Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇಘಸ್ಫೋಟದಿಂದ ಹಿಮಾಚಲ ಪ್ರದೇಶದಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆ

ಧರ್ಮಶಾಲಾ: ಹಿಮಾಚಲ ಪ್ರದೇಶದ 3 ಜಿಲ್ಲೆಗಳಲ್ಲಿ ಕಂಡುಬಂದ ಮೇಘಸ್ಫೋಟದಿಂದ ಉಂಟಾದ ದಿಢೀರ್‌ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, ಮಂಡಿ ಮತ್ತು ಶಿಮ್ಲಾ ಜಿಲ್ಲೆಗಳಲ್ಲಿ ಭಾನುವಾರ 4 ಮೃತದೇಹ ಪತ್ತೆಯಾಗಿದೆ. ಕಾಣೆಯಾದ 40ಕ್ಕೂ ಅಧಿಕ ಮಂದಿ ಇನ್ನೂ ಪತ್ತೆಯಾಗಿಲ್ಲ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.


ಜುಲೈ 31ರ ರಾತ್ರಿ ಹಿಮಾಚಲ ಪ್ರದೇಶದ ಕುಲ್ಲುವಿನ ನಿರ್ಮಾಂಡ್, ಸೈಂಜ್ ಮತ್ತು ಮಲಾನಾ, ಮಂಡಿಯ ಪಧರ್ ಮತ್ತು ಶಿಮ್ಲಾದ ರಾಂಪುರ ಉಪವಿಭಾಗದಲ್ಲಿ ಸರಣಿ ಮೇಘಸ್ಫೋಟ ಸಂಭವಿಸಿತ್ತು. ಕಳೆದ ಐದು ದಿನಗಳಲ್ಲಿ ಉಂಟಾದ ಮೇಘಸ್ಫೋಟ, ಪ್ರವಾಹ ಮತ್ತು ಭೂಕುಸಿತದಿಂದಾಗಿ ಹಿಮಾಚಲ ಪ್ರದೇಶದಲ್ಲಿನ ಒಟ್ಟು 87 ರಸ್ತೆಗಳ ಸಂಚಾರ ನಿರ್ಬಂಧಿಲಾಗಿದೆ.

ಯಂತ್ರೋಪಕರಣಗಳು, ಸ್ನಿಫರ್ ಶ್ವಾನದಳ, ಡ್ರೋನ್‌ ಮತ್ತು ಇತರ ಉಪಕರಣಗಳ ಮೂಲಕ ರಕ್ಷಣಾ ಸಿಬ್ಬಂದಿ ಶೋಧ ಕಾರ್ಯವನ್ನು ತೀವ್ರಗೊಳಿಸಿದ್ದಾರೆ. ಅವಶೇಷಗಳಡಿ ಸಿಲುಕಿರುವವರ ಪತ್ತೆ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದೆ. ಶಿಮ್ಲಾ ಮತ್ತು ಕುಲ್ಲು ಗಡಿಯಲ್ಲಿರುವ ಸಮೇಜ್, ಧಾರಾ ಸರ್ದಾ ಮತ್ತು ಕುಶ್ವಾ ಎಂಬ ಮೂರು ಹಳ್ಳಿಗಳಲ್ಲಿ ದುರಂತ ಸಂಭವಿಸಿದಾಗಿನಿಂದ ವಿದ್ಯುತ್ ಇಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಹೀಗಾಗಿ ವಿದ್ಯುತ್‌ ವ್ಯವಸ್ಥೆಯನ್ನು ಮರುಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಸೇನೆ, ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಐಟಿಬಿಪಿ, ಸಿಐಎಸ್ಎಫ್, ಹಿಮಾಚಲ ಪ್ರದೇಶ ಪೊಲೀಸ್ ಮತ್ತು ಗೃಹರಕ್ಷಕ ದಳದ 410 ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ʼʼಹೆಚ್ಚುವರಿಯಾಗಿ ಇನ್ನೂ 4 ಜೆಸಿಬಿ ಯಂತ್ರಗಳನ್ನು ನಿಯೋಜಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ನದಿಯಲ್ಲಿ ನೀರಿನ ಹರಿವು ಕಡಿಮೆಯಾದ ಕಾರಣ ಶೋಧ ಕಾರ್ಯಕ್ಕೆ ವೇಗ ಸಿಕ್ಕಿದೆʼʼ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.



Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*