LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಚನ್ನಗಿರಿಯಲ್ಲಿ ನಡೆದ ಸಾವು ಲಾಪ್ ಡೆತ್ ಅಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ''ಚನ್ನಗಿರಿಯಲ್ಲಿ ನಡೆದ ಸಾವು ಲಾಪ್ ಡೆತ್ ಅಲ್ಲ. ಆತನಿಗೆ ಮೂರ್ಛೆ ರೋಗ ಇತ್ತು, ಅದರಿಂದಾಗಿ ಆತ ಮೃತಪಟ್ಟಿದ್ದಾನೆ. ಆದರೆ ಎಫ್​ಐಆರ್​ ದಾಖಲಿಸದೆ ಪೊಲೀಸರು ಆತನನ್ನು ಠಾಣೆಗೆ ಕರೆ ತಂದಿದ್ದು ತಪ್ಪು. ಅದಕ್ಕಾಗಿ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.


ನಗರದಲ್ಲಿ ಶನಿವಾರ ತಮ್ಮ ಮೈಸೂರು ಮನೆಯ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಸಿದ್ದರಾಮಯ್ಯ, ''ಎಫ್​ಐಆರ್ ಇಲ್ಲದೆ ಪೊಲೀಸ್ ಠಾಣೆಗೆ ಆರೋಪಿಯನ್ನು ಕರೆತಂದು ಇಟ್ಟುಕೊಂಡಿದ್ದ ತಪ್ಪಿಗಾಗಿ ಠಾಣೆಯ ಇನ್ಸ್​ಪೆಕ್ಟರ್ ಹಾಗೂ ಡಿವೈಎಸ್​​ಪಿ ಅವರನ್ನು ಅಮಾನತುಗೊಳಿಸಲಾಗಿದೆ'' ಎಂದು ತಿಳಿಸಿದರು.


ಪ್ರಜ್ವಲ್​ ರೇವಣ್ಣ ಪ್ರಕರಣ ಸಂಬಂಧ ಸಿಎಂ ಬರೆದ ಪತ್ರ ಕೇಂದ್ರ ಸರ್ಕಾರಕ್ಕೆ ತಡವಾಗಿ ಪತ್ರ ಬಂದಿದೆ ಎಂಬ ವಿದೇಶಾಂಗ ಸಚಿವ ಎಸ್​. ಜೈಶಂಕರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ''ನಾನು 15 ದಿನಗಳ ಹಿಂದೆಯೇ ಪತ್ರ ಬರೆದಿದ್ದೆ. ಅದಕ್ಕೆ ರಿಪ್ಲೈ ಬಂದಿಲ್ಲ. ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬಾರದು. ಒಂದು ವೇಳೆ ಪತ್ರ ಬರೆದಿದ್ದೇ ತಡವಾದರೂ ಕ್ರಮ ಯಾಕೆ ತೆಗೆದುಕೊಂಡಿಲ್ಲ. ಸುಮ್ಮನೆ ಕಾಲ ಕಳೆಯುವುದನ್ನು ಬಿಟ್ಟು ಪಾಸ್​​ಪೋರ್ಟ್ ರದ್ದು ಮಾಡಲಿ'' ಎಂದು ಆಗ್ರಹಿಸಿದರು.


ಪುತ್ರ ರಾಕೇಶ್​ ಸಿದ್ದರಾಮಯ್ಯ ಸಾವಿನ ಬಗ್ಗೆ ಹೆಚ್​.ಡಿ. ಕುಮಾರಸ್ವಾಮಿ ಪ್ರಸ್ತಾಪಿಸಿದ ಬಗ್ಗೆ ಪ್ರತಿಕ್ರಿಯಿಸಿ, ''ರಾಕೇಶ್​ ಸಿದ್ದರಾಮಯ್ಯ ಸತ್ತು 8 ವರ್ಷ ಆಗಿದೆ. ಈಗ ಆ ವಿಚಾರ ಪ್ರಸ್ತಾಪಿಸುವುದು ಮೂರ್ಖತನ. ರಾಜಕೀಯಕ್ಕೋಸ್ಕರ ಹೀಗೆ ಮಾಡುತ್ತಿದ್ದಾರೆ. ಅವರು 2016ರಲ್ಲೇ ತೀರಿಕೊಂಡಿದ್ದು, ಅದಕ್ಕೂ ಈ ಪ್ರಕರಣಕ್ಕೂ ಸಂಬಂಧವೇನು?'' ಎಂದು ಪ್ರಶ್ನಿಸಿದರು.


ರೇಪ್​ಗಿಂತ ವಿಡಿಯೋ ಹಂಚಿದ್ದು, ದೊಡ್ಡ ಅಪರಾಧ ಎನ್ನುವ ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿಎಂ, ''ಅಂತಹ ಅಪರಾಧ ಅಥವಾ ಯಾವುದಾದರೂ ಸೆಕ್ಷನ್ ಭಾರತೀಯ ಕಾನೂನಿನಲ್ಲಿ ಇದೆಯಾ. ಅದನ್ನು ಕುಮಾರಸ್ವಾಮಿ ಸ್ಪಷ್ಟಪಡಿಸಬೇಕು. ಹಾಗಂತ ವಿಡಿಯೋ ಹಂಚಿಕೆ ಮಾಡಿರುವುದು ಸರಿ ಎಂದು ನಾನು ಹೇಳುವುದಿಲ್ಲ'' ಎಂದು ಪ್ರತಿಕ್ರಿಯಿಸಿದರು.


ಇದೇ ವೇಳೆ, ಈಗ ಪರಿಷತ್ ಚುನಾವಣೆಯಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದು, ಪರಿಷತ್​​ ಸ್ಥಾನವನ್ನು ಎಸ್​ಸಿ ಹಾಗೂ ಎಸ್​ಟಿಗೆ ಕೊಡಬೇಕು. ಆದರೆ, ನಮ್ಮ ಕಷ್ಟ ಅರ್ಥವಾಗುವುದಿಲ್ಲ ಎಂದ ಸಿಎಂ, ಈ ಮೂಲಕ ಪರಿಷತ್​ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿನ ಸಂಖ್ಯೆಯಲ್ಲಿದೆ ಎಂಬುದನ್ನು ಪರೋಕ್ಷವಾಗಿ ಒಪ್ಪಿಕೊಂಡರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್