Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಮ್ಮ ಕೈಗೆ ದೊಣ್ಣೆ ಕೊಟ್ಟು ಹೊಡೆಸಿಕೊಳ್ತಿದ್ದೀರಿ: ವಿಪಕ್ಷ ಟೀಕಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: 'ಸ್ವಾಮಿ ವಿರೋಧ ಪಕ್ಷದ ನಾಯಕರೇ, ನಿಮ್ಮ ಟ್ವೀಟ್ ನಿಮ್ಮ ಪರಮ ಅಜ್ಞಾನದ ಫಲವೋ? ಅಥವಾ ವಿರೋಧ ಪಕ್ಷದ ನಾಯಕ ಅಸ್ತಿತ್ವದಲ್ಲಿದ್ದಾರೆ ಎಂದು ಜನರಿಗೆ ತಿಳಿಸಲು ಮಾಡುತ್ತಿರೋ? ಇದು ನಮ್ಮನ್ನೂ ಸೇರಿಸಿಕೊಂಡಂತೆ ರಾಜ್ಯದ ಜನಸಾಮಾನ್ಯರಿಗೂ ಅರ್ಥವಾಗದೆ ಇರುವ ಯಕ್ಷ ಪ್ರಶ್ನೆ' ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.


ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ, 'ನೀವು ಸುಳ್ಳಿನ ಕೋಟೆಯನ್ನು ಎಷ್ಟೇ ದೊಡ್ಡದಾಗಿ ಕಟ್ಟಿದರೂ ಅದರ ಆಯುಷ್ಯ ಕಡಿಮೆ. ನಮ್ಮ ಸತ್ಯದ ಒಂದು ಏಟಿಗೆ ಅದು ಕುಸಿದುಬೀಳುತ್ತಲೇ ಇದೆ. ನೀವು ಮತ್ತೆ ಮತ್ತೆ ಸುಳ್ಳುಗಳನ್ನು ಹೇಳಿ ನಮ್ಮ ಕೈಗೆ ದೊಣ್ಣೆ ಕೊಟ್ಟು ಹೊಡೆಸಿಕೊಳ್ಳುತ್ತಲೇ ಇದ್ದೀರಿ. ಇದು ಮುಂದುವರಿಯಲಿ ಆಲ್ ದಿ ಬೆಸ್ಟ್' ಎಂದಿದ್ದಾರೆ.


'ಯುವಕರಿಗೆ ಅದರಲ್ಲಿಯೂ ರಾಜ್ಯದ ಯುವಕರಿಗೆ ನಿರುದ್ಯೋಗ ಭಾಗ್ಯ ಕಲ್ಪಿಸಲು ಕಾರಣವಾದ ಕೇಂದ್ರ ಸರ್ಕಾರದ ಈ ಯೋಜನೆಯ ಬಗೆಗಿನ ತಮ್ಮ ನೋವು, ದುಃಖ ಮತ್ತು ಸಂಕಟಗಳಿಗೆ ಉತ್ತರ ಕಂಡುಕೊಳ್ಳುವ ತವಕ ನಿಮ್ಮಲ್ಲಿದ್ದರೆ ದಯವಿಟ್ಟು ನಿಮ್ಮ ಪೂಜ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಕೇಳಿ ಉತ್ತರ ಪಡೆಯಿರಿ, ಅಸಂಬದ್ಧ ಟ್ವೀಟ್‌ಗಳ ಮೂಲಕ ನಿಮ್ಮ ಅಜ್ಞಾನ ಪ್ರದರ್ಶಿಸಬೇಡಿ.'

'ಸಾರಿಗೆ ಸಂಸ್ಥೆಗಳಲ್ಲಿ ಕಳೆದ 5 ವರ್ಷಗಳಲ್ಲಿ ಹೊಸ ಬಸ್ಸುಗಳ ಸೇರ್ಪಡೆ ಮಾಡದೇ, ಡಕೋಟ ಬಸ್ಸುಗಳನ್ನು ದಯಪಾಲಿಸಿರುವ ನೀವು ಮಾತನಾಡುವ ಪರಿಗೆ ವಿಷಾದವಲ್ಲದೇ ಮತ್ತೇನು ವ್ಯಕ್ತಪಡಿಸಲು ಸಾಧ್ಯ? ತಮ್ಮ ಬೇಜವಾಬ್ದಾರಿ, ಆಧಾರರಹಿತ, ತಪ್ಪು ಹೇಳಿಕೆಗಳಿಗೆ ಸಂತಾಪ ಸೂಚಿಸುತ್ತಾ ನಿಮಗೆ ನೀವು ನಂಬಿರುವ ದೇವರು ಸತ್ಯ ಹೇಳುವ ಸದ್ಬುದ್ಧಿ ಕರುಣಿಸಲಿ' ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*