LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಖರ್ಗೆ ಕುಟುಂಬದ ಟ್ರಸ್ಟ್​ಗೆ ಸಿಎ ಸೈಟ್ ಮಂಜೂರು; ಸ್ಪಷ್ಟನೆ ನೀಡಿದ ಸಿಎಂ

ಬೆಂಗಳೂರು, ಆ.27: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ಅವರ ಕುಟುಂಬದವರು ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ ಕೆಐಎಡಿಬಿಯಿಂದ 5 ಎಕರೆ ಜಾಗ ಮಂಜೂರು ವಿವಾದಕ್ಕೆ ಸಂಬಂಧಿಸಿದಂತೆ, ‘ಕಾನೂನು ಪ್ರಕಾರವೇ ಜಾಗ ಮಂಜೂರು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಇಂದು(ಮಂಗಳವಾರ) ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಭೂಮಿ ಪಡೆಯಲು ಖರ್ಗೆ ಕುಟುಂಬದ ಶಿಕ್ಷಣ ಟ್ರಸ್ಟ್‌ಗೆ ಅರ್ಹತೆ ಇದೆ ಎಂದಿದ್ದಾರೆ.

ಕಾನೂನು ಪ್ರಕಾರವೇ ಜಾಗ ಮಂಜೂರು: ‘ಅವರ ಟ್ರಸ್ಟ್​ಗೆ ಅರ್ಹತೆ ಇದೆ, ಅದಕ್ಕೆ ಜಾಗ ಮಂಜೂರು ಮಾಡಲಾಗಿದೆ. ಆಗ ಬಿಜೆಪಿಯವರು ಚಾಣಕ್ಯ ವಿಶ್ವ ವಿದ್ಯಾಲಯಕ್ಕೆ ಹೇಗೆ ಮಾಡಿದರು?, ಇದನ್ನೂ ಕೂಡ ಕಾನೂನು ಪ್ರಕಾರವೇ ಜಾಗವನ್ನು ಮಂಜೂರು ಮಾಡಿದ್ದೇವೆ ಎಂದು ಖರ್ಗೆ ಕುಟುಂಬದ ಜಮೀನು ಮಂಜೂರಿಗೆ ಸಿಎಂ ಸಿದ್ದರಾಮಯ್ಯ ಅವರು ಸಮರ್ಥನೆ ಮಾಡಿಕೊಂಡಿದ್ದಾರೆ.



ಇನ್ನು ಈ ಕುರಿತು ಮಾತನಾಡಿದ ರೋಗ್ಯ ಸಚಿವ ದಿನೇಶ್ ಗುಂಡೂರಾವ್, ‘ಖರ್ಗೆ ಕುಟುಂಬಕ್ಕೆ ಕೊಟ್ಟಿದ್ದಲ್ಲ ಅದು ಟ್ರಸ್ಟ್ ಗೆ ಕೊಟ್ಟಿದ್ದು. ಒಳ್ಳೆಯ ಉದ್ದೇಶಕ್ಕೆ ಕಾನೂನು ಪ್ರಕಾರವೇ ಭೂಮಿಯನ್ನ ಕೊಡಲಾಗಿದೆ. ಬಿಜೆಪಿ ಚಾಣಾಕ್ಯ ಯುನಿವರ್ಸಿಟಿಗೆ ಕಡಿಮೆ ಬೆಲೆಗೆ ಭೂಮಿ ಕೊಟ್ಟಿಲ್ವಾ?. ಅದು ಸಂಘಪರಿವಾರದ್ದು, ಅವರಿಗೆ ಕಡಿಮೆ ಬೆಲೆಗೆ ಕೊಡಲಾಗಿದೆ. ನಾವು ಸರ್ಕಾರಕ್ಕೆ ನಷ್ಟ ಮಾಡಿ ಭೂಮಿ ಕೊಟ್ಟಿಲ್ಲ. ಖರ್ಗೆಯವರ ಕುಟುಂಬ ಒಳ್ಳೆಯ ಕೆಲಸ ಮಾಡಲೇಬಾರದಾ ಹಾಗಿದ್ದರೆ, ಒಳ್ಳೆಯ ಆಲೋಚನೆ ಉಳ್ಳ ಟ್ರಸ್ಟ್ ಅದು, ಭೂಮಿ‌ಯನ್ನ ಕಾನೂನಾತ್ಮಕ ವಾಗಿಯೇ ಕೊಟ್ಟಿದ್ದೇವೆ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ