Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುತ್ತಿಗೆ ಅವ್ಯವಹಾರದ ತನಿಖಾ ವರದಿ; ಕ್ರಮದ ಬಗ್ಗೆ ಸಿಎಂ, ಕ್ಯಾಬಿನೆಟ್ ನಿರ್ಧಾರ- ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

*ಬೆಂಗಳೂರು:*  ಗುತ್ತಿಗೆ ಅವ್ಯವಹಾರದ ತನಿಖಾ ವರದಿ ಸಲ್ಲಿಕೆ ಆಗಿದ್ದು ವರದಿಯಾನುಸಾರ ಮುಂದೆ ಕ್ರಮ ಕೈಗೊಳ್ಳುವ ಬಗ್ಗೆ ಮುಖ್ಯಮಂತ್ರಿಯವರು ಹಾಗೂ ಮಂತ್ರಿಮಂಡಲ ನಿರ್ಧರಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದ್ದಾರೆ.


ವಿಧಾನಸೌಧದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಂತಹ ಹಗರಣಗಳು ಒಂದೆರಡಲ್ಲ;  ಅದರಲ್ಲೂ ಪಿಎಸ್‌ ಐ ನೇಮಕಾತಿ,  ಉಪನ್ಯಾಸಕರ ನೇಮಕ, ಕೊರೋನಾ ಉಪಕರಣ ಖರೀದಿ, ಹೀಗೆ ಸಾಕಷ್ಟು ಹಗರಣಗಳು ನಡೆದಿದ್ದು, ಇವೆಲ್ಲದರ ಬಗ್ಗೆ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ಅವರು ಸಮಗ್ರ ತನಿಖೆ ನಡೆಸಿ, ಸರ್ಕಾರಕ್ಕೆ ವರದಿ ಒಪ್ಪಿಸಿದ್ದಾರೆ.  ವರದಿಯು ಸಚಿವ ಸಂಪುಟದ ಮುಂದೆ ಚರ್ಚೆ ಆಗಲಿದೆ. ಮುಖ್ಯಮಂತ್ರಿಯವರು ಮತ್ತು ಸಚಿವ ಸಂಪುಟ ಮುಂದೆ ನಿರ್ಧಾರ ಕೈಗೊಳ್ಳುತ್ತದೆ, ಅದರ ಮೇಲೆ ಕ್ರಮ ಆಗಲಿದೆ ಎಂದು ಸಚಿವರು ಹೇಳಿದರು.



 * *ನಟಿ ರನ್ಯಾ ರಾವ್‌  ಕೇಸ್; ಶಾಮೀಲಾಗಿದ್ದರೆ ಯಾರನ್ನೂ ಬಿಡುವುದಿಲ್ಲ*


ಚಿತ್ರ ನಟಿ ರನ್ಯಾ ರಾವ್‌  ಕೇಸ್ ಸಿಐಡಿ ವಿಚಾರಣೆ ವಾಪಸ್ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಟಿ ರನ್ಯಾ ರಾವ್‌ ಕೇಸಿನ ಬಗ್ಗೆ ಮಾಧ್ಯಮದವರು (ನೀವು) ಏನ್ನೆಲ್ಲ ತೋರಿಸುತ್ತಿದ್ದೀರೋ ಅಷ್ಟೇ ನಮಗೆ ಗೊತ್ತು. ನನ್ನ ಇಲಾಖೆಯಲ್ಲೇನು ಇಂಟೆಲಿಜೆನ್ಸಿ ಇಲ್ಲ. ಮುಖ್ಯಮಂತ್ರಿಯವರು ಮತ್ತು ಗೃಹಮಂತ್ರಿಯವರಿಗೆ ಈ ಪ್ರಕರಣದ ಬಗ್ಗೆ ಸವಿಸ್ತಾರವಾಗಿ ಗೊತ್ತು. ಈ ಪ್ರಕರಣದಲ್ಲಿ ಯಾರೇ ಶಾಮೀಲಾಗಿದ್ದರೂ ಕೂಡ ತನಿಖೆಯಿಂದ ಹೊರಬೀಳುತ್ತದೆ. ನಂತರದಲ್ಲಿ ಏನೆಲ್ಲ ಕ್ರಮ ಎನ್ನುವುದು ನಿರ್ಧಾರವಾಗುತ್ತದೆ ಎಂದರು.



* *ಸಿಎಂ ಅವರಿಂದ ಉತ್ತಮ ಆಡಳಿತ*


ಈ ಅವಧಿ ನಾನೇ ಪೂರ್ಣಗೊಳಿಸುವೆ ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಪಕ್ಷದ  ಹಿರಿಯ ನಾಯಕರು, ದೊಡ್ಡ ಮಾಸ್‌ ಲೀಡರ್‌.  ಅವರು ನಮ್ಮ ಸರ್ಕಾರವನ್ನು ಬಹಳ ಚೆನ್ನಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಅವರು ಏನು ಮಾತನಾಡುತ್ತಾರೆಯೋ ಅದು ನಮಗೆ ಆಶೀರ್ವಾದ ಎಂದು ಸಚಿವರು ಹೇಳಿದರು.



* *ಮೀಸಲಾತಿ ಕೇಳುವ ಅಧಿಕಾರ ಎಲ್ಲರಿಗೂ ಇದೆ*


ಮುಸ್ಲಿಮರು ಮೀಸಲಾತಿಯನ್ನು ಹೆಚ್ಚಳ ಮಾಡಬೇಕೆಂದು ಬೇಡಿಕೆ ಸಲ್ಲಿಸಿರುವ  ಕುರಿತು ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು, ನಾವು ಪಂಚಮಸಾಲಿಗಳು 2ಎ ಕೇಳುತ್ತಿದ್ದೇವೆ. ಬೇರೆಯವರು ಬೇರೆ ಮೀಸಲಾತಿ ಕೇಳುತ್ತಿದ್ಧಾರೆ. ಕೇಳುವಂತಹ ಅಧಿಕಾರ, ಹಕ್ಕು ಎಲ್ಲರಿಗೂ ಇರುತ್ತದೆ ಎಂದು ಸಚಿವರು ಹೇಳಿದರು.



* *ಬಾಗಲಕೋಟೆ ಮಗು ಸಾವು; ಕ್ರಮಕ್ಕೆ ಸೂಚನೆ*


ಬಾಗಲಕೋಟೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಸಾವನ್ನಪ್ಪಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ನನಗೆ ಚಾಮರಾಜನಗರದಲ್ಲಿ ನಡೆದಂತಹ ಘಟನೆ ಬಗ್ಗೆ ಮಾಹಿತಿ ಬಂದಿದ್ದು, ಈ ಬಗ್ಗೆ ಕೂಡಲೇ ತುರ್ತು ಕ್ರಮ ವಹಿಸಲಾಗಿತ್ತು. ಆದರೆ, ಬಾಗಲಕೋಟೆಯಲ್ಲಿ ಮಗು ಸಾವನ್ನಪ್ಪಿರುವ ಬಗ್ಗೆ ಸಂಬಂಧಪಟ್ಟವರಿಂದ ಮಾಹಿತಿ ಪಡೆದು ಈ ಬಗ್ಗೆ ಕೂಡಲೇ ಅಗತ್ಯ ಕ್ರಮ ವಹಿಸಬೇಕೆಂದು ಸೂಚನೆ ನೀಡುವುದಾಗಿ ಸಚಿವರು ತಿಳಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ