LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bagalkot

ಮೌಲ್ಯಗಳ ಅರಿವು ಮೂಡಿಸಲು ಸ್ಪರ್ಧೆ

ಜಮಖಂಡಿ: ಪ್ರಜಾಪ್ರಭುತ್ವ ಮೌಲ್ಯಗಳು, ಸಂಸದೀಯ ಕಲಾಪಗಳು, ಪ್ರಶ್ನೋತ್ತರ ಅವಧಿ, ಶೂನ್ಯ ವೇಳೆ, ಹೊಸ ಮಸೂದೆ ಮಂಡನೆ ಇತ್ಯಾದಿಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಯುವ ಸಂಸತ್ತು ಸ್ಪರ್ಧೆಗಳನ್ನು ಆಯೋಜಿಸಲಾಗುತ್ತದೆ ಎಂದು ಪ್ರಾಚಾರ್ಯ ಡಾ.ಟಿ.ಪಿ. ಗಿರಡ್ಡಿ ಹೇಳಿದರು.
  ಜಿಲ್ಲಾ ಪಂಚಾಯತಿ, ಶಾಲಾ ಶಿಕ್ಷಣ ಇಲಾಖೆ ಬಾಗಲಕೋಟೆ, ತಾಲ್ಲೂಕು ಪಂಚಾಯತಿ, ಶಾಲಾ ಶಿಕ್ಷಣ ಇಲಾಖೆ ಜಮಖಂಡಿ ಇವುಗಳ ಆಶ್ರಯದಲ್ಲಿ ಬಸವಜ್ಯೋತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪ್ರೌಢಶಾಲಾ ಮಕ್ಕಳಿಗಾಗಿ ಸೋಮವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಯುವ ಸಂಸತ್ತು ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
  ಸಭಾಧ್ಯಕ್ಷರು, ಸಭಾಪತಿ, ಕಾರ್ಯದರ್ಶಿ, ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ, ವಿವಿಧ ಸಚಿವರು, ಮಾರ್ಷಲ್‌ಗಳು ಇತ್ಯಾದಿಗಳ ಬಗ್ಗೆ ಮಕ್ಕಳಲ್ಲಿ ಅರಿವು ಇರಬೇಕೆಂಬ ಉದ್ದೇಶದಿಂದ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತದೆ ಎಂದರು.
  ಜಿ.ಜಿ.ಪ.ಪೂ ಕಾಲೇಜಿನ ಉಪಪ್ರಾಂಶುಪಾಲ ಮಹಾಂತೇಶ ನರನಗೌಡ್ರ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನರಸಿಂಹ ಕಲ್ಲೋಳ್ಳಿ, ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಕೆ. ಕರಡಿ, ಶಿಕ್ಷಕ ಸುಖದೇವ ಬಿದರಿ, ಮುಖ್ಯ ಶಿಕ್ಷಕ ಪಿ.ಐ. ಹೊಸಮಠ ಇದ್ದರು.
  ಶ್ರಾವಣಿ ಹಿರೇಮಠ ಪ್ರಾರ್ಥನೆ ಗೀತೆ ಹಾಡಿದರು. ಶಿಕ್ಷಕಿ ಅಶ್ವಿನಿ ಖಟಾವಕರ ಸ್ವಾಗತಿಸಿದರು. ಶಿಕ್ಷಣ ಸಂಯೋಜಕ ಮಹಾಂತೇಶ ಚವಾಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಸಂಗಮೇಶ ಪಾಟೀಲ ನಿರೂಪಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನವರಾತ್ರಿ ಉತ್ಸವದ ಅಂಗವಾಗಿ ದುರ್ಗಾದೌಡ ಕಾರ್ಯಕ್ರಮ ಪೂರ್ವಭಾವಿ ಸಭೆ ಶಿಕ್ಷಣದ ಜೊತೆ ಸಂಸ್ಕಾರಮುಖ್ಯ - ವೇ|| ರಾಚಯ್ಯ ಶಾಸ್ತ್ರಿಡಿಜಿಟಲ್‌ ಬೋಧನೆಯಿಂದ ಗುರು-ಶಿಷ್ಯರ ನಡುವೆ ಭೌತಿಕ ಅಂತರ ಕಡಿಮೆರಾಜ್ಯ ಸರ್ಕಾರದ ವಿರುದ್ಧ ಅಖಂಡ ಕರ್ನಾಟಕ ರೈತ ಸಂಘದಿಂದ ವಿನೂತನ ಭಿಕ್ಷಾಟನೆ ಚಳವಳಿ ೧೫೦ ಹಾಸಿಗೆಗಳ ನೂತನ ಆಸ್ಪತ್ರೆ ಮಂಜೂರು - ಮಾಜಿ ಶಾಸಕ ಆನಂದ ನ್ಯಾಮಗೌಡಮೌಲ್ಯಗಳ ಅರಿವು ಮೂಡಿಸಲು ಸ್ಪರ್ಧೆರಾಜ್ಯ ಸರ್ಕಾರದ ಪ್ರತಿ ಕೆಲಸದಲ್ಲಿ ಕೇಂದ್ರದ ಅನುಧಾನ ಇದೆ :ಸಂಸದ ವಿಶ್ವೇಶ್ವರ ಕಾಗೇರಿ ಪಾರಂಪರಿಕ ನಿಯಮಗಳ ಪಾಲನೆಯೊಂದಿಗೆ ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿಪಡಿಸಬೇಕಿದೆ: ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ್ಜಿಲ್ಲೆಯ ರೈತ ಉತ್ಪಾದಕ ಸಂಸ್ಥೆಗಳಿಗೆ ತರಬೇತಿ ಕಾರ್ಯಕ್ರಮ: ಆನ್‌ಲೈನ್ ವಹಿವಾಟಿಗೆ ತಾಂತ್ರಿಕ ಪ್ರೋತ್ಸಾಹಜಿಲ್ಲಾ ಬೋಧಕ ಆಸ್ಪತ್ರೆಯಲ್ಲಿ ಆರೋಗ್ಯ ಕಾರ್ಯಕ್ರಮ