Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಕನ್ನಡ ಸಿಬ್ಬಂದಿ ನೇಮಕಕ್ಕೆ ಒತ್ತಾಯ

ಬೆಂಗಳೂರು, ಡಿಸೆಂಬರ್ 3: ಬೆಂಗಳೂರು ಸೇರಿದಂತೆ ಕರ್ನಾಟಕದ ಎಲ್ಲ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಕನ್ನಡ ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಗ್ರಹಿಸಿದ್ದು, ಈ ವಿಚಾರವಾಗಿ ಸರ್ಕಾರಕ್ಕೆ ಪತ್ರವನ್ನೂ ಬರೆದಿದೆ. ಇದರೊಂದಿಗೆ, ಐಟಿ ಬಿಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂಬ ಕೂಗಿನ ಬಳಿಕ ಇದೀಗ ಆಸ್ಪತ್ರೆಗಳಲ್ಲಿಯೂ ಕನ್ನಡ ಕಡ್ಡಾಯಕ್ಕೆ ಕೂಗು ಆರಂಭವಾದಂತಾಗಿದೆ.





ಆಸ್ಪತ್ರೆಗಳಲ್ಲಿ ನೇಮಕಾತಿ ಮಾಡುವಾಗ ಶೇ 60 ರಷ್ಟು ಕನ್ನಡಿಗರಿಗೆ ಆದ್ಯತೆ ನೀಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಒತ್ತಾಯಿಸಿದೆ. ಈ ವಿಚಾರವಾಗಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್​ಗೆ ಪತ್ರ ಬರೆದು ಮನವಿ ಮಾಡಿದ್ದಾರೆ.





ಎಲ್ಲಾ ಆಸ್ಪತ್ರೆಗಳಲ್ಲಿ ಆರೋಗ್ಯದ ಸಮಸ್ಯೆ ಬಗ್ಗೆ ಎಲ್ಲರಿಗೂ ಇಂಗ್ಲಿಷ್​​ನಲ್ಲಿ ಹೇಳಲು ಸಾಧ್ಯವಾಗುತ್ತಿಲ್ಲ. ಇದರಿಂದ ವೈದ್ಯರಿಗೆ ರೋಗಿಗಳ ಸಮಸ್ಯೆ ಏನೆಂಬುದು ಸರಿಯಾಗಿ ತಿಳಿಯದೇ ಯಡವಟ್ಟುಗಳಾಗುತ್ತಿವೆ. ಹೀಗಾಗಿ ಪ್ರಾದೇಶಿಕ ಭಾಷೆಯ ಜನರಿಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು. ಇದರಿಂದ ರೋಗಿಗಳ ಆರೋಗ್ಯಕ್ಕೂ ಒಳಿತು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆರೋಗ್ಯ ಸಚಿವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

 

ಆಸ್ಪತ್ರೆಗಳಲ್ಲಿ ಹೆಚ್ಚಿನ ನರ್ಸ್​ಗಳು, ವೈದ್ಯರಿಗೆ ​ಕನ್ನಡ ಬರುತ್ತಿಲ್ಲ. ಹೀಗಾಗಿ ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಪುರುಷೋತ್ತಮ ಬಿಳಿಮಲೆ ಆಗ್ರಹಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ