ್ಲ. ಇಲ್ಲಿ 200 ಎಕರೆಗಿಂತಲೂ ಹೆಚ್ಚಿನ ಸ್ಥಳವಿದ್ದು, ಜಕ್ಕೂರು ವೈಮಾನಿಕ ತರಬೇತಿ ಶಾಲೆ ನಡೆಯುತ್ತಿದೆ. ಈ ಬಗ್ಗೆ ಸರ್ಕಾರ ಚಿಂತನೆ ನಡೆಸಿದ್ದು, ರನ್ ವೇ ವಿಸ್ತರಣೆಗೆ ಪಕ್ಕದಲ್ಲಿಯೇ ಜಮೀನನ್ನು ಪಡೆಯಬೇಕು. ಇದಕ್ಕೆ ಮೂರು ಎಕರೆಗಿಂತ ಹೆಚ್ಚು ಜಮೀನಿನ ಅಗತ್ಯವಿದೆ. ಮಾಲೀಕರು ಜಮೀನನ್ನು ಕೊಡುವುದಿಲ್ಲ ಎಂದು ಹೇಳುತ್ತಿದ್ದು, ಬೆಲೆ ಕೂಡ ದುಬಾರಿ ಆಗಿದೆ ಎಂದರು.

ಲಭ್ಯ ಸ್ಥಳವನ್ನು ಹೇಗೆ ಉಪಯೋಗಿಸಬೇಕು ಎಂದೂ ಚಿಂತನೆ ನಡೆಯುತ್ತಿದೆ. ವೈಮಾನಿಕ ತರಬೇತಿ ಶಾಲೆ ನಡೆಸಬೇಕೆನ್ನುವ ನ್ಯಾಯಾಲಯದ ಆದೇಶವಿದ್ದು, ಸರ್ಕಾರ ಇನ್ನೇನು ಮಾಡಬಹುದು ಎಂದು ಪರಿಶೀಲಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸೌಜನ್ಯತಾಯಿ ನಿರ್ಧರಿಸಬೇಕು: ಸರ್ವೋಚ್ಚ ನ್ಯಾಯಾಲಯಕ್ಕೆ ಸೌಜನ್ಯ ಪ್ರಕರಣವನ್ನು ಮೇಲ್ಮನವಿ ಸಲ್ಲಿಸಿದರೆ ಅದರ ವೆಚ್ಚವನ್ನು ಭರಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸಿಬಿಐ ಕೇಂದ್ರ ಸರ್ಕಾರ ಅಧೀನದಲ್ಲಿದ್ದು, ಆರೋಪಿಯನ್ನು ಖುಲಾಸೆ ಮಾಡಿದೆ. ಈಗ ಸುಪ್ರೀಂ ಕೋರ್ಟಿನ ವೆಚ್ಚ ಭರಿಸುವುದಾಗಿ ಹೇಳುತ್ತಿದ್ದಾರೆ. ಮೇಲ್ಮನವಿಗೆ ಪ್ರಕರಣ ಸೂಕ್ತವಾಗಿದೆಯೇ ಎಂಬುದನ್ನು ಸೌಜನ್ಯ ತಾಯಿ ನಿರ್ಧರಿಸಬೇಕು ಎಂದರು.

ರಾಜಕೀಯ ಪ್ರೇರಿತ ಯಾತ್ರೆ: ಧರ್ಮಸ್ಥಳಕ್ಕೆ ಬಿಜೆಪಿ ಮಾಡಿದ ಯಾತ್ರೆ ರಾಜಕೀಯ ಪ್ರೇರಿತ ಎಂದರು. ಧರ್ಮಸ್ಥಳ ಚಲೋ ಅಲ್ಲ, ರಾಜಕೀಯ ಚಲೋ ಎಂದು ಹೇಳಿದರು.

ಧರ್ಮಪ್ರಚಾರ ಅಲ್ಲ: ಅರಮನೆ ಮೈದಾನದಲ್ಲಿ ಅಲ್ಪಸಂಖ್ಯಾತರ ಸಮಾವೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಪ್ರವಾಸಿ ವೀಸಾ ಪಡೆದು ಧರ್ಮಪ್ರಚಾರ ಮಾಡುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿ ಆ ರೀತಿ ಏನಿಲ್ಲ. ಆಯೋಜಕರೊಂದಿಗೆ ಈ ಬಗ್ಗೆ ಮಾತನಾಡಿದೆ ಎಂದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ