LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸಿದ ಸಿಎಂ ವಿಜಯ್

ಚೆನ್ನೈ;

ತಮಿಳುನಾಡಿನಲ್ಲಿ ನೂತನವಾಗಿ ಅಸ್ತಿತ್ವಕ್ಕ ಬಂದಿರುವ ಜೊಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಇಂದು ಮೊದಲ ಅಗ್ನಿ ಪರೀಕ್ಷೆ. ಕಾಂಗ್ರೆಸ್, ಸಿಎಂಐ, ವಿಸಿಕೆ ಸೇರಿದಂತೆ ಕೆಲ ಪಕ್ಷಗಳ ಬೆಂಬಲ ಪೆಡೆದು ಜೊಸೆಫ್ ವಿಜಯ್ ಸರ್ಕಾರ ರಚಿಸಿದ್ದಾರೆ. ಇದೀಗ ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಜೊಸೆಫ್ ವಿಜಯ್ ವಿಶ್ವಾಸಮತ ಯಾಚಿಸಿದ್ದಾರೆ. ವಿಜಯ್ ಸರ್ಕಾರಕ್ಕೆ ಕೆಲ ಪಕ್ಷಗಳು ಬೆಂಬಲ ಸೂಚಿಸಿದೆ.

ಕಾರಣ ನೀಡಿ ಬೆಂಬಲ ಕೊಟ್ಟ ಕಾಂಗ್ರೆಸ್;

ವಿಜಯ್ ಮ್ಯಾಜಿಕ್ ನಂಬರ್ ಕೊರತೆಯಾಗುತ್ತಿದ್ದಂತೆ ಕಾಂಗ್ರೆಸ್ ಬೆಂಬಲ ಘೋಷಿಸಿತ್ತು. ಇದೀಗ ವಿಶ್ವಾಸಮತ ಯಾಚನೆ ವೇಳೆ ಕಾಂಗ್ರೆಸ್ ಶಾಸಕ ರಾಜೇಶ್ ಕುಮಾರ್ ವಿಧಾನಸಭೆಯಲ್ಲಿ ಬೆಂಬಲ ಸೂಚಿಸಿದ್ದಾರೆ. ಬಿಜೆಪಿ ಮೈತ್ರಿಯನ್ನು ಹೊರಗಿಜಡಬೇಕು. ಬಿಜೆಪಿಯಿಂದ ರಾಜ್ಯಕ್ಕೆ ಅಪಾಯ ಹೆಚ್ಚಿದೆ. ಹೀಗಾಗಿ ನಾವು ಟಿವಿಕೆ ಪಕ್ಷಕ್ಕೆ ಬೆಂಬಲ ಸೂಚಿಸುತ್ತಿದೆ ಎಂದು ಕಾಂಗ್ರೆಸ್ ಶಾಸಕ ರಾಜೇಶ್ ಕುಮಾರ್ ಹೇಳಿದ್ದಾರೆ.

ಟಿವಿಕೆ ಸರ್ಕಾರಕ್ಕೆ ಬೆಂಬಲ ಸೂಚಿಸಿದ ಪಕ್ಷಗಳು;

ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಜೊಸೆಫ್ ವಿಜಯ್ ಕಾಂಗ್ರೆಸ್ ಬೆಂಬಲದ ಜೊತೆಗೆ ಸಿಪಿಐ, ವಿಸಿಕೆ ಹಾಗೂ ಇಂಡಿಯನ್ ಮುಸ್ಲಿಂ ಲೀಗ್ ಪಕ್ಷಗಳು ಬೆಂಬಲ ಸೂಚಿಸಿದೆ.

ಎಐಎಡಿಂಕೆ ಇಬ್ಬಾಗ;

ಈ ಬಾರಿಯ ವಿಧಾನಸಭೆ ಚುನಾವಣೆ ಬಳಿಕ ಎಐಎಡಿಎಂಕೆ ಪಕ್ಷ ಇಬ್ಬಾಗವಾಗಿಗೆ. ಎರಡು ಬಣಗಳು ಕಿತ್ತಾಟ ಶುರುಮಾಡಿದೆ. ಎಡಪ್ಪಾಡಿ ಕೆ ಪಳನಿಸ್ವಾಮಿ ರಾಜೀನಾಮೆಗೆ ಒಂದು ಬಣ ಒತ್ತಾಯಿಸುತ್ತಿದೆ. ಇದೀಗ ವಿಜಯ್ ಸರ್ಕಾರಕ್ಕೆ ಬೆಂಬಲ ಸೂಚಿಸುವ ನಿಟ್ಟಿನಲ್ಲೂ ಪಕ್ಷದಲ್ಲಿ ಒಡಕು ಹೆಚ್ಚಾಗಿತೆ. ಒಂದು ಬಣ ವಿಜಯ್‌ಗೆ ಬೆಂಬಲ ಸೂಚಿಸಲು ಸಜ್ಜಾಗಿದೆ ಎಂಬ ಮಾತುಗಳು ಕೇಳಿಬರುತ್ತಿದೆ.

ಏನಾಗಲಿದೆ ಸರ್ಕಾರ?

ಜೊಸೆಫ್ ವಿಜಯ್ ಟಿವಿಕೆ ಸರ್ಕಾರ ಮೇಲ್ನೋಟಕ್ಕೆ ಹಲವು ಪಕ್ಷಗಳು ಬೆಂಬಲ ಸೂಚಿಸಿದೆ. ಹೀಗಾಗಿ ವಿಧಾನಸಭೆಯ ವಿಶ್ವಾಸಮತ ಯಾಚನೆಯಲ್ಲಿ ವಿಜಯ್ ಸರ್ಕಾರ ಭದ್ರವಾಗುವ ಸಾಧ್ಯತೆ ಹೆಚ್ಚಿದೆ.

ಡಿಎಂಕೆ ಮಿತ್ರಪಕ್ಷಗಳಿಂದ ಬೆಂಬಲ;

ಡಿಎಂಕೆ ಆಡಳಿತ ಅಂತ್ಯಗೊಳಿಸಿ ಜನರು ಆಯ್ಕೆ ಮಾಡಿದ ವಿಜಯ್ ಸರ್ಕಾರ ತಮಿಳುನಾಡು ಆಡಳಿತ ಚುಕ್ಕಾಣಿ ಹಿಡಿದಿದೆ. ವಿಜಯ್ ಸರ್ಕಾರ ಅಸ್ತಿತ್ವಕ್ಕೆ ಬರಲು ಭಾರಿ ಹೈಡ್ರಾಮ ನಡೆದಿತ್ತು. ಡಿಎಂಕೆ ಆಡಳಿತ ಅಂತ್ಯಗೊಳಿಸಿ ಅಧಿಕಾರಕ್ಕೇರಿದ ವಿಜಯ್ ಸರ್ಕಾರಕ್ಕೆ ಡಿಎಂಕೆ ಮಿತ್ರ ಪಕ್ಷಗಳೇ ಬೆಂಬಲ ಸೂಚಿಸಿದೆ. ಡಿಎಂಕೆ ಹೊರತುಪಡಿಸಿ, ಡಿಎಂಕೆಯ ಎಲ್ಲಾ ಮಿತ್ರ ಪಕ್ಷಗಳು ವಿಜಯ್ ಸರ್ಕಾರಕ್ಕೆ ಬೆಂಬಲ ಸೂಚಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೀಟ್ ಹಾಗೂ ಸಿಇಟಿ ವಿಶೇಷ ಮಾರ್ಗದರ್ಶನ ಕಾರ್ಯಾಗಾರಸಣ್ಣ ನೀರಾವರಿ ಇಲಾಖೆ ಕಛೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಲಕ್ಷ್ಮಣ ಸವದಿ ಭೂಮಿ ಪೂಜೆ.೧೨೫ ದಿನಗಳ ಉದ್ಯೋಗ ಖಾತರಿ: ರಾಮದುರ್ಗ ತಾಲೂಕಿನಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆಮಹಾದೇವಪ್ಪ ಯಾದವಾಡ ಅಭಿಮಾನಿ ಬಳಗದಿಂದ ಉಚಿತ ಹೆಲ್ಮೆಟ್ ವಿತರಣೆರಾಮದುರ್ಗದಲ್ಲಿ ಉಚಿತ ಉಚಿತ ಹೃದಯ ಹಾಗೂ ಆರೋಗ್ಯ ತಪಾಸಣಾ ಶಿಬಿರಚಚಡಿ ಏತ ನೀರಾವರಿ ಶೀಘ್ರ  ಯೋಜನೆ ಅನುಷ್ಠಾನಕ್ಕೆ ಅಗ್ರಹಿಸಿ ರೈತರಿಂದ ದಿ. 24 ರಂದು ರಸ್ತಾರೋಖೊ.ಮಲ್ಲಿಕಾರ್ಜುನ ಖರ್ಗೆ ಭಾಷಣದ ಸ್ಥಳ ಶುದ್ಧೀಕರಣಕ್ಕೆ ಖಂಡನೆ: ಕಾಗವಾಡದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪೂಜೆ ಶೆಲ್ ನೆಕ್ಸ್ ಪ್ಲೋರರ್ಸ್ ಶಿಕ್ಷಕರ ವೃತ್ತಿಪರ ಅಭಿವೃದ್ಧಿ ತರಬೇತಿ ರಿಫ್ರೆಶರ್ ತರಬೇತಿ-೭  ಕಂಚವೀರ ನಗರ ನಿವಾಸಿಗಳ ಗ್ರಾಮ ಪಂ ವಿರುದ್ದ ಆಕ್ರೋಶ