LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು; ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : 
ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ ಭಾರತೀಯ ಜನತಾ ಪಾರ್ಟಿ ಮಹಿಳಾ ಮೀಸಲಾತಿ ವಿಷಯವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಮಹಿಳಾ ಪ್ರಧಾನಿ (ಇಂದಿರಾ ಗಾಂಧಿ) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ ರಾಷ್ಟ್ರಪತಿ (ಪ್ರತಿಭಾ ಪಾಟೀಲ) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ ಮುಖ್ಯಮಂತ್ರಿ (ಸುಚೇತಾ ಕೃಪಾಲಿನಿ, 1963 ಉತ್ತರ ಪ್ರದೇಶ) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ ಮಂತ್ರಿ (ರಾಜಕುಮಾರಿ ಅಮೃತ ಕೌರ್, 1947) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ MP (ರಾಧಾಬಾಯಿ ಸುಬಾರಾಯನ್, 1952) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ MLA (ಮುತ್ತುಲಕ್ಷ್ಮೀ ರೆಡ್ಡಿ, 1927) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ ಪಂಚಾಯತ್ ಅಧ್ಯಕ್ಷೆ  ಮಾಡಿದ್ದು ಕಾಂಗ್ರೆಸ್. ಇವೆಲ್ಲವೂ ಕಾಂಗ್ರೆಸ್ ನೀಡಿದ ಅವಕಾಶಗಳೇ. ಇದು ಮಹಿಳಾ ಪರ ನಿಲುವಿನ ಜೀವಂತ ಸಾಕ್ಷಿ. ನಮ್ಮ ಗ್ಯಾರಂಟ ಯೋಜನೆಗಳು ಸಹ ಮಹಿಳಾ ಸಬಲೀಕರಣದ ಪರವಾಗಿಯೇ ಇದೆ ಎಂದು ಹೇಳಿದರು. 
ಇಂದು ಬಿಜೆಪಿ ನಮ್ಮ ಮೇಲೆ ಮಾಡುತ್ತಿರುವ “ಮಹಿಳಾ ವಿರೋಧಿ” ಎಂಬ ಆರೋಪ ಸಂಪೂರ್ಣ ಸುಳ್ಳು ಮತ್ತು ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ. ಇದು ಪೂರ್ವಯೋಜಿತ. ಮಹಿಳಾ ಮೀಸಲಾತಿ ಜೊತೆಗೆ ಕ್ಷೇತ್ರ ವಿಂಗಡಣೆ ವಿಷಯವನ್ನೂ ಜೋಡಿಸಿದ್ದರಿಂದ ಸೋಲಾಯಿತು. ಬಿಜೆಪಿಗೆ ಸೋಲುವುದು ಮೊದಲೇ ಗೊತ್ತಿತ್ತು. ಹಾಗಾಗಿ ಕಾಂಗ್ರೆಸ್ ಮೇಲೆ ಆರೋಪ ಹೊರಿಸಲು ವ್ಯವಸ್ಥಿತಿ ಕುತಂತ್ರ ಮಾಡಿದೆ ಎಂದು ಅವರು ಆರೋಪಿಸಿದರು.
ಮಹಿಳಾ ಮೀಸಲಾತಿ ಬೇರೆ ವಿಷಯ, ಕ್ಷೇತ್ರ ಮರುವಿಂಗಡಣೆ ಬೇರೆ ವಿಷಯ. ಈ ಎರಡನ್ನೂ ಒಟ್ಟಿಗೆ ಕಟ್ಟಿ ಮಸೂದೆ ತಂದು ಗೊಂದಲ ಸೃಷ್ಟಿಸಿರುವುದು ಬಿಜೆಪಿಯ ರಾಜಕೀಯ ಲೆಕ್ಕಾಚಾರ. ಹೀಗಾಗಿ ಮಸೂದೆ ಸೋಲಿಗೆ ಕಾರಣ ಕಾಂಗ್ರೆಸ್ ಅಲ್ಲ, ಅನಗತ್ಯ ಷರತ್ತುಗಳನ್ನು ಸೇರಿಸಿ ಅದನ್ನು ಸಂಕೀರ್ಣಗೊಳಿಸಿದ ಬಿಜೆಪಿ ಕ್ರಮವೇ ನಿಜವಾದ ಕಾರಣ. ಬಿಜೆಪಿಗೆ ನಿಜವಾಗಿಯೂ ಮಹಿಳಾ ಸಬಲೀಕರಣದ ಬಗ್ಗೆ ಕಾಳಜಿ ಇದ್ದರೆ, ಮೀಸಲಾತಿಯನ್ನು ತಕ್ಷಣ ಜಾರಿಗೆ ತರಬೇಕಿತ್ತು. ಆದರೆ ಮಹಿಳೆಯರ ಹಕ್ಕನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲಾಗಿದೆ. ಕಾಂಗ್ರೆಸ್‌ನ ನಿಲುವು ಸ್ಪಷ್ಟ, ಮಹಿಳೆಯರಿಗೆ ತಕ್ಷಣ ನ್ಯಾಯ ಸಿಗಬೇಕು. ಮೀಸಲಾತಿ ಯಾವುದೇ ಷರತ್ತುಗಳಿಲ್ಲದೆ ಜಾರಿಯಾಗಬೇಕು ಎಂದು ಹೆಬ್ಬಾಳಕರ್ ಹೇಳಿದರು
ನಾವು ಯಾವತ್ತೂ ಮಹಿಳಾ ಪರ. ನಮ್ಮ ಎಲ್ಲ ಯೋಜನೆಗಳೂ ಮಹಿಳಾಪರ. ಆದರೆ ಭೂತದ ಬಾಯಲ್ಲಿ ಭಗವದ್ಗೀತೆ ಎನ್ನುವಂತೆ ಬಿಜೆಪಿಯವರು ವರ್ತಿಸುತ್ತಿದ್ದಾರೆ. ಹತ್ರಾಸ್ ಘಟನೆ, ಮಣಿಪುರ ಘಟನೆ ಅವರ ಕಣ್ಣಿಗೆ ಏಕೆ ಕಾಣುತ್ತಿಲ್ಲ? ಈ ಎರಡೂ ಸಂದರ್ಭದಲ್ಲಿ ಅವರು ಹೇಗೆ ನಡೆದುಕೊಂಡರು? ಮಹಿಳಾ ಅಥ್ಲಿಟ್ ಗಳು ಎಷ್ಟು ಹಿಂಸೆ ಅನುಭವಿಸಿದರು? ಮಹಿಳೆಯನ್ನು ಮನೆಗೆ ಕಟ್ಟಿಹಾಕುವ ಮನುಸ್ಮೃತಿ ಮನೋಭಾವ ಬಿಜೆಪಿಯದ್ದು. ಬಹುಮತವಿಲ್ಲ ಎಂದು ಗೊತ್ತಿದ್ದರೂ ಮಂಡಿಸುವ ಮೂಲಕ ಆಟ ಆಡುತ್ತಿದೆ. ಕಾಂಗ್ರೆಸ್ ಪಕ್ಷವನ್ನು ಕೆಟ್ಟದಾಗಿ ಬಿಂಬಿಸಲು ಪೂರ್ವಭಾವಿಯಾಗಿ ತಯಾರಿ ಮಾಡಿಕೊಂಡಿದ್ದರು ಎಂದರು. 
 
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಹಾಗೂ ಮಹಿಳಾ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು. 
 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್