LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಸಿಎಂ ಸಮ್ಮತಿ: ಹೆಬ್ಬಾಳಕರ್




ಬೆಂಗಳೂರು : ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.


ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ (LKG, UKG) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು ಸಿಎಂ ಸೂಚಿಸಿದ್ದಾರೆ ಎಂದು ಸಚಿವರು ಹೇಳಿದರು.


ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದ್ದು, ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದ್ದಾರೆ.  ಮಕ್ಕಳಿಗೆ ಇಲಾಖೆಐ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ತೀರ್ಮಾನಿಸಲಾಗಿದೆ. ಜೊತೆಗೆ ಶಾಲೆಗಳ ಮಾದರಿಯಲ್ಲೆ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮವಹಿಸಲಾಗುವುದು.


ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲೆ ದೊರೆಯಬೇಕೆಂಬ ಕಳಕಳಿಯಿಂದ ಶಿಕ್ಷಣ ಇಲಾಖೆಯೂ ಸರ್ಕಾರಿ ಮಾಂಟೆಸರಿ ಆರಂಭಿಸಲು ಮುಂದಾಗಿದ್ದು, ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿರೋಧ ವ್ಯಕ್ತವಾಗಿದೆ. ಈ‌ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಿ, ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಲಿಸುವ ಚಿಂತನೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ಪೂರ್ವಪ್ರಾಥಮಿಕ ಶಿಕ್ಷಣ ಆರಂಭಿಸುವ ಸಂಬಂಧ  ಈಗಾಗಲೇ ಅಂಗನವಾಡಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಾಗಿದೆ. ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಶಿಕ್ಷಕಿಯರ ಪೈಕಿ ೯ ಸಾವಿರ ಮಂದಿ ಪದವಿ ಪಡೆದವರಾಗಿದ್ದರೆ, ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಮಂದಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಹೀಗಾಗಿ, ಗುಣಮಟ್ಟದ ಶಿಕ್ಷಣ ನೀಡಿಕೆಗೆ ಯಾವುದೇ ಸಮಸ್ಯೆ ಆಗದು ಎಂದು ಹೇಳಿದ ಸಚಿವರು, ಯಾರನ್ನೂ ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.


ಮುಖ್ಯಮಂತ್ರಿಗಳೊಂದಿಗೆ ನಡೆದ ಸಭೆಯಲ್ಲಿ ಶಾಲಾ ಮತ್ತು ಪ್ರಾಥಮಿಕ ಶಿಕ್ಷಣದ ಸಚಿವ ಮಧು ಬಂಗಾರಪ್ಪ‌, ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.








Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್