Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲೆಯ 1158 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣ:    ಸಂಸದ ಈರಣ್ಣ ಕಡಾಡಿ

ಬೆಳಗಾವಿ. ಜಿಲ್ಲೆಯ ರೈತರಿಗೆ ಹೆಚ್ಚಿನ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಜಿಲ್ಲೆಯ 1158 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಈಗಾಗಲೇ ಹಾರ್ಡ್ವೇರ್ ವಿತರಿಸಲಾಗಿದ್ದು, ಈ ಪೈಕಿ 1004 ಸಂಘಗಳಿಗೆ ಎಂಟರ್‌ಪ್ರೈಸ್ ರಿಸೋರ್ಸ್ ಪ್ಲಾನಿಂಗ್  ತಂತ್ರಾoಶದ  ಸೌಲಭ್ಯ ಒದಗಿಸಲಾಗಿದೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.


ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಬೆಳಗಾವಿ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಆಧುನೀಕರಣ ಮತ್ತು ಡಿಜಿಟಲೀಕರಣಕ್ಕೆ ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಜಿಲ್ಲೆಯ 743 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಈಗ 'ಸಾಮಾನ್ಯ ಸೇವಾ ಕೇಂದ್ರಗಳಾಗಿ' ಬದಲಾಗಿದ್ದು, ರೈತರಿಗೆ ಬ್ಯಾಂಕಿಂಗ್  ಜೊತೆಗೆ ವಿವಿಧ ಸರ್ಕಾರಿ ಸೇವೆಗಳನ್ನು ಒದಗಿಸುತ್ತಿವೆ.  ಸುಗಮ ಹಣ ವರ್ಗಾವಣೆಗಾಗಿ ಬೆಳಗಾವಿ ಡಿ.ಸಿ.ಸಿ ಬ್ಯಾಂಕ್ ಮೂಲಕ ಮೊದಲ ಹಂತದಲ್ಲಿ 100 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಮೈಕ್ರೋ-ಎಟಿಎಂ  ಸೌಲಭ್ಯ ನೀಡಲಾಗಿದೆ.


ರೈತರಿಗೆ ಅಗತ್ಯವಿರುವ ರಸಗೊಬ್ಬರ ಮತ್ತು ಕೃಷಿ ಪರಿಕರಗಳನ್ನು ಒಂದೇ ಸೂರಿನಡಿ ಒದಗಿಸಲು ಜಿಲ್ಲೆಯ 200 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು 'ಕಿಸಾನ್ ಸಮೃದ್ಧಿ ಕೇಂದ್ರ'ಗಳಾಗಿ ಕಾರ್ಯನಿರ್ವಹಿಸುತ್ತಿವೆ. ಬೆಳಗಾವಿ ಜಿಲ್ಲೆಯ 165 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಕೃಷಿ ಮೂಲಸೌಕರ್ಯ ನಿಧಿ ಯೋಜನೆಯಡಿ,  ಗೋದಾಮು ಅಥವಾ ಶೇಖರಣಾ ಸೌಲಭ್ಯ ನಿರ್ಮಿಸಲು ಬೆಳಗಾವಿ ಡಿಸಿಸಿ ಬ್ಯಾಂಕ್ ಮೂಲಕ ಸಾಲ ಒದಗಿಸಲಾಗಿದೆ.   ಜಿಲ್ಲೆಯ ಎಲ್ಲಾ 1158  ಪಿಕೆಪಿಎಸ್ ಗಳ ಸಿಬ್ಬಂದಿಗೆ ಡಿಜಿಟಲ್ ಅಕೌಂಟಿಂಗ  ಮತ್ತು ಹಣಕಾಸು ಕಾರ್ಯಾಚರಣೆಗಳ ಬಗ್ಗೆ ಈಗಾಗಲೇ ತರಬೇತಿ ನೀಡಿ ಸಜ್ಜುಗೊಳಿಸಲಾಗಿದೆ. ಜಿಲ್ಲೆಯ ಸಹಕಾರಿ ವಲಯವನ್ನು ಡಿಜಿಟಲೀಕರಣಗೊಳಿಸುವ ಮೂಲಕ ರೈತರಿಗೆ ಬ್ಯಾಂಕಿಂಗ್  ಮತ್ತು ಕೃಷಿ ಸೇವೆಗಳು ಸ್ಥಳೀಯವಾಗಿಯೇ ಸುಲಭವಾಗಿ ದೊರೆಯುವಂತಾಗಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಉತ್ತರಿಸಿದ್ದಾರೆಂದು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ