Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿಕ್ಕಲದಿನಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ


ಬೆಳಗಾವಿ01: ಕಾಂಗ್ರೆಸ್ ಪಕ್ಷದ ಸಿದ್ದಾಂತ, ಅಭಿವೃದ್ಧಿಯನ್ನು ಮೆಚ್ಚಿ ಚಿಕ್ಕಲದಿನಿ ಗ್ರಾಮದ ಹಲವರು ಬಿಜೆಪಿ ಪಕ್ಷದ ಕಾರ್ಯಕರ್ತರು‌ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಸಂತಸ ತಂದಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.


ಚಿಕ್ಕೋಡಿ ನಗರದ ನಿವಾಸದಲ್ಲಿ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಚಿಕ್ಕಲದಿನಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ವೇಳೆ ಅವರು ಮಾತನಾಡಿ,  ಕಾಂಗ್ರೆಸ್‌ ಪಕ್ಷ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳನ್ನು ಮನೆ ಮನೆಗೆ ತಿಳಿಸಿ ಈ ಭಾರಿ ಚಿಕ್ಕೋಡಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು ಎಂದರು.


ರಾಜ್ಯದಲ್ಲಿ ಸತತ ಕಾಂಗ್ರೆಸ್ ಸರ್ಕಾರಗಳು ಹಲವಾರು ಅಭಿವೃದ್ಧಿ ಯೋಜನೆಗಳು ಮತ್ತು ಕಲ್ಯಾಣ ಕಾರ್ಯಕ್ರಮಗಳನ್ನು ಪರಿಚಯಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿವೆ. ಪ್ರಸ್ತುತ ಕಾಂಗ್ರೆಸ್ ಸರ್ಕಾರ ಐದು ಭರವಸೆಗಳನ್ನು ಜಾರಿಗೊಳಿಸುವ ಮೂಲಕ ಮತದಾರರಿಗೆ ನೀಡಿದ ಭರವಸೆಯನ್ನು ಉಳಿಸಿಕೊಂಡಿದೆ. ಇದು ಸಾಮಾನ್ಯ ಜನರ ಸಬಲೀಕರಣಕ್ಕೆ ಕಾರಣವಾಗಿದೆ. ಆದ್ದರಿಂದ ಕೈ ಕಾರ್ಯಕರ್ತರು ಹಗಲಿರಳು ಶ್ರಮಿಸಿ ಕಾಂಗ್ರೆಸ್‌ ಪಕ್ಷಕ್ಕೆ ಶಕ್ತಿ ತುಂಬವ ಕೆಲಸ ಮಾಡಬೇಕು ಎಂದರು.


ಈ ಸಂದರ್ಭದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ‌ ಸೇರಿದಂತೆ ಚಿಕ್ಕಲದಿನಿ ಗ್ರಾಮದ ಯುವಕರು ಹಾಗೂ ಮುಖಂಡರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ