LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕಂಪನಿಗಳು ವಿದ್ಯಾರ್ಥಿಗಳಿಗೆ ಅಗತ್ಯ ಜ್ಞಾನ, ತರಬೇತಿ, ಅವಕಾಶ ಒದಗಿಸಿ

ಹೊಸ ಬ್ಯಾಚ್ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ ಸಲಹೆ

ಹಸಿರು ಕ್ರಾಂತಿ ವರದಿ ತುಮಕೂರು
ಶಿಕ್ಷಣ ಮತ್ತು ಉದ್ಯಮದ ನಡುವಿನ ಅಂತರ ಕಡಿಮೆ ಮಾಡಲು ಕಂಪನಿಗಳು ವಿದ್ಯಾರ್ಥಿಗಳಿಗೆ ಅಗತ್ಯ ಜ್ಞಾನದೊಂದಿಗೆ ತರಬೇತಿ ಹಾಗೂ ಅವಕಾಶಗಳನ್ನು ಒದಗಿಸಬೇಕು ಎಂದು ಡಿಸಿಎಂ ಹಾಗೂ ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಜಿ.ಪರಮೇಶ್ವರ ಸಲಹೆ ನೀಡಿದರು.

ನಗರದ ಹೊರವಲಯದ ಕ್ಯಾತಸಂದ್ರ ಟೋಲ್‌ಗೇಟ್ ಸಮೀಪದ ಸಿದ್ಧಾರ್ಥ ಸ್ಕೂಲ್ ಆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೋಮವಾರ ನಡೆದ ಹೊಸ ಬ್ಯಾಚ್ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಮಾತನಾಡಿದ ಅವರು, ಕೃತಕ ಬುದ್ಧಿಮತ್ತೆ (ಎಐ) ಕುರಿತು ವಿದ್ಯಾರ್ಥಿಗಳು ನಿರಂತರವಾಗಿ ಕಲಿಯುವುದರೊಂದಿಗೆ ಉದ್ಯಮದ ಅಗತ್ಯಕ್ಕೆ ತಕ್ಕಂತೆ ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಅಧ್ಯಾಪಕರು ಪಠ್ಯಪುಸ್ತಕಗಳ ಜತೆಗೆ ಸಂಶೋಧನಾ ಪತ್ರಿಕೆಗಳು ಹಾಗೂ ಹೊಸ ತಂತ್ರಜ್ಞಾನಗಳ ಮೂಲಕ ತಮ್ಮ ಜ್ಞಾನವನ್ನು ನಿರಂತರವಾಗಿ ಉನ್ನತೀಕರಿಸಿಕೊಂಡು, ವಿದ್ಯಾರ್ಥಿಗಳನ್ನು ಭವಿಷ್ಯದ ಸವಾಲುಗಳಿಗೆ ಸಿದ್ಧಪಡಿಸಬೇಕು ಎಂದು ಕರೆ ನೀಡಿದರು.

ಜಿಸಿಸಿ ಕೈಂಡ್ರಿಲ್ ಉದ್ಯಮದ ಉಪಾಧ್ಯಕ್ಷ ಪ್ರಶೋಭ್ ಚಂದ್ರಕಾಂತ ಮಾತನಾಡಿ, ಎಐ ಬೆಳವಣಿಗೆಯಿಂದ ಉದ್ಯೋಗಗಳ ಸ್ವರೂಪ ಬದಲಾಗಬಹುದೇ ಹೊರತು ಉದ್ಯೋಗಾವಕಾಶಗಳು ಸಂಪೂರ್ಣವಾಗಿ ಕಣ್ಮರೆಯಾಗುವುದಿಲ್ಲ. ತಾಂತ್ರಿಕ ಜ್ಞಾನದ ಜೊತೆ ಜೊತೆಗೆ ಕಥೆ ನಿರೂಪಣೆ, ಕುತೂಹಲ, ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ, ಸಹಾನುಭೂತಿ ಹಾಗೂ ಧೈರ್ಯದಂತಹ ಕೌಶಲ್ಯಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಐಬಿಎಂನ ಮಾಜಿ ಉಪಾಧ್ಯಕ್ಷ ಸತ್ಯೇನ್ ಪಾರಿಖ್ ಮಾತನಾಡಿ, ಎಐ, ರೊಬೋಟಿಕ್ಸ್ ಮತ್ತು ಯಾಂತ್ರಿಕೃತ ತಂತ್ರಜ್ಞಾನಗಳೊಂದಿಗೆ ಹೊಂದಿಕೊಳ್ಳಲು ನಿರಂತರ ಕಲಿಕೆ ಅಗತ್ಯವಿದೆ. ಸಂವಹನ ಕೌಶಲ್ಯ, ತಾಂತ್ರಿಕ ಜ್ಞಾನ, ತಂಡದ ಕೆಲಸ ಹಾಗೂ ಸಮಸ್ಯೆ ಪರಿಹರಿಸುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಕೆ.ಬಿ.ಲಿಂಗೇಗೌಡ, ಕುಲಸಚಿವ ಡಾ.ಅಶೋಕ್ ಮೆಹ್ತಾ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ಎಸ್‌ಎಸ್‌ಐಟಿ ಪ್ರಾಂಶುಪಾಲರಾದ ಡಾ.ಎಂ.ಎಂ.ನಡುಕಟ್ಟಿ ಸೇರಿದಂತೆ ವಿಶ್ವವಿದ್ಯಾಲಯ ಹಾಗೂ ಕಾಲೇಜಿನ ಅಧಿಕಾರಿಗಳು, ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಆಡಳಿತ ಮಂಡಳಿ ಸದಸ್ಯರು ಭಾಗವಹಿಸಿದ್ದರು.

ರಾಜ್ಯದ ಪ್ರಮುಖ ಎಂಜಿನಿಯರಿಂಗ್ ಸಂಸ್ಥೆಗಳ ಸಾಲಿನಲ್ಲಿ ಸಿದ್ಧಾರ್ಥ ಸ್ಕೂಲ್ ಆಫ್ ಇಂಜಿನಿಯರಿಂಗ್‌ನ್ನು ಬೆಳೆಸುವ ಗುರಿಯೊಂದಿಗೆ ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು.
-ಡಾ.ಜಿ.ಪರಮೇಶ್ವರ, ಉಪಮುಖ್ಯಮಂತ್ರಿಗಳು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
*ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ: ಲಕ್ಷ್ಮೀ ಹೆಬ್ಬಾಳಕರ್*ಅ.12ರಂದು ಅದ್ಧೂರಿಯಾಗಿ ಅಥಣಿ ತಾಲೂಕಿನ  ನಾಗನೂರ ಪಿ.ಕೆ. ಸರ್ಕಾರಿ ಶಾಲೆಗೆ ಶತಮಾನೋತ್ಸವ ಸಂಭ್ರಮ : ಸಚಿವ ಸವದಿ ಅವರೊಂದಿಗೆ ಪೂರ್ವಭಾವಿ ಚರ್ಚೆಸಚಿವ  ಸತೀಶ ಜಾರಕಿಹೋಳಿ ವಿರುದ್ದ ವ್ಯವಸ್ಥಿತ ಷಡ್ಯಂತ್ರವಾಗಿದೆ : ಸುಜಾತಾ ಬೇಟೆಗಾರ.*ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಜಿಲ್ಲೆಯ ಮುಖಂಡರು ಭಾಗಿ*ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ  : ವಿ.ಕೆ.ಬಸಪ್ಪ ಭೋವಿ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯಕ್ಕೆ ಆಗ್ರಹ | ಅ.11ರಂದು ಬಳ್ಳಾರಿಯಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ನೆರವು: ಶಿವಸಂಜೀವಿನಿ ಸುರಗಿರಿ ವತಿಯಿಂದ ಸಹಾಯಧನ ವಿತರಣೆಸಿರುಗುಪ್ಪದಲ್ಲಿ 8ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸಂಭ್ರಮ: ಗಡಿನಾಡ ಕನ್ನಡಿಗರ ಸವಾಲು ಮತ್ತು ನಾಡು-ನುಡಿ ರಕ್ಷಣೆಗೆ ಕರೆಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ  ಭಾಜನರಾದ ನಬಿಸಾಬ ಕುದ್ದುನ್ನವರಗಣೇಶೋತ್ಸವದಲ್ಲಿ ಹಳೆ ಸಂಪ್ರದಾಯಕ್ಕೆ ಮರುಜೀವ ನೀಡಿ: ಪಿಎಸ್‌ಐ ಪ್ರೀತಮ್ ನಾಯಕ