Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿ.ಎಮ್. ಸಿದ್ರಾಮಯ್ಯ, ಸಚಿವ ಜಮೀರ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬ್ರಹತ್ ಪ್ರತಿಭಟನೆ


ಬೆಳಗಾವಿ:  ಶಾಂತಿ, ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ವಕ್ಫ್ ಮಂಡಳಿಯ ಮೂಲಕ ಅತ್ಯಂತ

ಆತಂಕದ ಸ್ಥಿತಿಗೆ ತಳ್ಳುತ್ತಿದೆ. ಅದರಲ್ಲೂ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರ ದೇಶದ ಜನತೆಯ

ಹಿತದೃಷ್ಟಿಯಿಂದ ಹಾಗೂ ವಕ್ಫ್ ಮಂಡಳಿಯಲ್ಲಿ ಆಗುತ್ತಿದ್ದ ಅಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ವಕ್ಫ್ ಕಾಯ್ದೆಗೆ ತಿದ್ದುಪಡಿ

ತರುವ ವಿಧೇಯಕವನ್ನು ಮಂಡಿಸಿದೆ.


ಇದು ಜಂಟಿ ಪಾರ್ಲಿಮೆಂಟರಿ ಬೋರ್ಡ್‌ನ ಪರಿಶೀಲನೆಯಲ್ಲಿದೆ. ಈ ತಿದ್ದುಪಡಿಜಾರಿಯಾಗುವುದು ಬಹುತೇಕ ಖಚಿತವಾಗುತ್ತಿದ್ದಂತೆ ವಕ್ಫ್ ಬೋರ್ಡ್ ತನ್ನ ಕರಾಳ ಕೈಚಳಕವನ್ನು ಮಾಡುವ ಮೂಲಕ ಇಡೀ ದೇಶದಲ್ಲಿ ಸಾರ್ವಜನಿಕ ಆಸ್ತಿಯನ್ನು ಕಬಳಿಸುವ ಹುನ್ನಾರಕ್ಕೆ ಕೈಹಾಕಿದೆ. ಅದರಲ್ಲೂ ರಾಜ್ಯದಲ್ಲಿ ನಡೆಯುತ್ತಿರುವ ಇಂತಹ ಎಲ್ಲಾ ಕುಕೃತ್ಯಗಳಿಗೂ ಕಾಂಗ್ರೆಸ್ ಸರಕಾರ ಹಾಗೂ ಸಚಿವ ಜಮೀರ್ ಅಹಮದ್ ನೇರವಾಗಿ ಕುಮ್ಮಕ್ಕು ಕೊಡುತ್ತಿರುವುದು ಇಡೀ ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿದೆ.


ರಾಜ್ಯದ ವಿಜಯಪುರ ಜಿಲ್ಲೆ ಹೊನ್ನಾವಡದ ರೈತರ 1,500 ಎಕರೆ ಜಮೀನು ವಕ್ಫ್ ಆಸ್ತಿಯೆಂದು ಘೋಷಿಸಿ ತಹಸೀಲ್ದಾರರಿಂದ

ಪುಷ್ಟಿಕರಿಸಿ ನೋಟೀಸ್ ನೀಡಲಾಗಿದೆ, ಬೆಂಗಳೂರಿನ ವಿಧಾನಸೌಧವೂ ಸೇರಿದಂತೆ ಹಲವಾರು ಪ್ರಮುಖ ಆಸ್ತಿಗಳು ವಕ್ಫ್ ಗೆ

ಸೇರಿದ್ದು ಎಂದು ಮುಸ್ಲಿಂ ನಾಯಕರು ಹೇಳಿಕೆಯಿತ್ತಿದ್ದಾರೆ.


ಹಾವೇರಿ ಜಿಲ್ಲೆಯಲ್ಲಿ 1649 ಆಸ್ತಿಗಳ ಹಕ್ಕಿಗಾಗಿ ವಕ್ಫ್ ಪ್ರತಿಪಾದಿಸುತ್ತಿದೆ. ಸವಣೂರು ತಾಲ್ಲೂಕು ಕಡಕೋಳ ಗ್ರಾಮಪಂಚಾಯಿತಿ ವ್ಯಾಪ್ತಿಯ ಹನುಮಂತ ದೇವಸ್ಥಾನದ ಅತಿಕ್ರಮಣಕ್ಕೆ ವಕ್ಫ್ ಬೋರ್ಡ್ ಮುಂದಾಗಿದೆ. ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣ ಪಂಚಾಯಿತಿ ಕಾರ್ಯಾಲಯವೂ ವಕ್ಫ್ ಆಸ್ತಿ ಎಂದು ವಕ್ಫ್ ಹಕ್ಕು ಮಂಡಿಸಿದೆ. ಸರಕಾರಿ ಅಧೀನದಲ್ಲಿರುವ ಆಸ್ತಿಗಳನ್ನೇ ತನ್ನದೆಂದು ವಕ್ಫ್ ಬೋರ್ಡ್ ಹೇಳುತ್ತಿದೆ. ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಚಿಕ್ಕಮ್ಮ ಚಿಕ್ಕದೇವಿ ದೇಗುಲಕ್ಕೆ ಸೇರಿದ 6 ಗುಂಟೆ ಜಮೀನು ವಕ್ಫ್ ಆಸ್ತಿ ಎಂದು ನಮೂದಾಗಿದೆ. ವಿಜಯಪುರ ಜಿಲ್ಲೆಯ 1500 ವರ್ಷ ಇತಿಹಾಸವಿರುವ ಸಿಂಧಗಿಯ ವಿರಕ್ತ ಮಠವೂ ವಕ್ಫ್ ಆಸ್ತಿ ಎಂದು ದಾಖಲೆಗಳನ್ನು ಸೃಷ್ಟಿಸುತ್ತಿದ್ದಾರೆ. 2000 ವರ್ಷ ಇತಿಹಾಸವಿರುವ ಸೋಮನಾಥೇಶ್ವರ ದೇವಾಲಯವೂ ವಕ್ಫ್ ಆಸ್ತಿ ಎಂಬ ಹಕ್ಕು ಪ್ರತಿಪಾದನೆ  ವಕ್ಫ್ ಮಂಡಳಿಯಿಂದ ಬರುತ್ತಿದೆ. ಕಲಬುರ್ಗಿ ಜಿಲ್ಲೆಯ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಪೂರ್ವಜರಿಂದ ಬಂದ

ಜಮೀನುಗಳನ್ನು ಅನುಭವಿಸುತ್ತಿದ್ದ ರೈತರಿಗೂ ವಕ್ಫ್ ಆಸ್ತಿ ಎಂದು ತಹಸೀಲ್ದಾರ್‌ನಿಂದ ನೋಟೀಸ್ ನೀಡಲಾಗಿದೆ. ಕರ್ನಾಟಕದ

ವಿಜಯಪುರ ಜಿಲ್ಲೆ ಹೊನ್ನಾವಡದ ರೈತರ 1,500 ಎಕರೆ ಜಮೀನು ವಕ್ಫ್ ಆಸ್ತಿಯೆಂದು ಘೋಷಿಸಿ ತಹಸೀಲ್ದಾರ್‌ರಿಂದ

ಪುಷ್ಠಿಕರಿಸಿ ನೋಟೀಸ್ ನೀಡಿ ನಂತರ ಬಿಜೆಪಿಯ ಒತ್ತಾಯದಿಂದ ಹಿಂಪಡೆಯಲಾಗಿದೆ ಎಂದು ಮಾಜಿ ಸಚಿವ ಮುರಗೇಶ ನಿರಾಣಿ ಹೇಳಿದರು.


           ಸೋಮವಾರದಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಳಗಾವಿ ನಗರದ ರಾಣಿ ಚೆನ್ನಮ್ಮ ಸರ್ಕಲ್ ದಿಂದ ಬೃಹತ್  ಪ್ರತಿಭಟನೆ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿ ಬಿಜೆಪಿ ಮುಖಂಡರು ವಾಗ್ದಾಳಿ ನಡೆಸಿದರು.


    ಬಿಜೆಪಿ  ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ  ಮಾತನಾಡಿ  ವಕ್ಫ್ ಬೋರ್ಡ್‌ನಿಂದ ಆಗುತ್ತಿರುವ ಈ ರೀತಿಯ ಗೊಂದಲಗಳು ರಾಜ್ಯದಲ್ಲಿನ ಸಾಮರಸ್ಯ ಹದಗೆಡುವುದಕ್ಕೆ ಕಾರಣವಾಗಿದೆ. ಸರಕಾರದ ವಿವೇಚನೆಯಿಲ್ಲದೆ ಕೈಗೊಳ್ಳುತ್ತಿರುವ ನಿರ್ಧಾರಗಳಿಂದಾಗಿ ರಾಜ್ಯದ ಅನೇಕ ಆಸ್ತಿಗಳ ವ್ಯಾಜ್ಯ ಬೀದಿಗೆ ಬರುತ್ತಿದೆ. ಈಗಾಗಲೇ ಕಡಕೋಳದಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಪ್ರಾರಂಭವಾಗಿದೆ. ಇದು

ಇಡೀ ರಾಜ್ಯವನ್ನು ವ್ಯಾಪಿಸುವ ಸಾಧ್ಯತೆಯಿದೆ. ಇಡೀ ರಾಜ್ಯದ ರೈತರ ಹಿತದೃಷ್ಟಿಯಿಂದ ತನ್ನ ನಿಲುವನ್ನು ತೆಗೆದುಕೊಳ್ಳಬೇಕಾಗಿದ್ದ

ಸಿದ್ದರಾಮಯ್ಯನವರ ಕಾಂಗ್ರೆಸ್ ಸರಕಾರ ಅಲ್ಪಸಂಖ್ಯಾತರನ್ನು ಓಲೈಸುವ ದೃಷ್ಟಿಯಿಂದ ಸಂಪೂರ್ಣವಾಗಿ ಅವರ ಪರವಾಗಿ ನಿಂತಿದೆ ಎಂದು ಹೇಳಿದರು.


ನಂತರ ಮಾಜಿ ಶಾಸಕ ಸಂಜಯ್ ಪಾಟೀಲ್ ಹಾಗೂ ಮಹಾಂತೇಶ ಕವಟಗಿಮಠ ಮಾತನಾಡಿ  ಇದೇ ತೆರನಾದ ನಿಲುವುಗಳನ್ನು ಮುಂದುವರೆಸಿದಲ್ಲಿ ರಾಜ್ಯದಲ್ಲಿ ಮುಂದಾಗುವ ಅನಾಹುತಗಳಿಗೆ ಕಾಂಗ್ರೆಸ್ ಸರಕಾರವೇ ನೇರವಾಗಿ ಹೊಣೆಯಾಗಬೇಕಾಗುತ್ತದೆ. ಯಾವುದೇ ಕಾರಣಕ್ಕೂ ರಾಜ್ಯದ ಹಿತಕ್ಕೆ, ರಾಜ್ಯದ ರೈತರ ಹಿತಕ್ಕೆ ಧಕ್ಕೆಯಾಗುವಂತಹ ಯಾವುದೇ ನಿರ್ಧಾರವನ್ನು ಕಾಂಗ್ರೆಸ್ ಸರಕಾರ ಕೈಗೊಳ್ಳುವ ಮತ್ತು ವೋಟ್ ಬ್ಯಾಂಕ್ ಉಳಿಸಿಕೊಳ್ಳಲು ಮುಸ್ಲಿಂ ಓಲೈಕೆ ಹಾಗೂ ಹಿಂದೂ ವಿರೋಧಿ ನಿರ್ಧಾರಗಳನ್ನು ಕೈಗೊಳ್ಳುವ ತನ್ನ ಹಳೇ ಚಾಳಿಯನ್ನ ಕೈಬಿಡಬೇಕೆಂದು ಬಿಜೆಪಿ ಆಗ್ರಹಿಸುತ್ತದೆ. ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ನಡೆಸಿ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ಎಂಬುದಾಗಿ ನಮೂದು ಮಾಡದಂತೆ ತಾತ್ಕಾಲಿಕ  ತಡೆ ಹಿಡಿದಿರುವುದು ಕೇವಲ ಚುನಾವಣೆಯ ತಂತ್ರಗಾರಿಕೆಯಾಗಿದೆ. ಬಿಜೆಪಿಯು ಈ ತಂತ್ರಗಾರಿಕೆಯನ್ನು ಒಪ್ಪುವುದಿಲ್ಲ. ಮುಂದಿನ ದಿನಗಳಲ್ಲಿ ರೈತರಿಗೆ ಇದು ಮರಣ ಶಾಸನವಾಗಿಯೇ ಮುಂದುವರೆಯಲಿದೆ. ಮತ್ತದೇ ರೀತಿಯ ಕೃತ್ಯಗಳನ್ನು ಕಾಂಗ್ರೆಸ್ ನಾಯಕರು ಹಾಗೂ ಕಾಂಗ್ರೆಸ್ ಸರಕಾರ ಮುಂದುವರೆಸಿದಲ್ಲಿ ಇಡೀ ರಾಜ್ಯದಲ್ಲಿ ಜನತೆಯನ್ನು ಒಗ್ಗೂಡಿಸಿ ಉಗ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕಾಗುತ್ತದೆ ತಕ್ಷಣ ಜಮೀರ್ ಅಹ್ಮದ್ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾ ಮಾಡಬೇಕು, ಸಿದ್ದರಾಮಯ್ಯ ಅವರು ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಹೇಳಿದರು.


    ಈ ಸಂದರ್ಭದಲ್ಲಿ ರಾಜ ಉಪಾಧ್ಯಕ್ಷರಾದ ಅನಿಲ್ ಬೆನಕೆ, ಮಹಾನಗರ ಜಿಲ್ಲಾಧ್ಯಕ್ಷರಾದ ಗೀತಾ ಸುತಾರ, ಚಿಕ್ಕೋಡಿ ಜಿಲ್ಲಾಧ್ಯಕ್ಷರಾದ ಸತೀಶ್ ಅಪ್ಪಾಜಿಗೋಳ, ಬಸವರಾಜ್ ಹುಂದ್ರಿ, ರಮೇಶ್ ದೇಶಪಾಂಡೆ, ಧನಂಜಯ ಜಾಧವ, ಯುವರಾಜ ಜಾಧವ,ಮುರುಗೇಂದ್ರಗೌಡ ಪಾಟೀಲ್, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಮಾದಮ್ಮನವರ್, ಈರಯ್ಯ ಖೋತ, ರಾಜಶೇಖರ್ ಡೋಣಿ ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ