LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪತ್ರಕರ್ತನ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಮಂಜೂರು ಮಾಡಿದ ಸಿಎಂ

ಬೆಂಗಳೂರು:ಹಾಸನ‌ ಜಿಲ್ಲೆ ಚನ್ನರಾಯಪಟ್ಟಣದ ಹಿರಿಯ ಪತ್ರಕರ್ತ ಟಿ.ಜಿ.ಹೇಮಕುಮಾರ್ ಅವರ ನಿಧನದಿಂದ ಸಂಕಷ್ಟದಲ್ಲಿರುವ ಈ ಕುಟುಂಬಕ್ಕೆ ನೆರವು ನೀಡುವಂತೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.

ಜ್ಞಾನ ದೀಪ, ಜನಮಿತ್ರ, ಹಾಸನ‌ಮಿತ್ರ, ನಾಡಸಹ್ಯಾದ್ರಿ  ಸೇರಿದಂತೆ ಹಲವು ಮಾಧ್ಯಮದಲ್ಲಿ ಕೆಲಸ ಮಾಡಿದ್ದಹೇ ಮಕುಮಾರ್ ಅವರಿಗೆ ಪತ್ನಿ ಮತ್ತು ಮಗಳಿದ್ದಾರೆ.

ಅಪ್ಪನ ಸಾವಿನ ಬಳಿಕ ಕುಟುಂಬ ನಿರ್ವಹಣೆಗಾಗಿ ಅದೇ ವೃತ್ತಿಯನ್ನು (ಪತ್ರಿಕೆ ಹಾಕುವುದು‌ ಸೇರಿ) ಪುತ್ರಿ ವಿದ್ಯಾ ಮುಂದುವರಿಸಿದ್ದಾರೆ. ಕುಟುಂಬ ತೀವ್ರ ಸಂಕಷ್ಟದಲ್ಲಿರುವ ಬಗ್ಗೆ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರ ಗಮನಕ್ಕೆ ತಂದಿದ್ದ

ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಪರಿಹಾರ ಕೋರಿದ್ದರು.

ಕೆಯುಡಬ್ಲೂಜೆ ಸಲ್ಲಿಸಿದ ಕೋರಿಕೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2 ಲಕ್ಷ ಪರಿಹಾರ ಮಂಜೂರು ಮಾಡಿದ್ದಾರೆ.

ಪರಿಹಾರ ಮಂಜೂರು ಮಾಡಿದ ಸಿಎಂ ಸಿದ್ದರಾಮಯ್ಯ ಅವರಿಗೆ‌, ಈ ನಿಟ್ಟಿನಲ್ಲಿ ಸಹಕಾರ ನೀಡಿದ ಕೆ.ವಿ.ಪ್ರಭಾಕರ್ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಕೃತಜ್ಞತೆ ಸಲ್ಲಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್