Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇಶದ ಆರ್ಥಿಕ ಸಬಲತೆ, ಆಹಾರ ಸ್ವಾವಲಂಬನೆಗೆ ನೆಹರೂ ಕಾರಣ: ಸಿ.ಎಂ ಸಿದ್ದರಾಮಯ್ಯ

ನೆಹರು ಅವರು ಆಧುನಿಕ ಭಾರತದ ನಿರ್ಮಾತೃ:*ಮುಖ್ಯಮಂತ್ರಿ ಸಿದ್ದರಾಮಯ್ಯ


ಬೆಂಗಳೂರು, ಮೇ 27: ಸ್ವತಂತ್ರ ಭಾರತದ ಮೊದಲನೇ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಆಧುನಿಕ ಭಾರತದ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


ಅವರು ಇಂದು ವಿಧಾನಸೌಧದ ಪೂರ್ವ ದ್ವಾರದ ಬಳಿ ಇರುವ ಮಾಜಿ ಪ್ರಧಾನ ಮಂತ್ರಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರು ರವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೇ ಹಾಗೂ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.


ನೆಹರೂ ಅವರ ಪುಣ್ಯ ತಿಥಿಯನ್ನು ಸರ್ಕಾರ ಗೌರವ ಹಾಗೂ ಅಭಿಮಾನದಿಂದ ನೆರವೇರಿಸಿದೆ. ದೇಶದ ಬಡತನವನ್ನು ಹೋಗಲಾಡಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದರು. ಉದ್ಯೋಗ ಸೃಷ್ಟಿ, ಮಿಶ್ರ ಆರ್ಥಿಕತೆಯನ್ನು ದೇಶದಲ್ಲಿ ಪರಿಚಯಿಸಿದ್ದಲ್ಲದೆ ದೇಶದಲ್ಲಿ ಹಸಿರು ಕ್ರಾಂತಿಗೆ ಅಡಿಗಲ್ಲು ಹಾಕಿದರು. ಸಹಕಾರಿ ಚಳವಳಿ, ವಿಕೇಂದ್ರೀಕರಣಕ್ಕೆ ಬದ್ಧತೆಯಿಂದ ಕೆಲಸ ಮಾಡಿದರು. ಅವರು ಪ್ರಧಾನಿಗಳಾಗಿದ್ದ 17 ವರ್ಷಗಳ ಅವಧಿಯಲ್ಲಿ ಅನೇಕ ಅಣೆಕಟ್ಟು, ಸಾರ್ವಜನಿಕ ವಲಯದಲ್ಲಿ ಕೈಗಾರಿಕೆ, ಶಿಕ್ಷಣ ಸಂಸ್ಥೆಗಳನ್ನೂ ಸ್ಥಾಪಿಸಿದರು. ದೇಶ ಆರ್ಥಿಕವಾಗಿ ಸಬಲತೆಯನ್ನು ಕಂಡುಕೊಂಡಿದ್ದರೆ, ಆಹಾರದಲ್ಲಿ ಸ್ವಾವಲಂಬನೆಯನ್ನು ಕಂಡುಕೊಂಡಿದ್ದರೆ ನೆಹರೂ ಅವರು ಹಾಕಿದ ಅಡಿಪಾಯ ಕಾರಣ ಎಂದರು. ನೆಹರೂ ಅವರನ್ನು ಗೌರವದಿಂದ ಸ್ಮರಿಸುವ ಕೆಲಸವನ್ನು ಪ್ರತಿಯೊಬ್ಬ ಭಾರತೀಯನೂ ಮಾಡಬೇಕು ಎಂದರು. ಆಧುನಿಕ ಭಾರತಕ್ಕೆ ನೆಹರೂ ಅಡಿಪಾಯ ಹಾಕಿರದೇ ಹೋಗಿದ್ದರೆ ಇಂದಿನ ಭಾರತ ಇರುತ್ತಿರಲಿಲ್ಲ. ಆರ್ಥಿಕತೆಯಲ್ಲಿ ಜಗತ್ತಿನಲ್ಲಿ 5 ನೇ ಸ್ಥಾನದಲ್ಲಿದ್ದರೆ ಅದಕ್ಕೆ ನೆಹರೂ ಅವರೇ ಕಾರಣ ಎಂದರು.



*ಕೋವಿಡ್: ವೃದ್ಧರು, ಕಾಯಿಲೆಯಿರುವವರು ಮಾಸ್ಕ್ ಕಡ್ಡಾಯವಾಗಿ ಹಾಕಿಕೊಳ್ಳುವಂತೆ ಸೂಚಿಸಲಾಗಿದೆ*


ಕೋವಿಡ್ ಸಂಬಂಧಿಸಿದಂತೆ ನಿನ್ನೆ ನಡೆದ ಸಭೆಯಲ್ಲಿ ಮುನ್ನೆಚ್ಚರಿಕಾ ಬಗ್ಗೆ ಚರ್ಚಿಸಲಾಗಿದೆ. ನಾವು ಎಲ್ಲದ್ದಕ್ಕೂ ಸಿದ್ಧರಾಗಿರಬೇಕು. ವೆಂಟಿಲೇಟರ್, ಆಮ್ಲಜನಕ, ವಾರ್ಡ್ ಗಳಿಗೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ. ಸುಮಾರು 65 ಇದ್ದ ಪ್ರಕರಣಗಳು 80 ಆಗಿವೆ. ಇದು ಗಂಭೀರವಾದ ತಳಿಯಲ್ಲ. ನೆಗಡಿ, ಕೆಮ್ಮು, ಜ್ವರ ಬಂದಿರುವ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು ಹಾಗೂ ವೃದ್ಧರು, ವಿವಿಧ ಕಾಯಿಲೆಗಳಿಗೆ ತುತ್ತಾಗಿರರುವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಲಸಿಕೆಗಳನ್ನು. ಮುನ್ನೆಚ್ಚರಿಕಾ ಕ್ರಮವಾಗಿ ಸಂಗ್ರಹಿಸಬೇಕು ಎಂದು ಸೂಚಿಸಲಾಗಿದೆ ಎಂದರು.




ಎಲ್ಲರೂ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿಲ್ಲ.ಆದರೆ ವೃದ್ಧರು, ಕಾಯಿಲೆಯಿರುವವರು ಮಾಸ್ಕ್ ಕಡ್ಡಾಯವಾಗಿ ಹಾಕಿಕೊಳ್ಳುವಂತೆ ಸೂಚಿಸಲಾಗಿದೆ ಎಂದರು. ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಮಾಡಲು ಕೇಂದ್ರದಿಂದ ಸೂಚನೆ ಬಂದಿಲ್ಲ. ಆದರೆ ಎಚ್ಚರಿಕೆ ವಹಿಸಲಾಗುವುದು ಎಂದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ