LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಬಾಲ್ಯವಿವಾಹ ಸಮಾಜಕ್ಕೆ ಮಾರಕ, ಕಾನೂನುಬಾಹಿರ: ಸಂಡೂರಿನಲ್ಲಿ ಜಾಗೃತಿ ಕಾರ್ಯಕ್ರಮ

ಬಳ್ಳಾರಿ,ಸೆ.16: 18 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಹಾಗೂ 21 ವರ್ಷದೊಳಗಿನ ಗಂಡುಮಕ್ಕಳಿಗೆ ಮದುವೆ ಮಾಡುವುದು ಕಾನೂನುಬಾಹಿರವಾಗಿದ್ದು, ಇದು ಸಮಾಜಕ್ಕೆ ದೊಡ್ಡ ಪಿಡುಗಾಗಿದೆ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪಿ. ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಳ್ಳಾರಿ, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಂಡೂರು ಹಾಗೂ ಎಸ್.ಇ.ಎಸ್ ಬಾಲಕಿಯರ ಪ್ರೌಢಶಾಲೆ ಸಂಡೂರು ಇವರ ಸಂಯುಕ್ತಾಶ್ರಯದಲ್ಲಿ ಶಾಲಾ ಸಭಾಭವನದಲ್ಲಿ ವಿದ್ಯಾರ್ಥಿನಿಯರಿಗಾಗಿ ಹಮ್ಮಿಕೊಳ್ಳಲಾಗಿದ್ದ ‘ಬಾಲ್ಯವಿವಾಹ ನಿಷೇಧ ಹಾಗೂ ಹದಿಹರೆಯದವರ ಆರೋಗ್ಯ ರಕ್ಷಣೆ’ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಡತನ, ಅಜ್ಞಾನ, ಮೂಢನಂಬಿಕೆ ಹಾಗೂ ಕುಟುಂಬದ ಆಸ್ತಿ ಉಳಿಸಿಕೊಳ್ಳುವ ಉದ್ದೇಶದಿಂದ ಇಂದಿಗೂ ಬಾಲ್ಯವಿವಾಹಗಳು ನಡೆಯುತ್ತಿರುವುದು ವಿಷಾದನೀಯ. ಇದರಿಂದ ಹೆಣ್ಣುಮಕ್ಕಳ ಶಿಕ್ಷಣ ಮತ್ತು ಭವಿಷ್ಯಕ್ಕೆ ಅಡ್ಡಿಯಾಗುವುದಲ್ಲದೆ, ಅವರ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತದೆ. ಬಾಲ್ಯದಲ್ಲಿ ಗರ್ಭಧಾರಣೆಯಾಗುವುದರಿಂದ ರಕ್ತಹೀನತೆ, ಅಪೌಷ್ಟಿಕತೆ, ತಾಯಿ ಮತ್ತು ಶಿಶು ಮರಣದ ಅಪಾಯಗಳು ಹೆಚ್ಚಾಗುತ್ತವೆ ಎಂದು ಅವರು ತಿಳಿಸಿದರು.
ಬಾಲ್ಯವಿವಾಹ ನಿಷೇಧ ಕಾಯ್ದೆ-2006ರ ಪ್ರಕಾರ ಬಾಲ್ಯವಿವಾಹ ಮಾಡಿಸುವುದು, ಅದರಲ್ಲಿ ಭಾಗಿಯಾಗುವುದು ಅಥವಾ ಪ್ರೋತ್ಸಾಹಿಸುವುದು ಶಿಕ್ಷಾರ್ಹ ಅಪರಾಧ. ತಪ್ಪಿತಸ್ಥರಿಗೆ 2 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷದವರೆಗೆ ದಂಡ ವಿಧಿಸಲು ಅವಕಾಶವಿದೆ. ಬಾಲ್ಯವಿವಾಹ ನಡೆಯುತ್ತಿರುವುದು ಕಂಡುಬAದರೆ ಸಾರ್ವಜನಿಕರು ತಕ್ಷಣ ಮಕ್ಕಳ ಉಚಿತ ಸಹಾಯವಾಣಿ 1098 ಅಥವಾ 112ಕ್ಕೆ ಕರೆ ಮಾಡಿ ದೂರು ನೀಡಬಹುದು ಎಂದು ಮಾಹಿತಿ ನೀಡಿದರು.
ಇದೇ ವೇಳೆ ಪೋಕ್ಸೋ ಕಾಯ್ದೆ-2012 ಹಾಗೂ ಮಾನಸಿಕ ಆರೋಗ್ಯ ನೆರವಿಗಾಗಿ ‘ಟೆಲಿ-ಮನಸ್’ (14416) ಉಚಿತ ಸಹಾಯವಾಣಿಯ ಬಗ್ಗೆಯೂ ಜಾಗೃತಿ ಮೂಡಿಸಿದರು.
ಹಿರಿಯ ಆರೋಗ್ಯ ನಿರೀಕ್ಷಾಣಾಧಿಕಾರಿ ಬಂಡೇಗೌಡ ಅವರು ಕ್ಷಯ, ಕುಷ್ಠರೋಗ ಹಾಗೂ ಸೊಳ್ಳೆಗಳಿಂದ ಹರಡುವ ಮಲೇರಿಯಾ, ಡೆಂಗ್ಯೂ ಮುಂತಾದ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ಕುರಿತು ವಿವರವಾಗಿ ಮಾತನಾಡಿದರು. ಆರ್.ಕೆ.ಎಸ್.ಕೆ ಆಪ್ತಸಮಾಲೋಚಕ ಪತ್ರೆಗೌಡ ಅವರು ಮೈತ್ರಿ ಮುಟ್ಟಿನ ಕಪ್ ಬಳಕೆ ಹಾಗೂ ಪೋಷಣ್ ಮಾಸಾಚರಣೆಯ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯ ಕಲ್ಲಯ್ಯ ಮಠ ಅವರು ವಹಿಸಿದ್ದರು.
ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಅನಸೂಯ, ಎಚ್.ಐ.ಒ ಅನುಷಾ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಸಮಾರಂಭದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಶಾಲೆಯ ನೂರಾರು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಗರದ 76 ಮನೆಗಳಿಗೆ ಪ್ರಧಾನಿ ನಮೋ ಹುಟ್ಟುಹಬ್ಬದ ಪ್ರಯುಕ್ತ ದೀಪ ವಿತರಣೆಭರವಸೆ ನೀಡಿದಂತೆ ಎರಡನೇ ಹಂತದ ಅನುದಾನದ ಚೆಕ್ ಹಸ್ತಾಂತರಿಸಿದ ಲಕ್ಷ್ಮೀ ಹೆಬ್ಬಾಳಕರ್ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿ ಮೂರು ದಿನಗಳ ಕಾಲ ಬಳ್ಳಾರಿ ಧ್ಯಾನ ಮಹಾಯಜ್ಞ 10 : ಕಾರ್ಯಕ್ರಮ ತಂತ್ರಜ್ಞಾನ ಕ್ಷೇತ್ರದಲ್ಲಿ ಸರ್ ಎಂವಿ ಅವರ ಕೊಡುಗೆ ಅಪಾರವಾದದ್ದು :  ಎಚ್ ಮಹಾಬಲೇಶ್ವರ ಕೇಂದ್ರ ಸಾಂಖ್ಯಿಕ ಕಚೇರಿ ಪ್ರಾದೇಶಿಕ ಕ್ರೀಡಾಕೂಟ: ಬಳ್ಳಾರಿಗೆ ಕ್ರಿಕೆಟ್, ಹುಬ್ಬಳ್ಳಿಗೆ ಬ್ಯಾಡ್ಮಿಂಟನ್ ಪ್ರಶಸ್ತಿಬಳ್ಳಾರಿ ಜಿಲ್ಲೆಯಲ್ಲಿ ಗಣೇಶ ಹಬ್ಬಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್: ಡಿಜೆ ಸೌಂಡ್ ಸಿಸ್ಟಮ್ ಹಾಗೂ ಮದ್ಯ ಮಾರಾಟಕ್ಕೆ ನಿಷೇಧಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಸರ್ವಜ್ಞ ವಿದ್ಯಾಪೀಠ ವಿದ್ಯಾರ್ಥಿಗಳ ಸಾಧನೆ ಸಕಾಲಕ್ಕೆ ಸಾಲ ಮರುಪಾವತಿಸಿ ಸಂಘದ ಅಭಿವೃದ್ಧಿಗೆ ಸಹಕರಿಸಿ: ಬಸನಗೌಡ