ವಿಜಯಪುರ, ಅಕ್ಟೋಬರ್ 19: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ( ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಅವಾಚ್ಯ ಪದಬಳಸಿ ಭಾಷಣ ಮಾಡಿದ್ದ ಹಿನ್ನೆಲೆಯಲ್ಲಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಿಜಯಪುರದ ಗಾಂಧಿ ಚೌಕ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪಾಲಿಕೆ ನಾಮನಿರ್ದೇಶಿತ ಸದಸ್ಯ ಪರಶುರಾಮ ಹೊಸಮನಿ ಎಂಬುವರು ದೂರು ನೀಡಿದ್ದಾರೆ.
ಅಕ್ಟೋಬರ್ 15 ವಿಜಯಪುರದ ಸಿದ್ದೇಶ್ವರ ಗುಡಿ ಹತ್ತಿರ ನಡೆದ “ವಕ್ಫ್ ಹಠಾವೋ ದೇಶ ಬಚಾವೋ” ಕಾರ್ಯಕ್ರಮದಲ್ಲಿ ಭಾಷಣ ಮಾಡುವ ಭರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹ್ಮದ್ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅಲ್ಲದೇ ಮುಸ್ಲಿಂ ಧರ್ಮಕ್ಕೆ ನಿಂದನೆ ಮಾಡಿದ್ದಾರೆ
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.