Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಳ ಮೀಸಲಾತಿ ಬಗ್ಗೆ ಸಿ.ಎಂ. ಸಿದ್ರಾಮಯ್ಯ ಸುಪ್ರೀಂ ಆದೇಶ ಪಾಲನೆ ಮಾಡಿಲ್ಲ : ಈರಣ್ಣ ಕಡಾಡಿ

ಬೆಳಗಾವಿ: ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಯ ಜನರ ಬಹುದಿನಗಳ ಬೇಡಿಕೆಯ ಮೀಸಲಾತಿ ಹೆಚ್ಚಳ ಮಾಡಿ ಒಳ ಮೀಸಲಾತಿ ನಿಡಿದ್ದ ಹಿಂದಿನ ರಾಜ್ಯ ಬಿಜೆಪಿ ಸರ್ಕಾರದ ನಿಲುವನ್ನು ಪ್ರಶ್ನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.
ಮಾಧ್ಯಮಗಳಿಗೆ ಪ್ರಕಟಣೆ ಮೂಲಕ ತಿಳಿಸಿದ ಅವರು, ಜಸ್ಟಿಸ್ ಸದಾಶಿವ ಆಯೋಗದ ವರದಿಯನ್ನೂ ಸರಿಯಾಗಿ ಪಾಲಿಸಿದಂತೆ ಕಾಣುತ್ತಿಲ್ಲ. ಅದೇರೀತಿ ನ್ಯಾ.ನಾಗಮೋಹನ್ ದಾಸ್ ವರದಿಯನ್ನೂ ಸರಿಯಾಗಿ ಪಾಲಿಸಿದಂತಿಲ್ಲ ಎಂದು ಆಕ್ಷೇಪಿಸಿದ್ದಾರೆ. ನ್ಯಾ.ನಾಗಮೋಹನ್ ದಾಸ್ ವರದಿಯಲ್ಲಿ ಎ, ಬಿ, ಸಿ, ಡಿ, ಇ ಎಂದು ೫ ವರ್ಗಗಳನ್ನು ಮಾಡಿದ್ದರು. ಅದನ್ನು ಇವರು ಎ, ಬಿ, ಸಿ ಎಂದು ಮಾಡಿದ್ದಾರೆ.
ನರೇಂದ್ರ ಸ್ವಾಮಿ ಮೊದಲಾದವರ ಮೂಲಕ ನೀವೇ ವಿಂಗಡಣೆ ಮಾಡುವುದಾದರೆ, ಸರಕಾರ ಮತ್ತು ಸಿದ್ದರಾಮಯ್ಯನವರಿಗೆ ಜಸ್ಟಿಸ್ ಸದಾಶಿವ ಆಯೋಗ, ನ್ಯಾ.ನಾಗಮೋಹನ್ ದಾಸ್ ಆಯೋಗಕ್ಕೆ ನೂರಾರು ಕೋಟಿ ಖರ್ಚು ಮಾಡುವ ಅವಶ್ಯಕತೆ ಏನಿತ್ತು.
ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಅಧಿಕಾರದಲ್ಲಿ ಇದ್ದಾಗ ಅವರು ಪರಿಶಿಷ್ಟ ಜಾತಿ, ಪಂಗಡಗಳ ಕುರಿತು ಒಂದು ದಿಟ್ಟ ನಿರ್ಧಾರ ಮಾಡಿದ್ದರು. ಅವತ್ತು ಬೊಮ್ಮಾಯಿಯವರು ಪರಿಶಿಷ್ಟ ಜಾತಿಗೆ ಶೇ ೧೫ ಇದ್ದುದನ್ನು ಶೇ ೧೭ಕ್ಕೆ ಏರಿಸಿದ್ದರು. ಪರಿಶಿಷ್ಟ ಪಂಗಡಕ್ಕೆ ಶೇ ೩ ಇದ್ದುದನ್ನು ಶೇ ೭ಕ್ಕೆ ಏರಿಕೆ ಮಾಡಿದ್ದರು. ಆಗ ವಿಪಕ್ಷ ನಾಯಕರಾಗಿದ್ದ ಇದೇ ಸಿದ್ದರಾಮಯ್ಯನವರು, ಒಳ ಮೀಸಲಾತಿಯ ಬಿಜೆಪಿ ಸರಕಾರದ ನಿರ್ಧಾರವನ್ನು ಯಾವುದೂ ಅನುಷ್ಠಾನ ಆಗಿಲ್ಲ; ಇವರು ಬೂಟಾಟಿಕೆ- ನಾಟಕ ಮಾಡುತ್ತಿದ್ದಾರೆ ಎಂದು ರಾಜ್ಯಾದ್ಯಂತ ಓಡಾಡಿ ಅಪಪ್ರಚಾರ ಮಾಡಿದ್ದರು ಎಂದು ಟೀಕಿಸಿದರು.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾಕೆ ಓಡಿ ಹೋಗುವ ಕೆಲಸ ಮಾಡಿದ್ದಾರೆ. ವಿಪಕ್ಷ ನಾಯಕರು ಚರ್ಚೆ ಮಾಡಬೇಕೆಂದು ಕೋರಿದರೂ ಪಲಾಯನವಾದ ಮಾಡಿದ್ದಾರೆ. ಈ ಮೂಲಕ ಸದನಕ್ಕೆ ಅಗೌರವ ತೋರಿದ್ದಾರೆ ಎಂದರು.
ಜಸ್ಟಿಸ್ ಸದಾಶಿವ ಆಯೋಗವನ್ನು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಘೋಷಣೆ ಮಾಡಿತ್ತೇ ವಿನಾ ಆ ಆಯೋಗಕ್ಕೆ ಹಣಕಾಸಿನ ನೆರವನ್ನು ಕೊಟ್ಟು ವ್ಯವಸ್ಥೆ ಮಾಡಿದ್ದು, ಯಡಿಯೂರಪ್ಪ ಅವರ ನೇತೃತ್ವದ ಹಿಂದಿನ ಬಿಜೆಪಿ ಸರಕಾರ. ಅದನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲು ಬಸವರಾಜ ಬೊಮ್ಮಾಯಿಯವರು ಮುಂದಾಗಿದ್ದರು.
ದತ್ತಾಂಶ ಇಟ್ಟುಕೊಂಡು ವರ್ಗೀಕರಣ ಮಾಡಬೇಕಿತ್ತು. ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಿಂದುಳಿದಿರುವಿಕೆ ವಿಚಾರವನ್ನು ಇಟ್ಟುಕೊಂಡು ಒಳ ಮೀಸಲಾತಿ ಕೊಡಬೇಕೇ ಹೊರತು ಜನಸಂಖ್ಯೆ ಆಧಾರದಲ್ಲಿ ಅಲ್ಲ ಎಂದು ಪ್ರತಿಪಾದಿಸಿದ್ದಾರೆ.
ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ಪ್ರಾಮಾಣಿಕ ಉತ್ತರ ಕೊಡಬೇಕು. ಹಿಂದೆ ಬಿಜೆಪಿ ಸರಕಾರ ಶೇ ೧೭ ಮೀಸಲಾತಿ ಕೊಟ್ಟಾಗ ಅಪಪ್ರಚಾರ ಮಾಡಿದ್ದೀರಿ. ಈಗ ಅದೇ ಶೇ ೧೭ ಅನ್ನು ಮುಂದಿಟ್ಟಿದ್ದೀರಲ್ಲವೇ? ಬಿಜೆಪಿ ಸರಕಾರ ಮಾಡಿದ್ದನ್ನು ಈಗಲಾದರೂ ಒಪ್ಪಿಕೊಳ್ಳಿ ಎಂದು ಆಗ್ರಹಿಸಿದರು.
ಸಿದ್ದರಾಮಯ್ಯನವರು ಸತ್ಯಾಂಶವನ್ನು ಜನತೆಗೆ ತಿಳಿಸಲಿ; ಅಲ್ಲದೇ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಅವರು ಒತ್ತಾಯಿಸಿದರು. ದತ್ತಾಂಶವಿಲ್ಲದೇ ಹೇಗೆ ಇದನ್ನು ಮಾಡಿದ್ದಾರೆ ಎಂಬುದೆ ಯಕ್ಷೆ ಪ್ರಶ್ನೆಯಾಗಿದೆ ಎಂದು ಹರಿಹಾಯದಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ