Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳೆಯರು ದುರ್ಬಲರಲ್ಲ, ಹಿಂದುಳಿದವರು ಅಷ್ಟೆ: ಸಿ.ಎಂ.ಸಿದ್ದರಾಮಯ್ಯ

* 1700 ಹೆಣ್ಣು ಮಕ್ಕಳ ಶಿಕ್ಷಣಕ್ಕೆಅನಕೂಲವಾಗುವ ಸುಸಜ್ಜಿತ ಹಾಸ್ಟೆಲ್ ನಿರ್ಮಾಣ

* ಶೂದ್ರರಂತೆ ಮಹಿಳಾ ಕುಲವನ್ನೂ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗಿತ್ತು

* ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ

* ಮಹಿಳೆಯರು ದುರ್ಬಲರಲ್ಲ, ಹಿಂದುಳಿದವರು ಅಷ್ಟೆ: ಸಿ.ಎಂ.ಸಿದ್ದರಾಮಯ್ಯ

ಮೈಸೂರು ನ 13: ಮಹಿಳೆಯರು ದು‌ರ್ಬಲರಲ್ಲ, ಹಿಂದುಳೀದವರಷ್ಟೇ ಶೂದ್ರರಂತೆ ಇಡೀ ಮಹಿಳಾ ಕುಲವನ್ನೂ ಶಿಕ್ಷಣದಿಂದ ವಂಚಿತರನ್ನಾಗಿ  ಮಾಡಲಾಗಿತ್ತು. ಆದರೆ ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

170 ಕೋಟಿ ರೂ. ವೆಚ್ಚದ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ ನಿಲಯ ಮತ್ತು ವಿಜ್ಞಾನ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಹಾಗೂ 49 ಕೋಟಿ ರೂ. ವೆಚ್ಚದ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ 3, 4 ನೇ ಅಂತಸ್ತಿನ ಕಟ್ಟಡ ಹಾಗೂ ವಸತಿ ನಿಲಯದ 3 ನೇ ಅಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಮತ್ತು ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಕಾರ್ಯಕ್ರಮಗಳನ್ನು, ಗ್ಯಾರಂಟಿಗಳನ್ನು ನಾವು ಜಾರಿಗೆ ತಂದಿದ್ದೇವೆ ಎಂದು ಹೇಳಿದರು.

ವಿದ್ಯಾರ್ಥಿನಿಯರನ್ನು, ನೀವು ಬಸ್ ಗಳಲ್ಲಿ ಉಚಿತವಾಗಿ ಓಡಾಡುತ್ತಿದ್ದೀರಿ ತಾನೇ ಎಂದು ಸಿ.ಎಂ. ಪ್ರಶ್ನಿಸಿದರು. ಇದಕ್ಕೆ ವಿದ್ಯಾರ್ಥಿನಿಯರು ಹೌದೂ ಎಂದು ಎರಡೂ ಕೈಗಳನ್ನೆತ್ತಿ ಹರ್ಷೋದ್ಗಾರ ವ್ಯಕ್ತಪಡಿಸಿದರು.  ಮಹಿಳೆಯರು ಇಲ್ಲಿಯವರೆಗೆ 325 ಕೋಟಿ ಫ್ರೀ ಟಿಕೆಟ್ ಮೂಲಕ ಉಚಿತವಾಗಿ ಬಸ್‌ನಲ್ಲಿ ಪ್ರಯಾಣಿಸಿದ್ದಾರೆ. ಶಿಕ್ಷಣದಿಂದ ಮಾತ್ರ ಮಹಿಳೆಯರು, ಯುವತಿಯರು ಸ್ವಾಭಿಮಾನಿ ಮತ್ತು ಸ್ವಾವಲಂಬಿಗಳಾಗಲು ಸಾಧ್ಯ ಎಂದು ಮುಖ್ಯಮಂತ್ರಿಗಳು ಹೇಳಿದರು.

ಮಹಿಳೆಯರಿಗೆ ಮೊದಲಿಗೆ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿದ್ದು ಬಸವಣ್ಣನರಾದರೆ, ಶಿಕ್ಷಣ ಮಹಿಳೆಯರ ಹಕ್ಕಾಗಿಸಿದ್ದು ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು. ಆದ್ದರಿಂದ ನೀವೆಲ್ಲಾ ಜಾತ್ಯತೀತರಾಗಿ, ವಿಶ್ವ ಮಾನವರಾಗಿ ಬೆಳೆದು ವೈಚಾರಿಕ ಚಿಂತನೆ ಬೆಳೆಸಿಕೊಳ್ಳಬೇಕೆದು ಕರೆ ನೀಡಿದ ಅವರು,  ಶಿಕ್ಷಣ ಕಲಿತೂ ಜಾತಿವಾದಿಗಳಾದರೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಹರೀಶ್ ಗೌಡ, ಡಾ.ತಿಮ್ಮಯ್ಯ, ಯತೀಂದ್ರ ಸಿದ್ದರಾಮಯ್ಯ, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ