Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳ ಚಿತ್ರ ಪಂಚ ರತ್ನಗಳು

     ಪ್ರದರ್ಶಕ ಮತ್ತು ವಿತರಕರಾಗಿರುವ ಜಿ.ಆರ್.ನಾರಾಯಣ ಗೌಡ ಅವರು  ಶ್ರೀಕ್ಯಾಲಮ್ಮ ದೇವಿ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಒಂದಷ್ಟು ಚಿತ್ರಗಳಲ್ಲಿ ನಟನೆ ಮಾಡಿರುವ ಮೈಸೂರು ಮೂಲದ ಗಾಯಕ ಗೌತಮ್ ಆರ್. ಚಿತ್ರಕ್ಕೆ ಕಥೆ,ಚಿತ್ರಕಥೆ, ಸಂಭಾಷಣೆ, ಮೂರು ಹಾಡುಗಳಿಗೆ ಸಾಹಿತ್ಯ ಬರೆದು ಎರಡನೇ ಬಾರಿ ನಿರ್ದೇಶನದ ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.

     ತಾರಾಗಣದಲ್ಲಿ ಚಿಣ್ಣರಾದ ಪ್ರಥಮ್, ಯಶಸ್, ವಿಹಾನ್, ತನ್ವಿ, ಆಧ್ಯ ಪ್ರಥಮ್, ತಾಯಿಯಾಗಿ ಬಿಂದೂ ಆಚಾರ್ಯ, ಶಿಕ್ಷಣ ಸಚಿವರಾಗಿ ಆನಂದ್ ನಗರ್ಕರ್ ಮುಂತಾದವರು ಅಭಿನಯಿಸಿದ್ದಾರೆ.

     ಸಂಗೀತ ಪ್ರಣವ್, ಛಾಯಾಗ್ರಹಣ ಅನಿಲ್ ಕಶ್ಯಪ್, ಸಂಕಲನ ಅಭಿಷೇಕ್, ಸಿಂಕ್ ಸೌಂಡ್ ಅಜಿತ್, ಪೋಸ್ಟ್ ಪ್ರೊಡಕ್ಷನ್ ಕ್ರಿಷ್ ಸ್ಟುಡಿಯೋಸ್ ಅವರದಾಗಿದೆ. ವೆಂಕಟ್‌ಗೌಡ ಸಾರಥ್ಯದಲ್ಲಿ ಸುಮಾರು 60 ಕೇಂದ್ರಗಳಲ್ಲಿ ಸಿನಿಮಾವು ಸದ್ಯದಲ್ಲೇ ತೆರೆಗೆ ಬರಲಿದೆ.

      ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು "ಇಂದಿನ ಸಮಾಜದ ದೈನಂದಿಕ ಸಮಸ್ಯೆಗಳನ್ನು ದೊಡ್ಡವರು ಗಮನಕ್ಕೆ ತೆಗೆದುಕೊಳ್ಳದೆ ಇರುವುದರಿಂದ ವಿಷಯವು ಸರ್ಕಾರಕ್ಕೆ ತಲುಪದೆ ಇರುವುದರಿಂದ ಯಾರನ್ನು ದೂರುವುದರಿಂದ ಪ್ರಯೋಜನವಿಲ್ಲ. ಇದನ್ನು ಅರಿತ ಐದು ಮಕ್ಕಳು ನಾವೇ ಮುಂದಾಗಿ ಏಕೆ ಸರಿಪಡಿಸಬಾರದು ಅಂತ ತೀರ್ಮಾನಕ್ಕೆ ಬರುತ್ತಾರೆ. ಪ್ರಾರಂಭದಲ್ಲಿ ’ಪಂಚ ಭೂತಗಳು’ ಹೆಸರು ಇಡಲಾಗಿತ್ತು. ವಿತರಕ ವೆಂಕಟ್‌ಗೌಡ ಶೀರ್ಷಿಕೆ ನಕರಾತ್ಮಕ ಸಂದೇಶ ಸಾರುವುದರಿಂದ ’ಪಂಚ ರತ್ನಗಳು’ ಸೂಕ್ತವಾಗಿದೆ ಎಂದು ಸಲಹೆ ನೀಡಿದ್ದರಿಂದ ಅದನ್ನೆ ಇಡಲಾಯಿತು. ಪ್ರಕೃತಿಯ ಅಂಶಗಳಾದ ಭೂಮಿ, ನೀರು, ಬೆಂಕಿ, ಗಾಳಿ, ಆಕಾಶ ಇವುಗಳನ್ನು ಭುವನ್, ಜೀವಿತ, ಜ್ಯೋತಿ, ಅನಿಲ್ ಹಾಗೂ ಆಕಾಶ್ ಪಾತ್ರದ ಹೆಸರಿನಲ್ಲಿ ಬಿಂಬಿಸಲಾಗಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ" ಎಂದು ಮಾಹಿತಿಯನ್ನು ಗೌತಮ್ ಆರ್. ತೆರೆದಿಟ್ಟರು

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*