Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕಂಪ್ಲಿಯ ಮಂಗಳಮುಖಿ ರಾಜಮ್ಮಗೆ ಅಭಿನಂದನೆ





ಕಂಪ್ಲಿ: 11., ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಸುಗ್ಗೇನಹಳ್ಳಿ ಗ್ರಾಮದ ನಿವಾಸಿ ಮಂಗಳ ಮುಖಿ ಪಿ.ರಾಜಮ್ಮರವರು ಭೀಕ್ಷೆ ಬೇಡಿದ ಉಳಿತಾಯದ ಹಣದಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಟಿ-ಶರ್ಟ್, ಪ್ಯಾಂಟ್‌, ಬಟ್ಟೆಗಳನ್ನು ಕೊಡುಗೆಯಾಗಿ ನೀಡಿದ ಪರೋಪಕಾರಿ ಕಾರ್ಯವನ್ನು ಮೆಚ್ಚಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಪತ್ರದ ಮೂಲಕ ಅಭಿನಂದಿಸಿದ್ದಾರೆ.


ಸದರಿ ರಾಜಮ್ಮನವರ ಸಮಾಜ ಮುಖಿ ಕಾರ್ಯವನ್ನು ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ಮುಖ್ಯಮಂತ್ರಿ ಸಿದ್ದರಾಮಯ್ಯರವರ ಗಮನಕ್ಕೆ ತಂದಿದ್ದರು!


*ಮುಖ್ಯಮಂತ್ರಿ ಸಿದ್ದರಾಮಯ್ಯರವರ ಅಭಿನಂದನಾ ಪತ್ರದಲ್ಲಿ*


ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲ್ಲೂಕಿನ ಸುಗ್ಗೇನಹಳ್ಳಿ ಗ್ರಾಮದ ನಿವಾಸಿ ಶ್ರೀ ಪಿ.ರಾಜಮ್ಮ ಅವರ ಸಾಮಾಜಿಕ ಕಳಕಳಿ ಅನನ್ಯವಾದುದು, ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರು ಎದುರಿಸುವ ಸವಾಲುಗಳು ಮತ್ತು ಹೋರಾಟದ ಬದುಕಿನ ನಡುವೆಯೂ ತಮ್ಮ ಸಮಾಜ ಸೇವೆ ಆದರ್ಶಪ್ರಾಯವಾಗಿದೆ, ಬಡತನದ ಕಾರಣದಿಂದ ಶಾಲೆಗೆ ಹೋಗಲು ಸಾಧ್ಯವಾಗದೇ ಶಿಕ್ಷಣದಿಂದ ವಂಚಿತರಾಗಿದ್ದ ರಾಜಮ್ಮನವರು  ಮಕ್ಕಳಿಗೆ, ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಸಮವಸ್ತ್ರ, ಬಟ್ಟೆ, ಪುಸ್ತಕ ಹಾಗೂ ಲೇಖನ ಸಾಮಗ್ರಿಗಳನ್ನು ನೀಡುತ್ತಿರುವ ತಮ್ಮ ಉದಾತ್ತ ಚಿಂತನೆ ಶ್ಲಾಘನೀಯವಾದುದು.


ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರುವ ಪಿ. ರಾಜಮ್ಮ ಅವರ ನಿಸ್ವಾರ್ಥ ಸೇವೆ ಸಮಾಜಕ್ಕೆ ಮಾದರಿಯಾಗಿದೆ. ರಾಜಮ್ಮನವರ ಸಮಾಜಮುಖಿ ಕಾರ್ಯಕ್ಕೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆoದು ತಿಳಿಸಿರುತ್ತಾರೆ,






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ