Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲ್ಯ ವಿವಾಹ ಪದ್ಧತಿ ನಿಷೇಧವಾಗಬೇಕು - ಹುಲ್ಲೇಶ್ ಸಿಂದೋಗಿ





ಕೊಪ್ಪಳ: ಶಾಲಾ ಶಿಕ್ಷಣ ಇಲಾಖೆ ಹಾಗೂ ಕಲಿಕೆ ಟಾಟಾ ಟ್ರಸ್ಟ್ ಸಂಸ್ಥೆಯವರು ಹಲವಾರು ಕಾರ್ಯಕ್ರಮಳನ್ನು ಆಯೋಜಿಸುವ ಮೂಲಕ ಮಕ್ಕಳಲ್ಲಿ ಓದುವ ಹವ್ಯಾಸ ಮೂಡಿಸುತ್ತಿದ್ದಾರೆ. ಜೊತೆಗೆ ಬಾಲ್ಯ ವಿವಾಹ ಪದ್ಧತಿ ನಿಷೇಧವಾಗಬೇಕೆಂದು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಶಾಲೆ ಬಿಟ್ಟ ಮಕ್ಕಳನ್ನು ಶಾಲೆ ಸೇರಿಸುವ ಯೋಜನೆ ಹಮ್ಮಿಕೊಂಡಿದ್ದು ನಿಜಕ್ಕೂ ಸ್ತುತ್ಯವೆಂದು ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷ ಹುಲ್ಲೇಶ್ ಸಿಂದೋಗಿ ಹೇಳಿದರು.

ಜಿಲ್ಲೆಯ ಶಹಪುರ ಗ್ರಾಮದ ಕನಕ ಭವನದಲ್ಲಿ `ರಂಗ ಕಲಾ ಚೇತನ' ತಂಡದಿAದ ಹಮ್ಮಿಕೊಂಡಿದ್ದ ಸಮುದಾಯ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ರಂಗ ಕಲಾ ಚೇತನ ತಂಡದವರು ಈ ಉತ್ತಮ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದು ಶ್ಲಾಘನೀಯ ಎಂದರು.

ಹುಲಿಗೆಮ್ಮ ಕಟ್ಟಿಮನಿ ಅವರು ಮಾತನಾಡಿ, ತಾಲೂಕಿನ ಆಯ್ದ ಶಾಲೆಗಳಲ್ಲಿ ಗ್ರಂಥಾಲಯ ಕೊಠಡಿ ನಿರ್ಮಿಸಿ, ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ಜೊತೆಗೆ ಪ್ರೇರಕರನ್ನು ನೀಡಿ ಕಲಿಕಾಸಕ್ತಿ ಮೂಡಿಸಲು ಕಲಿಕಾ ಸಂಸ್ಥೆ ಶ್ರಮಿಸುತ್ತಿದೆ. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಅರಿವು ಮೂಡಿಸುತ್ತಾ ಉತ್ತಮ ಸಮಾಜ ನಿರ್ಮಿಸಲು ಮುಂದಾಗಿದ್ದಾರೆ ಎಂದರು.

ಕಲಿಕೆ ಟಾಟಾ ಟ್ರಸ್ಟ್ಸ್ ನ ಸಂಯೋಜಕ ಆಂಜನೇಯ ಮಾತನಾಡಿ, ಕಲಿಕಾ ಸಂಸ್ಥೆಯು ಸಮುದಾಯ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳು ಮತ್ತು ನಾಗರಿಕರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದು ತಮ್ಮ ಯೋಜನೆಗಳನ್ನು ಹಂಚಿಕೊAಡರು.

ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕಲಿಕೆ ಟಾಟಾ ಟ್ರಸ್ಟ್ ಸಹಭಾಗಿತ್ವದಲ್ಲಿ "ರಂಗ ಕಲಾ ಚೇತನ ತಂಡದಿAದ" ಸಮುದಾಯ ಜಾಗೃತಿ ಕಾರ್ಯಕ್ರಮ ಜರುಗಿತು.
ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಸುಧಾರಣಾ ಸಮಿತಿ ಉಪಾಧ್ಯಕ್ಷೆ ರೇವತಿ ಗೋನಾಳ್, ಸರ್ವ-ಸದಸ್ಯರು, ಶಾಲೆಯ ಸಿಬ್ಬಂದಿಯವರು, ಗ್ರಾಮ ಪಂಚಾಯತ್ ಸರ್ವಸದಸ್ಯರು, ಆಶಾ ಕಾರ್ಯಕರ್ತೆಯರು, ಮಹಿಳಾ ಸ್ವ-ಸಹಾಯ ಸಂಘದವರು, ವಿವಿಧ ಸಂಘಟನೆಯ ಪದಾಧಿಕಾರಿಗಳು, ಪ್ರೇರಕರು, ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಪೋಷಕರು, ಗುರುಹಿರಿಯರು ಭಾಗವಹಿಸಿದ್ದರು.

ಶಾಲಾ ಮುಖ್ಯೋಪಾಧ್ಯಾಯ ದೇವರಾಜ್ ಅವರು ಹಲಗೆ ನುಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗ್ರಾ. ಪಂ ಸದಸ್ಯರು, ಗ್ರಾಮದ ಗಣ್ಯ ಮಾನ್ಯರು ಇದ್ದರು.








Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ