Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜುಲೈ 29ರೊಳಗೆ ಮತದಾರರ ವಿವರ ದೃಢೀಕರಿಸಿ: ಶಾಸಕ ಲಕ್ಷ್ಮಣ ಸವದಿ

ಅಥಣಿ : ಚುನಾವಣಾ ಆಯೋಗ ಹಮ್ಮಿಕೊಂಡಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನದಲ್ಲಿ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಭಾಗವಹಿಸಿ, ಮನೆಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಅಗತ್ಯ ದಾಖಲೆಗಳನ್ನು ನೀಡಿ ಸಹಕರಿಸಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಮನವಿ ಮಾಡಿದರು.
ಅವರು ತಮ್ಮ ನಿವಾಸದಲ್ಲಿ  ಮಾತನಾಡಿ, ಚುನಾವಣಾ ಆಯೋಗವು ಕರ್ನಾಟಕದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮವನ್ನು ಜೂನ್ 30ರಿಂದ ಜುಲೈ 29ರವರೆಗೆ ಹಮ್ಮಿಕೊಂಡಿದೆ. ಈ ಅವಧಿಯಲ್ಲಿ ಅಧಿಕಾರಿಗಳು ಹಾಗೂ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ಅಗತ್ಯ ನಮೂನೆಗಳನ್ನು (ಫಾರ್ಮ್) ವಿತರಿಸಲಿದ್ದಾರೆ. ಮತದಾರರು ಅವುಗಳನ್ನು ಸರಿಯಾಗಿ ಭರ್ತಿ ಮಾಡಿ ಸಂಬಂಧಿತ ಅಧಿಕಾರಿಗಳಿಗೆ ಸಲ್ಲಿಸಬೇಕು ಎಂದು ತಿಳಿಸಿದರು.
ಯಾರಾದರೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸದೇ ನಿರ್ಲಕ್ಷ್ಯ ವಹಿಸಿದರೆ, ಅವರ ಹೆಸರು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಇದೆ. ಇದರಿಂದ ಮುಂದಿನ ಚುನಾವಣೆಯಲ್ಲಿ ಮತದಾನದ ಹಕ್ಕು ಕಳೆದುಕೊಳ್ಳುವ ಪರಿಸ್ಥಿತಿ ಉಂಟಾಗಬಹುದು. ಆದ್ದರಿಂದ ಯಾವುದೇ ನಿರ್ಲಕ್ಷ್ಯ ತೋರದೆ ಎಲ್ಲರೂ ಈ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು.
ಮತದಾನದ ಹಕ್ಕು ಪ್ರತಿಯೊಬ್ಬ ಭಾರತೀಯ ನಾಗರಿಕನ ಅಮೂಲ್ಯ ಹಕ್ಕಾಗಿದ್ದು, ಅದನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಆದ್ದರಿಂದ ಜುಲೈ 29ರೊಳಗೆ ಅಗತ್ಯ ನಮೂನೆಗಳನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಖಚಿತಪಡಿಸಿಕೊಳ್ಳಬೇಕು. ಮನೆಗೆ ಭೇಟಿ ನೀಡುವ ಬಿಎಲ್‌ಒಗಳಿಗೆ ಸಂಪೂರ್ಣ ಸಹಕಾರ ನೀಡುವಂತೆ ಶಾಸಕ ಲಕ್ಷ್ಮಣ ಸವದಿ ಸಾರ್ವಜನಿಕರಲ್ಲಿ ಮನವಿ ಮಾಡಿದರು..

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಲತವಾಡದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ: ಬಿಜೆಪಿ ಮುಖಂಡರಿಂದ ಮನವಿಮತದಾರರ ಪಟ್ಟಿ ಪರಿಷ್ಕರಣೆಗೆ ಸಹಾಯವಾಣಿ ಕೇಂದ್ರಗಳ ಸ್ಥಾಪನೆ - ಎಸಿ"ಧಾರ್ಮಿಕ ಆಚರಣೆಗಳಿಂದ ಮಾತ್ರ ಮನಸ್ಸಿನ ನೆಮ್ಮದಿ ಶಾಂತಿ ದೊರಕುತ್ತದೆ"ಬಸ್ ನಿಲ್ದಾಣದ ಗುಂಡಿ ಮುಚ್ಚಲು ಆಗ್ರಹಸ್ವ  ಉದ್ಯೋಗ ಪ್ರೇರಣಾ ಶಿಬಿರ ಕಾರ್ಯಕ್ರಮ.22 ವರ್ಷದ ಸೇನೆಯ ಸೇವೆ ಹೆಮ್ಮೆ ತಂದಿದೆ :ರಮೇಶ ನೀರಲಗಿ ಮಳೆಗಾಲದಲ್ಲಿ ಕುಡಿಯುವ ನೀರು, ಸ್ವಚ್ಛತೆ ಹಾಗೂ ಆರೋಗ್ಯಕ್ಕೆ ಆದ್ಯತೆ ನೀಡಿ ಅಧಿಕಾರಿಗಳಿಗೆ ಸೂಚನೆ ಮಳೆಗಾಲದಲ್ಲಿ ಕುಡಿಯುವ ನೀರು, ಸ್ವಚ್ಛತೆ ಹಾಗೂ ಆರೋಗ್ಯಕ್ಕೆ ಆದ್ಯತೆ ನೀಡಿ ಅಧಿಕಾರಿಗಳಿಗೆ ಸೂಚನೆ ಜುಲೈ 29ರೊಳಗೆ ಮತದಾರರ ವಿವರ ದೃಢೀಕರಿಸಿ: ಶಾಸಕ ಲಕ್ಷ್ಮಣ ಸವದಿಜನರ ಅರೋಗ್ಯ ರಕ್ಷಣೆ ವೈದ್ಯರ ಅದ್ಯಕರ್ತವ್ಯ :ಡಾ. ಪ್ರಕಾಶ ಹಳ್ಯಾಳ