Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Belagavi

ಪ್ರಜಾಪ್ರಭುತ್ವ ಅಸ್ಥಿರಗೊಳಿಸುತ್ತಿರುವ ಕಾಂಗ್ರೆಸ್ :ಸುಭಾಷ ಪಾಟೀಲ 

ಬೆಳಗಾವಿ.,ದೇಶದಲ್ಲಿ ಸಂವಿಧಾನ ಬಾಹಿರ ಹಾಗೂ ಕಾನೂನು ಬಾಹಿರ ಚಟುವಟಿಕೆಗಳ ಮೂಲಕ ಅಶಾಂತಿ ಮತ್ತು ಹಿಂಸೆಯನ್ನು ಪ್ರಚೋದಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಪಕ್ಷ ಹಾಗೂ ಅದರ ನಾಯಕರು ಪ್ರಯತ್ನಿಸುತ್ತಿದ್ದಾರೆ  ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢವಾಗಿದ್ದು, ಜನರು ಜಾಗೃತರಾಗಿದ್ದಾರೆ. ಆದರೆ ಅಧಿಕಾರ ಕಳೆದುಕೊಂಡ ಹತಾಶೆಯಿಂದ ಕಾಂಗ್ರೆಸ್ ದೇಶದ ಹಿತಾಸಕ್ತಿಗೆ ಧಕ್ಕೆ ತರುವಂತಹ ಚಟುವಟಿಕೆಗಳಲ್ಲಿ ತೊಡಗಿದೆ
ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಆಶಯಗಳನ್ನು ಈಡೇರಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ಆದರೆ ಕಾಂಗ್ರೆಸ್ ಪಕ್ಷದ ನಾಯಕರು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಕೆಲವು ನಾಯಕರು ವಿದೇಶಿ ಶಕ್ತಿಗಳ ಪ್ರಭಾವಕ್ಕೆ ಒಳಗಾಗಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ 
ಇವಿಎಂ, ಚುನಾವಣಾ ಆಯೋಗ, ಸುಪ್ರೀಂ ಕೋರ್ಟ್, ಸಿಬಿಐ ಸೇರಿದಂತೆ ಸಂವಿಧಾನಬದ್ಧ ಸಂಸ್ಥೆಗಳ ಬಗ್ಗೆ ಜನರಲ್ಲಿ ಅಪನಂಬಿಕೆ ಮೂಡಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಚುನಾವಣೆಯಲ್ಲಿ ಸೋತಾಗ ಇವಿಎಂ ದೋಷಪೂರಿತ ಎಂದು ಆರೋಪಿಸುವ ಕಾಂಗ್ರೆಸ್ ನಾಯಕರು, ತಾವು ಗೆದ್ದಾಗ ಅದೇ ಇವಿಎಂ ವ್ಯವಸ್ಥೆಯನ್ನು ಸಮರ್ಥಿಸಿಕೊಳ್ಳುತ್ತಾರೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಸುಭಾಷ ಪಾಟೀಲ  ಹೇಳಿದರು.
       ಅವರ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಆಯೋಜನೆ ಮಾಡಲಾಗಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
     ಮಾಜಿ ಶಾಸಕ ಸಂಜಯ ಪಾಟೀಲ ಮಾತನಾಡಿ ದೇಶದಲ್ಲಿ ಕಾನೂನುಬದ್ಧವಾಗಿ ಹೋರಾಟ ನಡೆಸಲು ಮತ್ತು ಸಂವಿಧಾನಾತ್ಮಕವಾಗಿ ಧ್ವನಿ ಎತ್ತಲು ಅವಕಾಶವಿದೆ. ಕಾಂಗ್ರೆಸ್‌ಗೆ ಯಾವುದೇ ಅನ್ಯಾಯವಾಗಿದ್ದರೆ ಸುಪ್ರೀಂ ಕೋರ್ಟ್ ಅಥವಾ ಚುನಾವಣಾ ಆಯೋಗದ ಮೊರೆ ಹೋಗಬಹುದು. ಆದರೆ ಸೂಕ್ತ ದಾಖಲೆಗಳಿಲ್ಲದೆ ‘ವೋಟ್ ಚೋರಿ’ ಹಾಗೂ ಎಸ್‌ಐಆರ್ ಪ್ರಕ್ರಿಯೆ ಸರಿಯಿಲ್ಲ ಎಂದು ಆರೋಪಿಸುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸಲಾಗುತ್ತಿದೆ. ಸುಪ್ರೀಂ ಕೋರ್ಟ್ ಹಾಗೂ ಪ್ರಧಾನಮಂತ್ರಿಯವರ ನಿವಾಸದ ಎದುರು ಧರಣಿ, ಮೆರವಣಿಗೆ ನಡೆಸುವುದು ಪ್ರಜಾಪ್ರಭುತ್ವದ ನಿಯಮಾವಳಿಗಳಿಗೆ ವಿರುದ್ಧವಾಗಿದೆ 
ಮತದಾರರ ಪಟ್ಟಿ ಪರಿಷ್ಕರಣೆ ನಿರಂತರ ಪ್ರಕ್ರಿಯೆಯಾಗಿದ್ದು, ಮೃತಪಟ್ಟವರು, ಶಾಶ್ವತವಾಗಿ ಸ್ಥಳಾಂತರಗೊಂಡವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಹೆಸರು ಹೊಂದಿರುವವರ ಹೆಸರುಗಳನ್ನು ತೆಗೆದುಹಾಕುವುದು ಸಹಜ. ನೈಜ ಮತದಾರರ ಹೆಸರು ಬಿಟ್ಟುಹೋಗಿದ್ದರೆ ಅದನ್ನು ಮರುಸೇರ್ಪಡೆ ಅಥವಾ ತಿದ್ದುಪಡಿ ಮಾಡಿಸಿಕೊಳ್ಳಲು ಅವಕಾಶವಿದೆ
ಶ್ರೀಲಂಕಾ, ಬಾಂಗ್ಲಾದೇಶ, ನೇಪಾಳ ಹಾಗೂ ಫ್ರಾನ್ಸ್ ಸೇರಿದಂತೆ ವಿವಿಧ ದೇಶಗಳಲ್ಲಿ ಆಡಳಿತ ವ್ಯವಸ್ಥೆಯನ್ನು ಅಸ್ಥಿರಗೊಳಿಸಿದ ರೀತಿಯಲ್ಲೇ ಭಾರತದಲ್ಲಿಯೂ ಅಶಾಂತಿ ಸೃಷ್ಟಿಸಲು ವಿದೇಶಿ ಶಕ್ತಿಗಳೊಂದಿಗೆ ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಪ್ರಯತ್ನಿಸುತ್ತಿವೆ ಎಂದು ಹೇಳಿದರು.
    ಈ ಸಂದರ್ಭದಲ್ಲಿ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ದೇಶಪಾಂಡೆ, ಮಲ್ಲಿಕಾರ್ಜುನ ಮಾದಮ್ಮನವರ,ಪ್ರಕೋಷ್ಠಗಳ ಜಿಲ್ಲಾ ಸಂಯೋಜಕ ಮಹೇಶ್ ಮೊಹಿತೆ, ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಈರಣ್ಣ ಅಂಗಡಿ,ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಸೋನಾಲಿ ಸರ್ನೊಬತ್, ಸುರೇಶ ಪಾಟೀಲ  ಹಾಗೂ ಇತರರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಆಯೋಜನೆ: ಸಚಿವ ಸಂತೋಷ ಎಸ್. ಲಾಡ್ಸಮಾಜದ ಮುಖ್ಯ ವಾಹಿನಿಗೆ ವಿಕಲ ಚೇತನರು ಮುಂದೆ ಬರಬೇಕು : ಬಾಲಚಂದ್ರ ಜಾರಕಿಹೊಳಿಶ್ರೀ ಸಾಯಿ ಕಾಲೇಜಿನ ಶಿಬಿರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಕನ್ನಡ ಕಟ್ಟುವಲ್ಲಿ ಧಾರವಾಡದ ಧುರೀಣರ ಕೊಡುಗೆ ಅಪಾರ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ವಿಧಾನ ಪರಿಷತ್ ಸದಸ್ಯ  ಸ್ಥಾನಕ್ಕೆ ಐದನೇ ಬಾರಿ ಆಯ್ಕೆಯಾದ ಶಶೀಲ್. ಜಿ. ನಮೋಶಿ ಅವರಿಗೆ ಹೊಸಪೇಟೆ ಯಲ್ಲಿ ಅದ್ಧೂರಿ ಸ್ವಾಗತ*ಬಿಜೆಪಿ ಮೋರ್ಚಾ ಪದಾಧಿಕಾರಿಗಳ ಮಹತ್ವದ ಸಭೆ*ಮಹಿಳಾ ಸಾಹಿತಿಗಳ ನಿರ್ಲಕ್ಷ್ಯ ಖಂಡನೀಯ-ಡಾ.ಸುಜಾತಾ ಚಲವಾದಿವಿಶ್ವವಿದ್ಯಾಲಯ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವಿಶ್ವವಿದ್ಯಾಲಯ ಬಾಸ್ಕೆಟ್‌ಬಾಲ್ ತಂಡಕ್ಕೆ ತನ್ವೀರ್ ಆಯ್ಕೆಶ್ರೀ ವಿಶ್ವಗುರು ಸೌಹಾರ್ದ ಸೊಸೈಟಿ  ಅಧ್ಯಕ್ಷರಾಗಿ ಅರವಿಂದ ಬಡಕುಂದ್ರಿ, ಉಪಾಧ್ಯಕ್ಷರಾಗಿ ಬರಮಪ್ಪ ನಾಗನೂರ ಆಯ್ಕೆ.ಹತ್ತು ವರ್ಷಗಳಿಂದ ಪರಿಹಾರಕ್ಕಾಗಿ ಹೋರಾಟ: 95 ರೈತರಿಗೆ ₹54 ಕೋಟಿ ರೂ. ವಿತರಣೆ