Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bijapur

ಮಕ್ಕಳಿಗೆ ಭಯಮುಕ್ತವಾಗಿ ಬದುಕುವ ಹಕ್ಕಿದೆ-ಶ್ರೀ ರಾಮಮೂರ್ತಿ

ಸುರಕ್ಷಿತ ಬಾಲ್ಯ ಅಭಿಯಾನ ಕಾರ್ಯಕ್ರಮ 



ತಾಳಿಕೋಟೆ, ಮಕ್ಕಳು ದೇಶದ ಭವಿಷ್ಯ, ಸಮಾಜದ ಅಮೂಲ್ಯ ಆಸ್ತಿ. ಪ್ರತಿಯೊಂದು ಮಗುವಿಗೂ ಭಯಮುಕ್ತವಾಗಿ ಬದುಕುವ, ಶಿಕ್ಷಣ ಪಡೆಯುವ, ಆಟವಾಡುವ, ತನ್ನ ಪ್ರತಿಭೆಯನ್ನು ಬೆಳೆಸಿಕೊಳ್ಳುವ ಹಾಗೂ ಗೌರವಯುತ ಜೀವನ ನಡೆಸುವ ಹಕ್ಕಿದೆ ಎಂದು ಮುದ್ದೇಬಿಹಾಳ ತಾಲ್ಲೂಕು ಸಿವಿಲ್ ನ್ಯಾಯಾಧೀಶರು ಮತ್ತು  ತಾಲೂಕು ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿಗಳಾದ ಗೌರವಾನ್ವಿತ ಶ್ರೀ ರಾಮಮೂರ್ತಿ ಎನ್. ಅವರು ನುಡಿದರು.
     ಪಟ್ಟಣದ ಎಸ್.ಕೆ.ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕಾ ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಎಸ್.ಕೆ.ಪ್ರೌಢ ಶಾಲೆ ತಾಳಿಕೋಟೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಶಾಲೆಯ ಸಭಾ ಭವನದಲ್ಲಿ ನಡೆದ ‘ಸುರಕ್ಷಿತ ಬಾಲ್ಯ ಅಭಿಯಾನ ಕಾರ್ಯಕ್ರಮ’ ಉದ್ಘಾಟಿಸಿ ಮಾತನಾಡಿದರು. ಬಾಲ್ಯವೆಂಬುದು ಪ್ರತಿಯೊಬ್ಬರ ಜೀವನದ ಅತ್ಯಂತ ಸುಂದರವಾದ ಹಂತ. ಈ ಬಾಲ್ಯ ಸುರಕ್ಷಿತವಾಗಿದ್ದಾಗ ಮಾತ್ರ ಮಗುವಿನ ವ್ಯಕ್ತಿತ್ವ ಸಮಗ್ರವಾಗಿ ವಿಕಸನಗೊಳ್ಳಲು ಸಾಧ್ಯವಿದೆ. ಆದರೆ ಇಂದಿನ ಆಧುನಿಕ ಯುಗದಲ್ಲಿ ವಿಜ್ಞಾನ, ತಂತ್ರಜ್ಞಾನ, ಸಾಮಾಜಿಕ ಜಾಲತಾಣಗಳು ಹಾಗೂ ಜೀವನಶೈಲಿಯಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಈ ಬದಲಾವಣೆಗಳು ಮಕ್ಕಳಿಗೆ ಅನೇಕ ಅವಕಾಶಗಳನ್ನು ಒದಗಿಸಿವೆ. ಅದೇ ಸಮಯದಲ್ಲಿ ಹೊಸ ರೀತಿಯ ಅಪಾಯಗಳು, ದುಶ್ಚಟಗಳು, ಸಾಮಾಜಿಕ ಒತ್ತಡಗಳು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳಿಗೂ ಕಾರಣವಾಗುತ್ತಿವೆ. ಇಂದಿನ ಮಕ್ಕಳು ಮೊಬೈಲ್, ಇಂಟರ್ನೆಟ್, ಸಾಮಾಜಿಕ ಜಾಲತಾಣಗಳು ಹಾಗೂ ಆಧುನಿಕ ಜೀವನಶೈಲಿಯ ಪ್ರಭಾವಕ್ಕೆ ಒಳಗಾಗುತ್ತಿದ್ದಾರೆ. ಕೆಲವೊಮ್ಮೆ ಅರಿವಿನ ಕೊರತೆಯಿಂದ ತಪ್ಪು ಸ್ನೇಹ, ಕೆಟ್ಟ ಚಟಗಳು, ಸೈಬರ್ ಕಿರುಕುಳ ಮತ್ತು ಅನಗತ್ಯ ಆಕರ್ಷಣೆಗಳಿಗೆ ಬಲಿಯಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ನೀಡುವುದು ಪೋಷಕರು, ಶಿಕ್ಷಕರು ಮತ್ತು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ತಂತ್ರಜ್ಞಾನ ನಮ್ಮ ಅಭಿವೃದ್ಧಿಗೆ ಸಹಕಾರಿಯಾಗಬೇಕೇ ಹೊರತು ನಮ್ಮ ಬದುಕಿಗೆ ಅಪಾಯವಾಗಬಾರದು. ಮಕ್ಕಳ ರಕ್ಷಣೆಗಾಗಿ ಇರುವ ಪ್ರಮುಖ ಕಾನೂನುಗಳು ಭಾರತದಲ್ಲಿ ಮಕ್ಕಳ ಹಕ್ಕುಗಳು ಮತ್ತು ಸುರಕ್ಷತೆಯನ್ನು ಕಾಪಾಡಲು ಹಲವು ಕಾನೂನುಗಳನ್ನು ಜಾರಿಗೆ ತರಲಾಗಿದೆ. ಪೋಕ್ಸೋ ಕಾಯಿದೆ ಇದು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯಿದೆ. ಬಾಲ ನ್ಯಾಯ ಕಾಯಿದೆ ಇದು ಆರೈಕೆ, ರಕ್ಷಣೆ ಮತ್ತು ಪುನರ್ವಸತಿ ಅಗತ್ಯವಿರುವ ಮಕ್ಕಳ ರಕ್ಷಣೆ ಕಾಯಿದೆ. ಶಿಕ್ಷಣ ಹಕ್ಕು ಕಾಯಿದೆ ಇದು  ಅನ್ವಯ ೬ರಿಂದ ೧೪ ವರ್ಷದ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ; ದೈಹಿಕ ಶಿಕ್ಷೆ ಮತ್ತು ಮಾನಸಿಕ ಕಿರುಕುಳ ನಿಷೇಧ ಕಾಯಿದೆ ಆಗಿದೆ. ಬಾಲ್ಯವಿವಾಹ ನಿಷೇಧ ಕಾಯಿದೆ ಇದು ಬಾಲ್ಯವಿವಾಹ ತಡೆಗಟ್ಟುವುದು. ಬಾಲಕಾರ್ಮಿಕ ಪದ್ಧತಿ ನಿಷೇಧ ಮತ್ತು ನಿಯಂತ್ರಣ ಕಾಯಿದೆ ಕಾನೂನುಬಾಹಿರವಾಗಿ ಕೆಲಸಕ್ಕೆ ಬಳಸುವುದನ್ನು ತಡೆಗಟ್ಟುವುದಾಗಿದೆ. ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕಾಯಿದೆ ಇದು ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಉಲ್ಲಂಘನೆಗಳ ಪರಿಶೀಲನೆ ಕಾಯಿದೆ ಆಗಿದೆ. ತಾಯಿ ಮಗುವಿನೊಂದಿಗೆ ಸ್ನೇಹಿತೆಯಂತೆ ಬೆರೆಯಬೇಕು. ಮಗುವಿನ ಭಾವನೆಗಳನ್ನು ಆಲಿಸಬೇಕು. ಅದರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಬೇಕು. ಮಕ್ಕಳು ತಮ್ಮ ಮನಸ್ಸಿನ ನೋವು, ಭಯ, ಅನುಮಾನ ಹಾಗೂ ಅನುಭವಗಳನ್ನು ಯಾವುದೇ ಮುಜುಗರವಿಲ್ಲದೆ ತಾಯಿಯೊಂದಿಗೆ ಹಂಚಿಕೊಳ್ಳುವಂತಹ ವಾತಾವರಣವನ್ನು ಮನೆಯಲ್ಲಿ ನಿರ್ಮಿಸಬೇಕು. ಮಕ್ಕಳಿಗೆ ಕೇವಲ ಉತ್ತಮ ಅಂಕಗಳನ್ನು ಗಳಿಸುವುದನ್ನೇ ಕಲಿಸದೆ, ಆತ್ಮರಕ್ಷಣೆ, ಸ್ವಾಭಿಮಾನ, ನೈತಿಕ ಮೌಲ್ಯಗಳು ಮತ್ತು ಜೀವನ ಕೌಶಲ್ಯಗಳನ್ನು ಕಲಿಸಬೇಕು ಎಂದರು.
      ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ಮುದ್ದೇಬಿಹಾಳ ನ್ಯಾವಾದಿಗಳಾದ ಆರ್.ವಾಯ್.ನಾಲತವಾಡ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಮಾತನಾಡಿ ಶಾಲೆಗಳಲ್ಲಿ ಮಕ್ಕಳಿಗೆ ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು.ಪೋಕ್ಸೋ ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಕುರಿತು ಮಾಹಿತಿ ನೀಡಬೇಕು. ಒಳ್ಳೆಯ ಸ್ಪರ್ಶ ಮತ್ತು ಕೆಟ್ಟ ಸ್ಪರ್ಶದ ಬಗ್ಗೆ ತಿಳಿಸಬೇಕು.ಶಾಲೆಯಲ್ಲಿ ದೂರು ಪೆಟ್ಟಿಗೆ ಮತ್ತು ದೂರು ಸಲ್ಲಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು.     
       ವೇದಿಕೆಯಲ್ಲಿ ಕ್ಷೇತ್ರ ಸಮನ್ವಯ ಅಧಿಕಾರಿ ಆರ್.ಬಿ.ದಮ್ಮೂರಮಠ, ಇಸಿಒ. ಎಸ್.ಎಸ್.ಹಿರೇಮಠ, ಉಪಪ್ರಾಚಾರ್ಯ ಆರ್.ಎಸ್.ಬೂದಿಹಾಳ, ಪ್ರಾಚಾರ್ಯ ಶ್ರೀಮತಿ ಜ್ಯೋತಿ ಹಿರೇಮಠ, ಇದ್ದರು.
   ಅಧ್ಯಕ್ಷತೆಯನ್ನು ಪ್ರಾಚಾರ್ಯ ಕಿಶೋರಕುಮಾರ ವಹಿಸಿದ್ದರು.
       ಮುಖ್ಯೋಪಾಧ್ಯಾಯ ಡಾ.ಅನಿಲಕುಮಾರ ಇರಾಜ ಸ್ವಾಗತಿಸಿದರು, ಸಿಆರ್ಸಿ ರಾಜಾಸಿಂಗ್ ವಿಜಾಪುರ ನಿರೂಪಿಸಿ ವಂದನೆ ಸಲ್ಲಿಸಿದರು. 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಆಯೋಜನೆ: ಸಚಿವ ಸಂತೋಷ ಎಸ್. ಲಾಡ್ಸಮಾಜದ ಮುಖ್ಯ ವಾಹಿನಿಗೆ ವಿಕಲ ಚೇತನರು ಮುಂದೆ ಬರಬೇಕು : ಬಾಲಚಂದ್ರ ಜಾರಕಿಹೊಳಿಶ್ರೀ ಸಾಯಿ ಕಾಲೇಜಿನ ಶಿಬಿರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಕನ್ನಡ ಕಟ್ಟುವಲ್ಲಿ ಧಾರವಾಡದ ಧುರೀಣರ ಕೊಡುಗೆ ಅಪಾರ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ವಿಧಾನ ಪರಿಷತ್ ಸದಸ್ಯ  ಸ್ಥಾನಕ್ಕೆ ಐದನೇ ಬಾರಿ ಆಯ್ಕೆಯಾದ ಶಶೀಲ್. ಜಿ. ನಮೋಶಿ ಅವರಿಗೆ ಹೊಸಪೇಟೆ ಯಲ್ಲಿ ಅದ್ಧೂರಿ ಸ್ವಾಗತ*ಬಿಜೆಪಿ ಮೋರ್ಚಾ ಪದಾಧಿಕಾರಿಗಳ ಮಹತ್ವದ ಸಭೆ*ಮಹಿಳಾ ಸಾಹಿತಿಗಳ ನಿರ್ಲಕ್ಷ್ಯ ಖಂಡನೀಯ-ಡಾ.ಸುಜಾತಾ ಚಲವಾದಿವಿಶ್ವವಿದ್ಯಾಲಯ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವಿಶ್ವವಿದ್ಯಾಲಯ ಬಾಸ್ಕೆಟ್‌ಬಾಲ್ ತಂಡಕ್ಕೆ ತನ್ವೀರ್ ಆಯ್ಕೆಶ್ರೀ ವಿಶ್ವಗುರು ಸೌಹಾರ್ದ ಸೊಸೈಟಿ  ಅಧ್ಯಕ್ಷರಾಗಿ ಅರವಿಂದ ಬಡಕುಂದ್ರಿ, ಉಪಾಧ್ಯಕ್ಷರಾಗಿ ಬರಮಪ್ಪ ನಾಗನೂರ ಆಯ್ಕೆ.ಹತ್ತು ವರ್ಷಗಳಿಂದ ಪರಿಹಾರಕ್ಕಾಗಿ ಹೋರಾಟ: 95 ರೈತರಿಗೆ ₹54 ಕೋಟಿ ರೂ. ವಿತರಣೆ