Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇಶದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ:  ಸುಭಾಷ ಪಾಟೀಲ

ಬೆಳಗಾವಿ.ದೇಶದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಹಾಗೂ ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಹೇಳಿದರು .
     ಅವರು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾ ಅಭಿಯಾನ- 2026  ಅಂಗವಾಗಿ ಖಾನಾಪೂರ ತಾಲೂಕಿನ ಜಾಂಬೋಟಿ ಹತ್ತಿರದ ಕೈವಲ್ಯಂ ಯೋಗ ರಿಟ್ರೀಟ್ ಸೆಂಟರ್ ದಲ್ಲಿ ನಡೆದ ಬಿಜೆಪಿ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗದ ಎರಡು ದಿನಗಳ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ಯಾವುದೇ ಪಕ್ಷಗಳು ಸರ್ಕಾರ ನಡೆಸುವುದು ಮುಖ್ಯವಲ್ಲ, ಸರ್ಕಾರ ನಡೆಸುವ ಸಂದರ್ಭದಲ್ಲಿ ಪಕ್ಷದ ವಿಚಾರಧಾರೆ ದೇಶದ ಅಭಿವೃದ್ಧಿ ಸಿದ್ದಾಂತಗಳು ಮುಖ್ಯ ಇಡೀ ವಿಶ್ವದಲ್ಲಿ ಭಾರತ ದೇಶದ ಛಾಪನ್ನು ಮೂಡಿಸಿರುವ ಬಿಜೆಪಿ ಕೇಂದ್ರ ಸರ್ಕಾರ ರಾಷ್ಟ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದೆ ಎಂದು ಹೇಳಿದರು ಶಾಸಕ ವಿಠ್ಠಲ ಹಲಗೇಕರ ಮಾಜಿ ಶಾಸಕರಾದ ಮಹಾಂತೇಶ ದೊಡ್ಡಗೌಡರ  ಮಾತನಾಡಿ ವಿಚಾರಧಾರೆ ಸಿದ್ದಾಂತಗಳು ಇಲ್ಲದೆ ದಿಢೀರನೆ ಸರಕಾರವನ್ನು ಸ್ಥಾಪಿಸಿದ್ದ ಆಪ್, ಮತ್ತಿತರ ಪಕ್ಷಗಳ ಇತ್ತೀಚಿನ ಬೆಳವಣಿಗೆಗಳನ್ನು ಕಂಡಾಗ ಇವುಗಳು ಕೇವಲ ಕೆಲವೇ ವರ್ಷಗಳಿಗೆ ಮಾತ್ರ ಸೀಮಿತ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.  ವ್ಯಕ್ತಿಗಿಂತ ಪಕ್ಷ ಶ್ರೇಷ್ಠ ಪಕ್ಷಕ್ಕಿಂತ ದೇಶ ಪ್ರಮುಖವಾಗಿದೆ ಪಕ್ಷದ ಕಾರ್ಯಕರ್ತರಲ್ಲಿ ಅಭ್ಯಾಸ ವರ್ಗ ಕಾರ್ಯ ವೈಖರಿ ಜವಾಬ್ದಾರಿ ನೆನಪಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕಾಗಿದೆ. ಈ ಮೂಲಕ ತಳಮಟ್ಟದಲ್ಲಿ ಕಾರ್ಯಕರ್ತರ ಜವಾಬ್ದಾರಿಯನ್ನು ತಿಳಿ ಹೇಳುವುದು ಪ್ರತಿಯೊಬ್ಬರ ಹೊಣೆಯಾಗಿದೆ ಎಂದು ಹೇಳಿದರು ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಅರವಿಂದ ಪಾಟೀಲ, ಚಂದ್ರಶೇಖರ ಕವಟಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ ದೇಶಪಾಂಡೆ, ಮಲ್ಲಿಕಾರ್ಜುನ ಮಾದಮ್ಮನವರ, ಧನಶ್ರೀ ದೇಸಾಯಿ, ಪ್ರಕೋಷ್ಠಗಳ ಸಂಯೋಜಕ ಮಹೇಶ್ ಮೋಹಿತೆ, ಜಿಲ್ಲಾ ಉಪಾಧ್ಯಕ್ಷರಾದ ಪ್ರಮೋದ್ ಕೊಚೇರಿ,ವಿನಯ ಕದಂ, ಮಂಡಲ ಅಧ್ಯಕ್ಷ ಬಸವರಾಜ ಸಾಣಿಕೊಪ್ಪ, ಮುಖಂಡರಾದ ಸಂಜಯ ಕುಬಲ, ಪ್ರಶಾಂತ್ ಅಮ್ಮಿನಭಾವಿ ಹಾಗೂ ಪ್ರಮುಖರಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ