Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೊಂದಲ ಗೂಡಾದ ವಸತಿ ಶಾಲೆಗಳ ಸೀಟು ಹಂಚಿಕೆ : ಸಾರ್ವಜನಿಕರ ಪರದಾಟ ವಿದ್ಯಾರ್ಥಿಗಳ ಸಂಕಟ 

ಬಳ್ಳಾರಿ ಜೂನ್ 18..: ಮೊರಾರ್ಜಿ ದೇಸಾಯಿ, ಗಾಂಧಿ ತತ್ವ, ನವೋದಯ  ಸೇರಿದಂತೆ ಕೇಂದ್ರ ಸರ್ಕಾರಿ ಸ್ವಾಮ್ಯದ ವಸತಿ ಶಾಲೆಗಳಿಗೆ ಪ್ರವೇಶವನ್ನು ಬಯಸಿ ನೂರಾರು ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದರು, ಅಷ್ಟೇ ಅಲ್ಲದೆ 6, 7 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳು  ವರ್ಗಾವಣೆಯನ್ನು  ಬಯಸಿ  ಹಲವಾರು ಅರ್ಜಿಗಳನ್ನು ಆಯಾ ಮುಖ್ಯ ಉಪಾಧ್ಯಾಯರಲ್ಲಿ ಸಲ್ಲಿಸಿಕೊಂಡಿದ್ದು ಅವುಗಳನ್ನು ಇಂದು ಸಹಾಯಕ ಆಯುಕ್ತರ ಕಚೇರಿಯಲ್ಲಿ ಸಭೆ ನಡೆಸುವ ಮೂಲಕ ಇತ್ಯರ್ಥಪಡಿಸಲಾಯಿತು.


 ಆದರೆ ಈ ವಿದ್ಯಾರ್ಥಿಗಳ ಅರ್ಜಿಗಳನ್ನು ಇಂದು  ಇತ್ಯರ್ಥಪಡಿಸದೆ ಮತ್ತೆ ಮುಂದಿನ ವಾರಕ್ಕೆ ಸಭೆಯನ್ನು ಮುಂದೂಡಿರುವುದಾಗಿ ಸಾಯಕ ಆಯುಕ್ತರು ಸಭೆಯನ್ನು ಮುಕ್ತಾಯಗೊಳಿಸಿದರು. ಇದರಿಂದ ಸಹಾಯಕ ಆಯುಕ್ತರ ಕಚೇರಿಗೆ ಬಂದಿದ್ದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಗೊಂದಲದಿಂದ ಮರಳಿದರು.


 ಹೀಗೆ ಪದೇ ಪದೇ ಹಲವಾರು ಸಲ ಕಚೇರಿಗೆ ಅಲೆದಾಡಿಸುತ್ತಿರುವ ಪ್ರಾಂಶುಪಾಲರು ಮತ್ತು ಸಂಬಂಧಿಸಿದ ಅಧಿಕಾರಿಗಳನ್ನು ಪೋಷಕರು ತರಾಟೆಗೆ ತೆಗೆದುಕೊಂಡರು. ದಲಿತ  ಮುಖಂಡರು ಮತ್ತು ಹಿರಿಯ ಪತ್ರಕರ್ತರಾದ  ಚಳ್ಳಗುರ್ಕಿ ಸೋಮಶೇಖರ್ ಅವರು ಹೀಗೆ ಪದೇ ಪದೇ ವಿದ್ಯಾರ್ಥಿಗಳನ್ನು ಮತ್ತು ಪೋಷಕರ ಕಚೇರಿಗೆ ಅಲೆದಾಟ ತಪ್ಪಿಸುವಂತೆ  ವಸತಿ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಪ್ರಾಂಶುಪಾಲರನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡು ಕೂಡಲೇ ಪ್ರವೇಶ ಮತ್ತು ವರ್ಗಾವಣೆಯ ಸಮಸ್ಯೆಯನ್ನು ಪರಿಹರಿಸಬೇಕೆಂದು ಒತ್ತಾಯಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ