ಪ್ರಕರಣದಲ್ಲಿ ಎ1 ಆಗಿರುವ ಸಿಎಂ ಸಿದ್ದರಾಮಯ್ಯಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೊಟ್ಟಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕ್ಷಣಗಣನೆ ಶುರುವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ.
ಇಂದು ಸಿಎಂ ವಿಚಾರಣೆ ಹಿನ್ನೆಲೆ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಮೈಸೂರು ಸಿಟಿ ಕಮಿಷನರ್ ಸೀಮಾ ಲಾಟ್ಕರ್ ಮಂಗಳವಾರ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿ ನೂರಾರು ಬ್ಯಾರಿಕೇಡ್ಗಳನ್ನು ತರಿಸಿಕೊಂಡಿದ್ದಾರೆ.