LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಗ್ರಾಮೀಣ ಭಾಗದ ಚಟುವಟಿಕೆಗಳಿಗೆ ಸಮುದಾಯ ಭವನ ಸಹಕಾರಿ: ಈರಣ್ಣ ಕಡಾಡಿ

* ರಾಜಾಪೂರದಲ್ಲಿ ನೂತನ ಸಮುದಾಯ ಭವನ ಲೋಕಾರ್ಪಣೆ

* 30 ಲಕ್ಷ ರೂ. ವೆಚ್ಚದ ಸಮುದಾಯ ಭವನ

* ಶ್ರೀ ಚೂನಮ್ಮಾದೇವಿ ದೇವಸ್ಥಾನದ ಆವರಣದಲ್ಲಿ ನೂತನ ಭವನ ಉದ್ಘಾಟನೆ

ಮೂಡಲಗಿ:, ಗ್ರಾಮೀಣ ಭಾಗದ ಜನರಿಗೆ ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಸೂಕ್ತ ಸ್ಥಳಾವಕಾಶದ ಅಗತ್ಯವಿತ್ತು. ಸಂಸದರ ನಿಧಿಯನ್ನು ಸದ್ಬಳಕೆ ಮಾಡಿಕೊಂಡು ನಿರ್ಮಿಸಿರುವ ಈ ಸಮುದಾಯ ಭವನವು ಸಾರ್ವಜನಿಕ ಕಾರ್ಯಕ್ರಮಗಳಿಗೆ ಸಹಕಾರಿಯಾಗಲಿದೆ ಎಂದು ಮಾಜಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಶುಕ್ರವಾರ ಆ-೦೭ ರಂದು ರಾಜಾಪೂರ ಗ್ರಾಮದ ಚುನಿಮಟ್ಟಿಯ ಶ್ರೀ ಚೂನಮ್ಮಾದೇವಿ ದೇವಸ್ಥಾನದ ಆವರಣದಲ್ಲಿ ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ರೂ.೩೦ ಲಕ್ಷಗಳ ಅನುದಾನದಲ್ಲಿ ನೂತನವಾಗಿ ನಿರ್ಮಿಸಲಾದ ಸಮುದಾಯ ಭವನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

news_1786120290_0_887.webp

ಇದೇ ವೇಳೆ ಗ್ರಾಮದಲ್ಲಿ ಕೈಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾಹಿತಿ ನೀಡಿದ ಅವರು, ರಾಜಾಪೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಅಳವಡಿಕೆಗೆ ೫ ಲಕ್ಷ, ಶ್ರೀ ದುರ್ಗಾದೇವಿ ದೇವಸ್ಥಾನದ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ೫ ಲಕ್ಷ ಹಾಗೂ ೧ ಕೋಟಿ ರೂ.ಗಳ ಅನುದಾನದಲ್ಲಿ ರಾಜಾಪೂರ ಕಲ್ಲೋಳಿ ಕೊರೆವ್ವನ ಹಳ್ಳದ ಹತ್ತಿರ ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣ ಸೇರಿದಂತೆ ರಸ್ತೆಗಳ ಸುಧಾರಣೆಗೆ ಅನುದಾನ ನೀಡಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದರು.

ಈ ಸಮಾರಂಭದಲ್ಲಿ ಕಮಿಟಿ ಅಧ್ಯಕ್ಷ ಗೋಪಾಲ ಕಮತಿ, ವಿಠ್ಠಲ ಎಣ್ಣಿ, ಚಿನ್ನಪ್ಪ ಪಾಟೀಲ, ಲಕ್ಷ್ಮಣ ಗೌಡರ, ಅಜ್ಜಪ್ಪ ಪಂಡ್ರೋಳಿ, ಹಣಮಂತ ಹುದ್ದಾರ, ರಾಮಚಂದ್ರ ಕೊಡ್ಲಿ, ಕೆಂಪಣ್ಣ ಗಡಹಿಂಗ್ಲೇಜ್, ಸುರೇಶ ಬೈರುಗೋಳ, ಮುತ್ತೆಪ್ಪ ಜೆಟ್ಟೆನ್ನವರ, ಮುತ್ತೆಪ್ಪ ಜೋಕಾನಟ್ಟಿ, ಶಾಂತಪ್ಪ ಯಂಕ್ಸಂಬಿ ಸೇರಿದಂತೆ ದೇವಸ್ಥಾನ ಕಮಿಟಿ ಪದಾಧಿಕಾರಿಗಳು, ಸ್ಥಳೀಯ ಪ್ರಮುಖ ನಾಯಕರು ಹಾಗೂ ರಾಜಾಪೂರ ಮತ್ತು ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಭಾಗವಹಿಸಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶುಕ್ರವಾರ ಇಳಿಕೆ ಕಂಡರೂ ವಾರದ ಅಂತ್ಯಕ್ಕೆ ಲಾಭದಲ್ಲೇ ಮುಕ್ತಾಯಗೊಂಡ ಷೇರು ಮಾರುಕಟ್ಟೆ₹23,731 ಕೋಟಿ ವೆಚ್ಚದಲ್ಲಿ ಜೈವಿಕ ಅನಿಲ ಉತ್ಪಾದನೆಗೆ ಉತ್ತೇಜನಉದಯೋನ್ಮುಖ ಅವಕಾಶಗಳಿಗೆ ಯುವಕರನ್ನು ಸಿದ್ಧಪಡಿಸಲಿ ಶಿಕ್ಷಣ ವ್ಯವಸ್ಥೆಕಿತ್ತೂರು ಸಂಸ್ಥಾನದ ಭವ್ಯ ಪರಂಪರೆಯ ಸಂರಕ್ಷಣೆ: ಐತಿಹಾಸಿಕ ವೈಭವದ ಮರುಜೀವಕ್ಕೆ  ಬೇಕಾಗಿದೆ ಸಮಗ್ರ ಯೋಜನೆರಾಘವೇಂದ್ರ ಹಿಟ್ನಾಳ್‌ಗೆ ಸಚಿವ ಸ್ಥಾನ ಕೊಡಿ: ಕುರುಬ ಮುಖಂಡರ ಆಗ್ರಹಬಸರಕೋಡ ಮೂರ್ತಿ ಕಳ್ಳರು ದರ್ಗಾ ಜೇಲಿಗೆನಂಬರ್ ಪ್ಲೇಟ್ ಇಲ್ಲದ ವಾಹನಗಳ ವಿರುದ್ಧ ಅಥಣಿ ಪೊಲೀಸರ ಕಾರ್ಯಾಚರಣೆ – ಕಳವಾದ ಮೊಬೈಲ್‌ಗಳನ್ನು ಮಾಲೀಕರಿಗೆ ಹಸ್ತಾಂತರಗ್ರಾಮೀಣ ಭಾಗದ ಚಟುವಟಿಕೆಗಳಿಗೆ ಸಮುದಾಯ ಭವನ ಸಹಕಾರಿ: ಈರಣ್ಣ ಕಡಾಡಿಬೆಳಗಾವಿಯ ಸಾವಿರಾರು ಕೋಟಿ 'ಶಿವಂ ಅಸೋಸಿಯೇಟ್ಸ್' ವಂಚನೆ ಪ್ರಕರಣ: ಉದ್ಯಮಿ ಶಿವಾನಂದ ನೀಲಣ್ಣನವರ್‌ ಆಸ್ತಿಗಳ ಮೇಲೆ ಇಡಿ ತ್ರಿಮುಖ ಸಮರ!ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಂಪುಟ ಬದಲಾವಣೆ ಬಿರುಗಾಳಿ: ಬಂಡಾಯ ಶಮನಕ್ಕೆ 'ಹೈಕಮಾಂಡ್ ಶಸ್ತ್ರಚಿಕಿತ್ಯೆ'!