Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆರೆ ಒತ್ತುವರಿ : ಸಿಎಂ ಗರಂ

ಬೆಂಗಳೂರು: ಎರಡು ಮೂರು ಜಿಲ್ಲೆಗಳಲ್ಲಿ ಒಂದೂ ಕೆರೆ ಒತ್ತುವರಿ ತೆರವು ಮಾಡದಿರುವುದನ್ನು ಗಮನಿಸಿ ಗರಂ ಆದ ಮುಖ್ಯಮಂತ್ರಿಗಳು, ಆ ಬಗ್ಗೆ ವರದಿ ತರಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಭೆಯಲ್ಲೇ ಸೂಚನೆ ನೀಡಿದರು.

ಧಾನಸೌಧದಲ್ಲಿ ನಡೆಯುತ್ತಿರುವ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳ ಜೊತೆಗಿನ ಪ್ರಗತಿ ಪರಿಶೀಲನೆ ಸಭೆಯ ವೇಳೆ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ಪರಿಶೀಲನೆ ನಡೆಸಿದರು.

ರಾಜ್ಯದಲ್ಲಿ 10931 ಕೆರೆಗಳು ಒತ್ತುವರಿಯಾಗಿವೆ. ಇದುವರೆಗೆ 6065 ಕೆರೆಗಳ ಒತ್ತುವರಿ ತೆರವು ಮಾಡಲಾಗಿದೆ. ಎಲ್ಲಾ ಕೆರೆಗಳ ಸಮೀಕ್ಷೆ ನಡೆಸಿ ಒತ್ತುವರಿ ತೆರವುಗೊಳಿಸಲು ಕಳೆದ ಸಭೆಯಲ್ಲಿ ತಿಳಿಸಿದ್ದರೂ ನಿರೀಕ್ಷಿತ ಪ್ರಗತಿಯಾಗಿಲ್ಲ. ಕೂಡಲೇ ಇದರ ಬಗ್ಗೆ ಗಮನಹರಿಸಿ, ಎಲ್ಲಾ ಕೆರೆಗಳ ಸಮೀಕ್ಷೆ ನಡೆಸಿ, ಒತ್ತುವರಿ ತೆರವುಗೊಳಿಸಿ, ಮಳೆ ನೀರು ಸರಾಗವಾಗಿ ಕೆರೆಗೆ ಹರಿದು ಬರುವಂತೆ ವ್ಯವಸ್ಥೆ ಮಾಡಬೇಕು. ಕೆರೆಗಳ ಒತ್ತುವರಿ ವಿಷಯದಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ.

ರಾಜ್ಯದಲ್ಲಿ ಈ ವರ್ಷ 1395 ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಪೋಕ್ಸೋ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗುವಂತೆ ನೋಡಿಕೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಸರಿಯಾದ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು.

ಸಿಂಧುತ್ವ ಪ್ರಮಾಣ ಪತ್ರವನ್ನು ನಿಗದಿತವಾಗಿ ಒಂದು ತಿಂಗಳ ಒಳಗಾಗಿ ನೀಡಬೇಕಿದ್ದರೂ, ಅದನ್ನು ಕೆಲವು ಜಿಲ್ಲೆಗಳಲ್ಲಿ ತಿಂಗಳುಗಟ್ಟಲೆ ವಿಲೇವಾರಿ ಮಾಡದೆ ಸತಾಯಿಸುವ ಬಗ್ಗೆ ದೂರುಗಳು ಬರುತ್ತಿವೆ. ಅಂತಹ ವಿಳಂಬ ಪ್ರವೃತ್ತಿಯನ್ನು ಸಹಿಸಲು ಸಾಧ್ಯವಿಲ್ಲ.

ಸರ್ಕಾರಿ ಶಾಲೆಗಳಿಗೆ ಎಲ್ಲಾ ಸವಲತ್ತುಗಳನ್ನು ನೀಡದರೂ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಫಲಿತಾಂಶ ಕಳಪೆಯಾಗಿರಲು ಕಾರಣವೇನು? ಈ ಬಗ್ಗೆ ಆತ್ಮಾವಲೋಕನ ನಡೆಸಬೇಕು. ತಮ್ಮ ಜಿಲ್ಲೆಗಳಲ್ಲಿ ಫಲಿತಾಂಶ ಸುಧಾರಿಸುವುದು ಆಯಾ ಜಿಲ್ಲಾಧಿಕಾರಿ ಹಾಗೂ ಸಿಇಒಗಳ ಜವಾಬ್ದಾರಿ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣ ಸುಧಾರಣೆಗೆ ಹೆಚ್ಚಿನ ಅನುದಾನ ಒದಗಿಸುತ್ತಿದ್ದರೂ, ಫಲಿತಾಂಶದಲ್ಲಿ ಯಾವಾಗಲೂ ಹಿಂದಿರಲು ಕಾರಣವೇನು? ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ, ಸಿಇಒಗಳು ನಿರಂತರ ಗಮನ ಹರಿಸಬೇಕು.

ರಾಜ್ಯದಲ್ಲಿ ಕಂದಾಯ ಗ್ರಾಮಗಳ ಘೋಷಣೆ ದಾಖಲೆ ಪ್ರಮಾಣದಲ್ಲಿ ಆಗಿದೆ. ಆದರೆ ಇನ್ನೂ ಬಾಕಿಯುಳಿದಿರುವ ಕಂದಾಯ ಗ್ರಾಮಗಳನ್ನು ಘೋಷಿಸುವ ಕಾರ್ಯ ಮುಂದಿನ 6ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಬಗರ್ ಹುಕುಂ ಅರ್ಜಿಗಳ ವಿಲೇವಾರಿ ತ್ವರಿತಗೊಳಿಸಬೇಕು. ಇದು ಯಾಕೆ ಕಡಿಮೆಯಾಗುತ್ತಿದೆ? ಪೋಡಿಮುಕ್ತ ಅಭಿಯಾನ ನಿರಂತರವಾಗಿ ಮುಂದುವರೆಸಬೇಕು. ಶೇ.63 ಪೋಡಿಮುಕ್ತ ಆಗಿದ್ದು, ಇದರಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಬೇಕು.

ಶಾಲೆ, ಆಸ್ಪತ್ರೆ, ಅಂಗನವಾಡಿ, ಸ್ಮಶಾನ, ಕಬರಸ್ತಾನಗಳಿಗೆ ನಿವೇಶನ ಒದಗಿಸುವುದನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ರುದ್ರಭೂಮಿ, ಕಬರಸ್ಥಾನಗಳಿಗೆ ಜಮೀನು ಒದಗಿಸುವುದನ್ನು ವಿಳಂಬ ಮಾಡಬಾರದು. ನಿವೇಶನಗಳು ಅಗತ್ಯವಿರುವ ಇಲಾಖೆಗಳಿಗೆ ನಿವೇಶನಗಳನ್ನು ಆದ್ಯತೆ ಮೇರೆಗೆ ಒದಗಿಸಬೇಕು. 1858 ಗ್ರಾಮೀಣ ಅಂಗನವಾಡಿಗಳಿಗೆ 5187 ನಗರ ಅಂಗನವಾಡಿಗಳಿಗೆ ನಿವೇಶನ ಅಗತ್ಯವಿದೆ. 14 ಸರ್ಕಾರಿ ಕಾಲೇಜು ನಿವೇಶನ ಹಂಚಿಕೆಯಾಗಿಲ್ಲ.

ಅರಣ್ಯ ಹಕ್ಕುಗಳಿಗಾಗಿ 295176 ಅರ್ಜಿಗಳು ಸಲ್ಲಿಕೆಯಾಗಿದ್ದು, 16700 ಮಾತ್ರ ಅರಣ್ಯ ಹಕ್ಕು ಪತ್ರ ಒದಗಿಸಲಾಗಿದೆ. ಇದನ್ನು ಸರಿಯಾಗಿ ವಿಲೇವಾರಿ ಮಾಡಬೇಕು.

[caption id="attachment_23545" align="alignnone" width="1024"]DC, CEO ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Dash Board ಬಿಡುಗಡೆಗೊಳಿಸಿದರು. 👆DC, CEO ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Dash Board ಬಿಡುಗಡೆಗೊಳಿಸಿದರು.[/caption]

ರೈತರ ಆತ್ಮಹತ್ಯೆ: ಪರಿಹಾರ ವಿಳಂಬಕ್ಕೆ ಸಿಎಂ ಗರಂ

ಜಿಲ್ಲಾವಾರು ರೈತರ ಆತ್ಮಹತ್ಯೆ ಅಂಕಿ ಅಂಶಗಳನ್ನು ಗಮನಿಸಿದ ಮುಖ್ಯಮಂತ್ರಿಗಳು ಇನ್ನೂ 13 ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಬಾಕಿ ಇರುವುದನ್ನು ನೋಡಿ ಗರಂ ಆದ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಂದ ವರದಿ ಪಡೆದರು.

ಹಾವೇರಿ ಸೇರಿ ಇನ್ನೆರಡು ಜಿಲ್ಲೆಗಳಲ್ಲಿ ಒಟ್ಟು 13 ರೈತ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಬಾಕಿ ಇರುವುದನ್ನು ಆದಷ್ಟು ಬೇಗ ಬಗೆಹರಿಸಿ ಪರಿಹಾರ ಒದಗಿಸಿ ಎನ್ನುವ ಸೂಚನೆ ನೀಡಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ