Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾಲೂಕ ಪಂಚಾಯತ  ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಸತ್ತಿಗೇರಿ ಗ್ರಾಮ ಪಂಚಾಯತ ಆವರಣ ಸ್ವಚ್ಛತೆ

ಯರಗಟ್ಟಿ ತಾಲೂಕಿನಾದ್ಯಂತ ಸ್ವಚ್ಛ ಶನಿವಾರ ಕಾರ್ಯಕ್ರಮ ಆಚರಣೆ

 

 

ಯರಗಟ್ಟಿ : ಜಿಲ್ಲಾ ಪಂಚಾಯತ ಬೆಳಗಾವಿಯ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ ಶಿಂಧೆ ರವರವ ನಿರ್ದೇಶನದಂತೆ ಯರಗಟ್ಟಿ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಹಾಗೂ ಸವದತ್ತಿ ತಾಲೂಕಿನ ೩೨ ಹಾಗೂ ಯರಗಟ್ಟಿ ತಾಲೂಕಿನ ೧೨ ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛ ಶನಿವಾರ ಅಭಿಯಾನದ ಶನಿವಾರದಂದು  ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ 

ಮಾನ್ಯ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಆನಂದ ಬಡಕುಂದ್ರಿ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ತಾಲೂಕ ಪಂಚಾಯತ ಆವರಣದಲ್ಲಿ ಹಾಗೂ  ಸವದತ್ತಿ ತಾಲೂಕಿನ ೩೨ ಹಾಗೂ ಯರಗಟ್ಟಿ ತಾಲೂಕಿನ ೧೨ ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛ ಶನಿವಾರ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.  ಸರ್ಕಾರಿ ಕಚೇರಿಗಳ ಸ್ವಚ್ಛತೆ ಹಾಗೂ ನಮ್ಮ ಸುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕೆಂಬುದು ಕಾರ್ಯಕ್ರಮದ ಉದ್ದೇಶವಾಗಿದೆ. ತಾಪಂನ ಅಧೀನದ ಎಲ್ಲ ಸರ್ಕಾರಿ ಕಚೇರಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಲಯದ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಕಾರ್ಯಾಲಯಗಳ ಆವರಣದಲ್ಲಿ ಪರಿಸರಸ್ನೇಹಿ ವಾತಾವರಣ ನಿರ್ಮಿಸಬೇಕು ಎಂದು ತಿಳಿಸಿದರು.

ಬಳಿಕ ಯರಗಟ್ಟಿ ತಾಲೂಕ ಪಂಚಾಯತಿಯಿಂದ ಸತ್ತಿಗೇರಿ ಆವರಣದಲ್ಲಿ ತಾಲೂಕ ಪಂಚಾಯತ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ತಾಲೂಕ ಪಂಚಾಯತ ಆವರಣವನ್ನು ಸ್ವಚ್ಛಗೊಳಿಸಿದರು. ತಮ್ಮ ವಿಭಾಗದ ದಾಖಲಾತಿಗಳನ್ನು ಕೂಡ ಸೂಕ್ತ ರೀತಿಯಲ್ಲಿ ಹೊಂದಿಸಿಕೊಂಡರು. 

ಈ ಸಂದರ್ಭದಲ್ಲಿ ಮಾನ್ಯ ಸಹಾಯಕ ನಿರ್ದೇಶಕರಾದ ಆರ್. ಎ. ಪಾಟೀಲ, ಅಕ್ಷರ ದಾಸೋಹ ಅಧಿಕಾರಿ ಮೈತ್ರಾದೇವಿ ವಸ್ತ್ರದ, ತಾ. ಪಂ. ವವ್ಯಸ್ಥಾಪಕರಾದೂ ಮಲ್ಲಿಕಾರ್ಜುನ ಕಂಬಿ, ಸತ್ತಿಗೇರಿ ಪಿಡಿಓ ಎ. ಬಿ. ಬಂಗಾರಿ, ಸಿದ್ದಪ್ಪ ಬೆಕ್ಕನ್ನವರ, ಚಂದ್ರಗೌಡ ಪಾಟೀಲ, ರಮೇಶ ಕೊಟ್ರಶೆಟ್ಟಿ, ಹಾಗೂ ತಾಲೂಕ ಪಂಚಾಯತ ಎಲ್ಲ ಸಿಬ್ಬಂದಿಗಳು ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ